ಉಡುಪಿ: ಉಚಿತ ಹೆರಿಗೆಯ ಸರ್ಕಾರಿ ಆಸ್ಪತ್ರೆಯ ನಿರ್ವಹಣೆಯನ್ನು ಕೈಬಿಡುವುದಾಗಿ ಅಬುದಾಬಿಯ ಉದ್ಯಮಿ ಬಿ.ಆರ್. ಶೆಟ್ಟಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಉದ್ಯಮಿ ಬಿ.ಆರ್. ಶೆಟ್ಟಿ ಅವರು ಸರ್ಕಾರದ ಹೆರಿಗೆ ಆಸ್ಪತ್ರೆಯನ್ನು ತಾನು ನಡೆಸುತ್ತೇನೆ ಎಂದು ತಾನೇ ಮುಂದೆ ಬಂದಿದ್ದರು. ಹೀಗಾಗಿ 200 ಬೆಡ್ನ ಉಚಿತ ಹೆರಿಗೆಯ ಸರ್ಕಾರಿ ಆಸ್ಪತ್ರೆಯನ್ನು ಖಾಸಗಿ ನಿರ್ವಹಣೆ ಮಾಡುವುದು ಮತ್ತು ಇದಕ್ಕೆ ಬದಲಾಗಿ 400 ಬೆಡ್ನ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ನೂರಾರು ಕೋಟಿ ಮೌಲ್ಯದ ಸರ್ಕಾರದ 4.7 ಎಕರೆ ಭೂಮಿಯನ್ನು ಬಿ.ಆರ್. ಶೆಟ್ಟಿ ಅವರಿಗೆ ಕೊಡುವುದು ಎಂದು ಎಂಓಯು ಆಗಿತ್ತು. ಆದರೆ ಈಗ ಆರ್ಥಿಕ ಸಂಕಷ್ಟದಲ್ಲಿ ಇರುವ ಅವರು, ಆಸ್ಪತ್ರೆ ನಡೆಸಲು ಸಾಧ್ಯವಿಲ್ಲ ಎಂದು ಸರ್ಕಾರಕ್ಕೆ ತಿಳಿಸಿದ್ದಾರೆ.
ಸೆಂಟ್ರಲ್ ಎಸಿ ಅಳವಡಿಸಿರುವ ಈ ಬಹುಮಹಡಿ ಕಟ್ಟಡವನ್ನು ಆರೋಗ್ಯ ಇಲಾಖೆಯಿಂದ ನಿರ್ವಹಿಸುವುದಕ್ಕೆ ಸಾಧ್ಯವೇ ಇಲ್ಲ. ಹೀಗಾಗಿ ಈ ಆಸ್ಪತ್ರೆಯ 250 ಸಿಬ್ಬಂದಿಗೆ ಈ ಸಂಬಳ ಕೊಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ಸಿಬ್ಬಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…