ಉಡುಪಿ : ಉಚಿತ ಕೋವಿಡ್-19 ಮುನ್ನೆಚ್ಚರಿಕಾ ಡೋಸ್ ಲಸಿಕಾ ಅಭಿಯಾನಕ್ಕೆ ಚಾಲನೆ – Vishwanews24
ಉಡುಪಿ : ಉಚಿತ ಕೋವಿಡ್-19 ಮುನ್ನೆಚ್ಚರಿಕಾ ಡೋಸ್ ಲಸಿಕಾ ಅಭಿಯಾನಕ್ಕೆ ಚಾಲನೆ
ಇಂದು ಜಿಲ್ಲಾ ಆಯುಷ್ ಆಸ್ಪತ್ರೆಯಲ್ಲಿ ನಡೆದ, ಉಚಿತ ಕೋವಿಡ್-19 ಮುನ್ನೆಚ್ಚರಿಕಾ ಡೋಸ್ ನೀಡುವ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.
ಜಿಲ್ಲೆಯಲ್ಲಿ ಕೋವಿಡ್-19 ಸಂಭಾವ್ಯ ನಾಲ್ಕನೇ ಅಲೆಯಿಂದ ಸಂಭವಿಸಬಹುದಾದ ತೀವ್ರತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ 18 ರಿಂದ 59 ವರ್ಷದೊಳಗಿನ 8 ಲಕ್ಷ ಸಾರ್ವಜನಿಕರಿಗೆ ಸೆಪ್ಟಂಬರ್ 30 ರ ಒಳಗೆ ಕೋವಿಡ್-19 ಮುಂಜಾಗ್ರತಾ ಡೋಸ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ.
ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ಉಚಿತವಾಗಿ ಮುನ್ನೆಚ್ಚರಿಕಾ ಡೋಸ್ ನೀಡಲಾಗುತ್ತಿದ್ದು, ಎರಡನೇ ಡೋಸ್ ಪಡೆದು 6 ತಿಂಗಳು ದಾಟಿದ ಸಾರ್ವಜನಿಕರು ಜಿಲ್ಲೆಯಾದ್ಯಂತ ತಮ್ಮ ಸಮೀಪದ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಮುನ್ನೆಚ್ಚರಿಕಾ ಡೋಸ್ ಪಡೆಯಬಹುದಾಗಿದೆ.

ಜಿಲ್ಲೆಯ ಸಾರ್ವಜನಿಕರು ಕೋವಿಡ್ 19 ಪ್ರಥಮ ಮತ್ತು 2 ನೇ ಡೋಸ್ ನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಡೆದಿದ್ದ ಕಾರಣ ಕೋವಿಡ್ 3 ನೇ ಅಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಆಸ್ಪತ್ರೆ ದಾಖಲಾತಿ ಪ್ರಕರಣಗಳು ಕಂಡುಬರಲಿಲ್ಲ ಆದ್ದರಿಂದ ಸಂಭಾವ್ಯ ನಾಲ್ಕನೇ ಅಲೆಯಿಂದ ಸಂಭವಿಸಬಹುದಾದ ತೀವ್ರತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ತಪ್ಪದೇ ಮುನ್ನೆಚ್ಚರಿಕಾ ಡೋಸ್ ಪಡೆಯಬೇಕು.
ಜಿಲ್ಲೆಯಲ್ಲಿ ಕೋವಿಡ್ ಲಸಿಕಾಕರಣದಲ್ಲಿ ಹೆಚ್ಚಿನ ಪ್ರಗತಿ ಸಾಧಿಸಲು ವಿವಿಧ ಸಂಘ ಸಂಸ್ಥೆಗಳು ಹಾಗೂ ನಾಗರೀಕರು ಜಿಲ್ಲಾಡಳಿತಕ್ಕೆ ಉತ್ತಮ ಸಹಕಾರ ನೀಡಿದ್ದು , ಮುನ್ನೆಚ್ಚರಿಕಾ ಡೋಸ್ ನೀಡಿಕೆಯಲ್ಲಿ 100% ಪ್ರಗತಿ ಸಾಧಿಸುವಲ್ಲಿ ಕೂಡಾ ಅಗತ್ಯ ಸಹಕಾರ ನೀಡುವಂತೆ ಕೋರುತ್ತೇನೆ.
ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.
