ಉಡುಪಿ: ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಐದನೇ ವರ್ಷದ ಉಡುಪಿ ಉಚ್ಚಿಲ ದಸರಾ ಉತ್ಸವದ ಅಂಗವಾಗಿ ಮಹಾಲಕ್ಷ್ಮೀ ಕೋ-ಓಪರೇಟಿವ್ ಬ್ಯಾಂಕ್ ವತಿಯಿಂದ ಅಕ್ಟೋಬರ್ 17 ರಂದು ಚಿತ್ರಕಲಾ ಸ್ಪರ್ಧೆ ನಡೆಯಲಿದೆ ಎಂದು ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಿತ್ರಕಲಾ ಸ್ಪರ್ಧೆ ಉಚ್ಚಿಲ ಮೊಗವೀರ ಭವನದಲ್ಲಿ ಬೆಳಿಗ್ಗೆ 9.30 ರಿಂದ 12ರ ವರೆಗೆ “ಉಡುಪಿ ಉಚ್ಚಿಲ ದಸರಾ” ವಿಷಯದ ಕುರಿತು ಸ್ಪರ್ಧೆ ನಡೆಯಲಿದ್ದು, ಕಿರಿಯರ ವಿಭಾಗ (1- 4ನೇ ತರಗತಿ), ಪ್ರಾಥಮಿಕ ವಿಭಾಗ (5-7ನೇ ತರಗತಿ), ಹೈಸ್ಕೂಲ್ ವಿಭಾಗ, ಕಾಲೇಜು ವಿಭಾಗ (ಪಿ.ಯು.ಸಿ. ಮತ್ತು ಡಿಗ್ರಿ) ಹಾಗೂ ಸಾರ್ವಜನಿಕ ವಿಭಾಗದಲ್ಲಿ ಮುಕ್ತ ಅವಕಾಶ ಕಲ್ಪಿಸಲಾಗಿದೆ.
ಪ್ರತಿ ವಿಭಾಗದಲ್ಲಿ ನಗದು ಬಹುಮಾನ ಸಹಿತ ಪ್ರಥಮ, ದ್ವಿತೀಯ, ತೃತೀಯ ಹಾಗೂ ಸಮಾಧಾನಕರ ಬಹುಮಾನ ನೀಡಲಾಗುವುದು. ಸ್ಪರ್ಧಾಳುಗಳಿಗೆ ಡ್ರಾಯಿಂಗ್ ಹಾಳೆಯನ್ನು ಸ್ಥಳದಲ್ಲಿಯೇ ನೀಡಲಾಗುವುದು. ಉಳಿದ ಪರಿಕರಗಳನ್ನು ಸ್ಪರ್ಧಾಳುಗಳೇ ತರಬೇಕು. ಸ್ಪರ್ಧೆಗಳ ಬಗ್ಗೆ ನೋಂದಾಣಿಗಾಗಿ www.mahalakshmicoopbank.com/ 7619207778 ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…
ಉಡುಪಿ: ಅ. 17 ರಂದು ನೇರ ಸಂದರ್ಶನ ಉಡುಪಿ: ನಗರದ ಗ್ರೋಸ್ಪೆöÊರ್ ಗ್ರೂಪ್, ಎರಡನೇ ಮಹಡಿ, ಕೈಗಾರಿಕಾ ಸಹಕಾರ ಸಂಘ,…