Featured

ಉಡುಪಿ: ಈ ಬಾರಿ ಜನರ ಬಳಿಗೆ ತೆರಳಿ ಹಣ ಸಂಗ್ರಹ ಮಾಡುವುದಿಲ್ಲ : ರವಿ ಕಟಪಾಡಿ – Vishwanews24

ಉಡುಪಿ: ಕೃಷ್ಣಜನ್ಮಾಷ್ಟಮಿ ಈ ಬಾರಿ ಕೂಡಾ ವಿಶಿಷ್ಟ ವೇಷದೊಂದಿಗೆ ಜನರನ್ನು ಮನರಂಜಿಸಲು ತಯಾರಾಗಿದ್ದಾರೆ ರವಿ ಕಟಪಾಡಿ

ಉಡುಪಿ: ಕೃಷ್ಣಜನ್ಮಾಷ್ಟಮಿ ತಯಾರಿಗಳು ಕೃಷ್ಣ ನಗರಿ ಉಡುಪಿಯಲ್ಲಿ ಜೋರಾಗಿಯೇ ನಡೆಯುತ್ತಿದೆ. ಪ್ರತಿ ಬಾರಿಯಂತೆ ಈ ಬಾರಿ ಕೂಡಾ ಉಡುಪಿಯ ಸಮಾಜ ಸೇವಕ ರವಿ ಕಟಪಾಡಿ ಕೂಡಾ ಈ ಬಾರಿ ವಿಶಿಷ್ಟ ವೇಷದೊಂದಿಗೆ ಜನರ ಮನರಂಜಿಸಲು ತಯಾರಾಗಿದ್ದರೆ.

ಈ ಬಾರಿ ರವಿ ಕಟಪಾಡಿ ಅವರು ಸೀ ಪೋಕ್ ಎಂಬ ಆಂಗ್ಲ ಚಲನಚಿತ್ರದ ವೇಷವನ್ನು ಧರಿಸಲಿದ್ದು, ಉದ್ಯಾವರ, ಉಡುಪಿ,ಮಲ್ಪೆ, ಪಡುಕೆರೆ ಮತ್ತು ಇತರ ಪ್ರದೇಶಗಳಲ್ಲಿ ರವಿ ಕಟಪಾಡಿ ಫ್ರೆಂಡ್ಸ್ ತಂಡ ತಿರುಗಾಟ ನಡೆಸಿ ಜನರನ್ನು ರಂಜಿಸಲಿದ್ದಾರೆ. ಪ್ರತಿ ಬಾರಿಯಂತೆ ಈ ಬಾರಿ ಕೂಡಾ ಕುಂದಾಪುರ ಮೂಲದ ೨ ವರ್ಷದ ಮಗುವಿನ ಚಿಕಿತ್ಸೆಗೆ ಹಣವನ್ನು ನೀಡಲು ರವಿ ಕಟಪಾಡಿ ನಿರ್ಧಾರ ಮಾಡಿದ್ದು, ಆದರೆ ಈ ಬಾರಿ ರವಿ ಕಟಪಾಡಿ ಫ್ರೆಂಡ್ಸ್ ತಂಡ ಜನರ ಬಳಿಗೆ ಹೋಗಿ ಬಾಕ್ಸ್ ಗಳನ್ನು ಹಿಡಿದು ಹಣವನ್ನು ಸಂಗ್ರಹ ಮಾಡದೇ ಇರಲು ನಿರ್ಧರಿಸಿದೆ.

ಈ ಕುರಿತು ಉಡುಪಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ‌ ನೀಡಿದ ರವಿ ಕಟಪಾಡಿ ಅವರು “ಕಳೆದ ೮ ವರ್ಷಗಳಿಂದ ಸುಮಾರು 113 ಮಕ್ಕಳಿಗೆ ಸುಮಾರು 1ಕೋಟಿಗೂ ಮಿಕ್ಕಿ ಧನಸಹಾಯ ಮಾಡಿದ್ದು, ಇದರ ಸಂತೃಪ್ತಿ ನಮಗಿದೆ. ಆದರೆ 47 ವರ್ಷದ ಬಳಿಕ ಈ ಬಾರಿ ನಾನು ನನ್ನ ಸ್ವಂತ ಮನೆ ಕಟ್ಟುವ ಕಾರ್ಯವನ್ನು ಪ್ರಾರಂಭ ಮಾಡಿದ್ದೇನೆ, ಆದರೆ ನನ್ನದೇ ಊರಿನ ಕೆಲವೊಂದು ಜನರು ನಾನು ವೇಷ ಹಾಕಿ ಬಂದ ಹಣದಲ್ಲಿ 1 ಕೋಟಿ ಮೌಲ್ಯದ ಮನೆ ನಿರ್ಮಾಣ ಮಾಡುತ್ತಿದ್ದೇನೆ ಎಂದು ಆರೋಪ ಮಾಡಿರುವುದು ನನ್ನ ಗಮನಕ್ಕೆ ಬಂದಿದೆ. ಹೀಗಾಗಿ ಈ ಬಾರಿ ವೇಷ ಹಾಕಿದರೂ ಕೂಡಾ ಜನರ ಬಳಿಗೆ ತೆರಳಿ ಬಾಕ್ಸ್ ನಲ್ಲಿ ಹಣ ಸಂಗ್ರಹ ಮಾಡುವುದಿಲ್ಲ. ಬದಲಾಗಿ ಯಾರಿಗಾದರೂ ನಮ್ಮ ಉದ್ದೇಶಕ್ಕೆ ಸಹಕಾರ ನೀಡಲು ಇಚ್ಛಿಸಿದ್ದಲ್ಲಿ ನಮ್ಮ ವಾಹನದ ಬಳಿಗೆ ಬಂದು ತಮ್ಮ ಧನಸಹಾಯವನ್ನು ನೀಡಬಹುದು. ಇದು ನಮ್ಮ ರವಿ ಫ್ರೆಂಡ್ಸ್ ಕಟಪಾಡಿ ತಂಡದ ನಿರ್ಧಾರ” ಎಂದರು.

ಈ ಸಂದರ್ಭದಲ್ಲಿ ತಂಡದ ಮಾರ್ಗದರ್ಶಕರಾದ ಮಹೇಶ್ ಶೆಣೈ, ಮೊಹಮ್ಮದ್ ರಮೀಜುಲ್ಲಾ, ವಿಶ್ವಾಸ್ ಉಪಸ್ಥಿತರಿದ್ದರು.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

35 minutes ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

2 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

3 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

3 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

3 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

3 hours ago