ಕಾಪು: ಉಡುಪಿ ಉಚ್ಚಿಲ ದಸರಾ 2024ರಲ್ಲಿ ಲಲಿತಾ ಪಂಚಮಿ ಪ್ರಯುಕ್ತ ಶ್ರೀ ಕ್ಷೇತ್ರ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಶಾಲಿನಿ ಜಿ. ಶಂಕರ್ ತೆರೆದ ಸಭಾಂಗಣದಲ್ಲಿ ನವದುರ್ಗೆಯರು ಮತ್ತು ಶಾರದಾ ಮಾತೆಯ ಮುಂಭಾಗದಲ್ಲಿ 3 ನೇ ವರ್ಷದ “ಶತವೀಣಾವಲ್ಲರಿ’ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.
ಪ್ರಸಿದ್ಧ ವೀಣಾವಾದಕಿ ವಿದುಷಿ ಪವನ ಬಿ. ಆಚಾರ್ ಮಣಿಪಾಲ ನಿರ್ದೇಶನ ಮತ್ತು ನಿರ್ವಹಣೆಯೊಂದಿಗೆ ಕರಾವಳಿಯ 108 ಮಂದಿ ವೀಣಾವಾದಕರು ಮತ್ತು ಸಹ ಕಲಾವಿದರ ಸಹಭಾಗಿತ್ವದೊಂದಿಗೆ ಶತವೀಣಾವಲ್ಲರಿ ಜರಗಿತು. ವಿದುಷಿ ಪವನ ಬಿ. ಆಚಾರ್ ಅವರನ್ನು ಡಾ| ಜಿ. ಶಂಕರ್ ಅವರು ಸಮ್ಮಾನಿಸಿ, ಗೌರವಿಸಿದರು.
ಸುಮಂಗಲೆಯರಿಗೆ ಗೌರವಾರ್ಪಣೆ
ಸೋಮವಾರ ಚಂಡಿಕಾ ಹೋಮ, ಭಜನೆ, ಅಂಬಿಕಾ ಕಲ್ಪೋಕ್ತ ಪೂಜೆ, ಧಾರ್ಮಿಕ ಸಭೆ ಸಹಿತ ವಿವಿಧ ಕಾರ್ಯಕ್ರಮಗಳು ಜರಗಿದವು. ಲಲಿತಾ ಪಂಚಮಿ ಪ್ರಯುಕ್ತ ಸಾವಿರಾರು ಸುಮಂಗಲೆಯರಿಂದ ಸಾಮೂಹಿಕ ಕುಂಕುಮಾರ್ಚನೆ ಜರಗಿತು.
ದ. ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಗಿರಿಧರ ಸುವರ್ಣ, ಪ್ರಧಾನ ಅರ್ಚಕ ವೇ| ಮೂ| ರಾಘವೇಂದ್ರ ಉಪಾಧ್ಯಾಯ, ಉಚ್ಚಿಲ ದಸರಾ ಸಮಿತಿ ಅಧ್ಯಕ್ಷ ವಿನಯ ಕರ್ಕೇರ, ಕ್ಷೇತ್ರಾಡಳಿತ ಸಮಿತಿ ಮಾಜಿ ಅಧ್ಯಕ್ಷ ವಾಸುದೇವ ಸಾಲ್ಯಾನ್, ಜೀರ್ಣೋದ್ಧಾರ ಸಮಿತಿ ಮಾಜಿ ಅಧ್ಯಕ್ಷ ಗುಂಡು ಬಿ. ಅಮೀನ್, ಮಹಾಜನ ಸಂಘದ ಪ್ರಧಾನ ಕಾರ್ಯದರ್ಶಿ ಶರಣ್ ಮಟ್ಟು, ಮಹಿಳಾ ಮಹಾಜನ ಸಂಘದ ಅಧ್ಯಕ್ಷೆ ಉಷಾ ರಾಣಿ, ಕಾಪು ನಾಲ್ಕುಪಟ್ಣ ಮೊಗವೀರ ಮಹಾಸಭಾದ ಅಧ್ಯಕ್ಷ ಮನೋಜ್ ಕಾಂಚನ್, ಕಾಪು ನಾಲ್ಕು ಪಟ್ಣ ಮೊಗವೀರ ಮಹಿಳಾ ಸಭಾದ ಅಧ್ಯಕ್ಷೆ ಸುಗುಣ ಕರ್ಕೇರ ಮೊದಲಾದವರಿದ್ದರು. ಸಾಂಸ¢ತಿಕ ಕಾರ್ಯಕ್ರಮ ಸಮಿತಿ ಸಂಚಾಲಕ ಸತೀಶ್ ಅಮೀನ್ ಪಡುಕೆರೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…