Featured

ಉಡುಪಿ:  ಈ ಬಾರಿಯ ಚುನಾವಣೆ ಹಿಂದುತ್ವ, ಅಭಿವೃದ್ಧಿ ಮತ್ತು ರಾಷ್ಟ್ರೀಯತೆ ವಿಚಾರದಲ್ಲಿ ನಡೆಯುತ್ತದೆ : ಕೋಟ ಶ್ರೀನಿವಾಸ ಪೂಜಾರಿ – Vishwanews24

ಉಡುಪಿ:  ಈ ಬಾರಿಯ ಚುನಾವಣೆಯು ಹಿಂದುತ್ವ, ಅಭಿವೃದ್ಧಿ ಮತ್ತು ರಾಷ್ಟ್ರೀಯತೆ ವಿಚಾರದಲ್ಲಿ ನಡೆಯುತ್ತದೆ : ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಲೋಕಸಭಾ ಚುನಾವಣೆಯು ರಾಷ್ಟ್ರೀಯತೆ, ರಾಷ್ಟ್ರದ ಭದ್ರತೆ ವಿಚಾರದಲ್ಲಿ ನಡೆಯುತ್ತದೆ. ಹಿಂದುತ್ವ ನಮ್ಮ ಪಕ್ಷದ ಅಜೆಂಡಾ ಹಾಗೂ ಅಭಿವೃದ್ಧಿಯೇ ನಮ್ಮ ಮಂತ್ರ. ಆದುದರಿಂದ ಈ ಬಾರಿಯ ಚುನಾವಣೆಯು ಹಿಂದುತ್ವ, ಅಭಿವೃದ್ಧಿ ಮತ್ತು ರಾಷ್ಟ್ರೀಯತೆ ವಿಚಾರದಲ್ಲಿ ನಡೆಯುತ್ತದೆ. ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಪಕ್ಷವು ದಾಖಲೆ ಅಂತರದಲ್ಲಿ ಗೆಲುವು ಸಾಧಿಸಿ, ದೇಶದಲ್ಲಿ ಬಹುಮತ ಪಡೆಯಲಿದೆ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಉಡುಪಿ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಅವರು ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 1838 ಬೂತ್‌ಗಳಿವೆ. 445 ಶಕ್ತಿ ಕೇಂದ್ರಗಳು, 79 ನವ ಶಕ್ತಿ ಕೇಂದ್ರಗಳಿವೆ. ಸುಮಾರು 25-30 ಸಾವಿರ ತಳಮಟ್ಟದ ಕಾರ್ಯಕರ್ತರ ಪಡೆ ಇದೆ. ಶಾಸಕರು, ಮಾಜಿ ಶಾಸಕರು, ಮುಖಂಡರು ಒಟ್ಟಾಗಿ ಉಡುಪಿ -ಚಿಕ್ಕಮಗಳೂರು ಕ್ಷೇತ್ರದಲ್ಲಿ ಸಂಘಟಿತವಾದ ಹೋರಾಟ ದಲ್ಲಿ ದಾಖಲೆ ಮತಗಳ ಅಂತರದಲ್ಲಿ ಗೆಲ್ಲಿಸಲು ಎಲ್ಲ ಕಾರ್ಯಕರ್ತರು ಪ್ರಾಮಾಣಿಕವಾಗಿ ದುಡಿಯಲಿದ್ದಾರೆಂಬ ವಿಶ್ವಾಸ ಇದೆ ಎಂದರು.

ಜನಸಾಮಾನ್ಯರ ಮಧ್ಯೆ ಕೆಲಸ ಮಾಡಿರುವ ಅನುಭವ ನನ್ನಲ್ಲಿ ಇದೆ. ಗ್ರಾಪಂ, ತಾಪಂ, ಜಿಪಂ ಸದಸ್ಯನಾಗಿ ಕೆಲಸ ಮಾಡಿದ್ದೇನೆ. ನಾಲ್ಕು ಬಾರಿ ವಿಧಾನ ಪರಿಷತ್ ಸದಸ್ಯನಾಗಿ ಆಯ್ಕೆಯಾಗಿ, ಮೂರು ಬಾರಿ ಸಚಿವನಾಗಿ ಜವಾಬ್ದಾರಿ ನಿರ್ವಹಿಸಿದ್ದೇನೆ. ಜನ ಸಾಮಾನ್ಯರ ಸಮಸ್ಯೆಗಳನ್ನು ನಾನು ಅರ್ಥ ಮಾಡಿ ಕೊಂಡಿರುವುದರಿಂದ ಕೇಂದ್ರದಿಂದ ಬರುವ ಯೋಜನೆಗಳನ್ನು ರಾಜ್ಯ ಹಾಗೂ ಕ್ಷೇತ್ರಕ್ಕೆ ತರುವ ಕಾರಣಕ್ಕೆ ನನ್ನನ್ನು ಗೆಲ್ಲಿಸಲು ಮತದಾರರು ಆಶೀರ್ವಾದ ಮಾಡ ಬೇಕು ಎಂದು ಅವರು ಹೇಳಿದರು.

ಒಬ್ಬರಿಗೆ ಟಿಕೆಟ್ ಸಿಕ್ಕಿದ ಮೇಲೆ ಬಿಜೆಪಿಯೊಳಗೆ ಬೇಸರ, ಅಸಮಾಧಾನ, ಚರ್ಚೆ ಆಗುವುದಿಲ್ಲ. ಅಭ್ಯರ್ಥಿ ಎಂದು ಘೋಷಣೆ ಯಾದ ಮೇಲೆ ನನಗೆ ಎಲ್ಲಾ ನಾಯಕರು ಶುಭ ಕೋರಿದ್ದಾರೆ. ಸಿಟಿ ರವಿ, ಪ್ರಮೋದ್ ಮಧ್ವರಾಜ್, ಉದಯ ಕುಮಾರ್ ಶೆಟ್ಟಿ, ಶೋಭಾ ಕರಂದ್ಲಾಜೆ ಹಾರೈಸಿದ್ದಾರೆ. ಸಂಘಟನೆ, ನಾಯಕತ್ವ ಗಟ್ಟಿ ಇದ್ದರೆ ನಾವು ನಿಶ್ಚಿತವಾಗಿ ಗೆಲ್ಲುತ್ತೇವೆ ಎಂದರು.

ನಮ್ಮ ಸರಕಾರ ಇರುವಾಗ ಪಡಿತರದಲ್ಲಿ ಕುಚಲಕ್ಕಿ ಕೊಡುವ ಯೋಚನೆ ಮಾಡಿದ್ದೇವು. ಆದರೆ ನಮ್ಮ ಸರಕಾರ ಬದಲಾಗಿರುವುದರಿಂದ ಆ ಯೋಜನೆ ನಿಂತು ಬಿಟ್ಟಿದೆ. ನಮ್ಮ ಸರಕಾರ ಇಲ್ಲದೇ ಇರುವಾಗ ಅದನ್ನು ಮಾಡುವುದು ಸುಲಭ ಅಲ್ಲ. ಈಗಿನ ಸರಕಾರ ಮಾಡುತ್ತೇವೆ ಎಂದು ಹೇಳಿದ್ದಾರೆ. ಮುಂದೆ ನೋಡಬೇಕು ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್, ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್, ಮುಖಂಡ ರಾದ ಮಟ್ಟಾರು ರತ್ನಾಕರ ಹೆಗ್ಡೆ, ರೇಶ್ಮಾ ಉದಯ ಶೆಟ್ಟಿ, ದಿನಕರ ಶೆಟ್ಟಿ, ವಿಜಯ ಕುಮಾರ್ ಉದ್ಯಾವರ ಉಪಸ್ಥಿತರಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago