Featured

ಉಡುಪಿ: ಉಗ್ರರ ದಾಳಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ; ಕ್ಯಾಂಡಲ್ ಹೊತ್ತಿಸಿ ಶ್ರದ್ಧಾಂಜಲಿ ಸಮರ್ಪಣೆ – vishwanews24

ಉಡುಪಿ: ಉಗ್ರರ ದಾಳಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ; ಕ್ಯಾಂಡಲ್ ಹೊತ್ತಿಸಿ ಶ್ರದ್ಧಾಂಜಲಿ ಸಮರ್ಪಣೆ

ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ, ಮಹಿಳಾ ಕಾಂಗ್ರೆಸ್ ಸಮಿತಿ ಹಾಗೂ ಯುವ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ದಾಳಿ ಖಂಡಿಸಿ ಹಾಗೂ ಈ ದುರ್ಘಟನೆಯಲ್ಲಿ ಬಲಿಯಾದವರಿಗೆ ಉಡುಪಿ ಅಜ್ಜರಕಾಡು ಹುತಾತ್ಮರ ಸ್ಮಾರಕದ ಬಳಿ ಶುಕ್ರವಾರ ಮೇಣದ ಬತ್ತಿ ಹೊತ್ತಿಸಿ ಶ್ರದ್ಧಾಂಜಲಿ ಸಮರ್ಪಿಸಲಾಯಿತು.

ಸಭೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಇದೊಂದು ಹೇಯ ಕೃತ್ಯ. ಇಡೀ ದೇಶವೇ ನೋವಿನಲ್ಲಿ ಮುಳುಗಿದೆ. ಭಯೋತ್ಪಾದಕರಿಗೆ ಜಾತಿ, ಧರ್ಮ ಎಂಬುದು ಇಲ್ಲ. ಈ ಕೃತ್ಯ ವನ್ನು ಇಡೀ ದೇಶದ ಎಲ್ಲ ವರ್ಗದ ಜನರು ಒಕ್ಕೋರಲಿನಿಂದ ಖಂಡಿಸಿದ್ದಾರೆ. ಭಯೋತ್ಪಾದನೆ ಧಮನ ಮಾಡಲು ಕೇಂದ್ರ ಸರಕಾರ ಎಲ್ಲ ರೀತಿಯ ಸಹಕಾರ ವನ್ನು ಕಾಂಗ್ರೆಸ್ ನೀಡುತ್ತಿದೆ. ಇದಕ್ಕೆ ಸರಿಯಾದ ಪ್ರತ್ಯುತ್ತರವನ್ನು ಸರಕಾರ ನೀಡಬೇಕು ಎಂದು ತಿಳಿಸಿದರು.

ಕಾಂಗ್ರೆಸ್ ಮುಖಂಡ ಪ್ರಸಾದ್‌ ರಾಜ್ ಕಾಂಚನ್ ಮಾತನಾಡಿ, ದ್ವೇಷದ ಆಡಳಿತದಿಂದ ಯಾವುದೇ ದೇಶ ಅಭಿವೃದ್ಧಿ ಹೊಂದಲು ಸಾಧ್ಯ ಇಲ್ಲ. ಪ್ರೀತಿಯ ಆಡಳಿತದಿಂದ ಮಾತ್ರ ಈ ದೇಶ ಪ್ರಗತಿ ಕಾಣಲು ಸಾಧ್ಯ. ಈ ದುರ್ಘಟನೆ ಯಿಂದ ಭಾರತೀಯರೇ ಈ ದೇಶದಲ್ಲಿ ಭಯದಲ್ಲಿ ಬದುಕುವ ವಾತಾವಣ ನಿರ್ಮಾಣ ವಾಗಿದೆ. ಕಾಶ್ಮೀರದಿಂದ ಆರ್ಟಿಕಲ್ 370 ರದ್ದು ಮಾಡಿದರೂ ಇನ್ನೂ ಶಾಂತಿ ನೆಲೆಸಿಲ್ಲ. ಭಯೋತ್ಪಾದನೆ ವಿಚಾರದಲ್ಲಿ ಸರಕಾರ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಎಂ.ಎ.ಗಫೂರ್, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಮಮತಾ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ಸಜ್ಜನ್ ಶೆಟ್ಟಿ, ಮುಖಂಡರಾದ ಪ್ರಖ್ಯಾತ್ ಶೆಟ್ಟಿ, ನಾಗೇಶ್ ಕುಮಾರ್ ಉದ್ಯಾವರ, ಜ್ಯೋತಿ ಹೆಬ್ಬಾರ್, ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಸರ್ಫುದ್ದೀನ್ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

17 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago