ಉಡುಪಿ: ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ಪರ್ಯಾಯೋತ್ಸವಕ್ಕೆ ಇಂದಿನಿಂದ ಸಿದ್ದತೆಗಳು ಆರಂಭವಾಗಲಿದ್ದು, ಈ ಬಾರಿಯ ಪರ್ಯಾಯೋತ್ಸವವನ್ನು ಸರಳವಾಗಿ ಆಚರಿಸಲಾಗುವುದು ಎಂದು ಸಮಿತಿಯ ಕಾರ್ಯಾಧ್ಯಕ್ಷ ಹಾಗೂ ಸ್ಥಳೀಯ ಶಾಸಕ ಕೆ.ರಘುಪತಿ ಭಟ್ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ಕೊರೊನಾ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಈ ಬಾರಿ ಪರ್ಯಾಯೋತ್ಸವ ದರ್ಬಾರ್ ಜನವರಿ 18 ಮಂಗಳವಾರ ಬೆಳಿಗ್ಗೆ ಸರಳವಾಗಿ ನಡೆಸಲು ಶ್ರೀ ಕೃಷ್ಣಾಪುರ ಪರ್ಯಾಯೋತ್ಸವ ಸಮಿತಿಯ ಪ್ರಮುಖ ಮುಖಂಡರ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ಎರಡು ದಿನಗಳು ನಡೆಯುವ ಪರ್ಯಾಯೋತ್ಸವ ನಿಮಿತ್ತ ಜಿಲ್ಲಾಡಳಿತ ಹಾಗೂ ಸಮಿತಿಯಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದ್ದು, ಪರ್ಯಾಯ ಪೀಠ ಅಲಂಕರಿಸಲಿರುವ ಶ್ರೀ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ಈಗಾಗಲೇ ಸಾಂಪ್ರದಾಯಿಕವಾಗಿ ತೀರ ಸರಳ ರೀತಿಯಲ್ಲಿ ಪರ್ಯಾಯೋತ್ಸವ ನಡೆಯಲಿದ್ದು, ಇದಕ್ಕೆ ಸಹಕರಿಸುವಂತೆ ನಾಗರಿಕರು, ಭಕ್ತರಲ್ಲಿ ಮನವಿ ಮಾಡಿದ್ದಾರೆ.
ಸಾಂಪ್ರದಾಯಿಕ ಆಚರಣೆಗೆ ಹೆಚ್ಚು ಒತ್ತು ನೀಡಿ ಸರಳವಾಗಿಯೇ ಪರ್ಯಾಯೋತ್ಸವ ನಡೆಯಲಿದೆ. ಜ.17ರ ರಾತ್ರಿ 9 ಗಂಟೆ ಅನಂತರ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳು ಇರುವುದಿಲ್ಲ.
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…