Featured

ಉಡುಪಿ- ಉಚ್ಚಿಲ ದಸರಾ ಶೋಭಾಯಾತ್ರೆ : ವಾಹನ ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ– ಉಚ್ಚಿಲ ದಸರಾ ಶೋಭಾಯಾತ್ರೆ : ವಾಹನ ಸಂಚಾರಕ್ಕೆ ಬದಲಿ ಮಾರ್ಗ

     ಉಡುಪಿ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಯೋಜಿಸಿರುವ ಉಡುಪಿ–ಉಚ್ಚಿಲ ದಸರಾ 2026 ಪ್ರಯುಕ್ತ ಅಕ್ಟೋಬರ್ 21 ರಂದು ಬೃಹತ್ ಶೋಭಾಯಾತ್ರೆ ಮೆರವಣಿಗೆಯು ರಾಷ್ಟ್ರೀಯ ಹೆದ್ದಾರಿ-66 ರಲ್ಲಿ ಸಾಗಲಿರುವ ಹಿನ್ನೆಲೆ, ವಾಹನ ದಟ್ಟಣೆಯಾಗಿ ಸಂಚಾರ ದಟ್ಟಣೆ ಆಗುವ ಸಾಧ್ಯತೆ ಇದ್ದು, ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆಯನ್ನು ಒದಗಿಸುವ ದೃಷ್ಟಿಯಿಂದ ಸದರಿ ದಿನದಂದು ಈ ಕೆಳಕಂಡAತೆ ವಾಹನಗಳ ಸಂಚಾರಕ್ಕೆ ಮಾರ್ಗ ಬದಲಾವಣೆ ಹಾಗೂ ಸಂಚಾರ ನಿಷೇಧಕ್ಕೆ ಸಂಬ0ಧಿಸಿದ0ತೆ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶ ಹೊರಡಿಸಿರುತ್ತಾರೆ.

ಉಡುಪಿ–ಮಂಗಳೂರು ಮಾರ್ಗವಾಗಿ ಬರುವ ಘನ ವಾಹನಗಳನ್ನು ಅಪರಾಹ್ನ 3 ಗಂಟೆಯಿ0ದ ರಾತ್ರಿ 11 ಗಂಟೆಯವರೆಗೆ ಬದಲಿ ಮಾರ್ಗವಾಗಿ ಕಟಪಾಡಿ–ಶಿರ್ವಾ–ಬೆಳ್ಮಣ್–ಪಡುಬಿದ್ರಿ ಮಾರ್ಗವಾಗಿ ಸಂಚರಿಸಬೇಕು.         

ಉಡುಪಿ ಕಡೆಯಿಂದ ಬಜ್ಪೆ ಏರ್‌ಪೋರ್ಟ್ಗೆ ಹೋಗುವ ವಾಹನಗಳು ಕಟಪಾಡಿ–ಶಿರ್ವಾ–ಬೆಳ್ಮಣ್–ಮುಂಡ್ಕೂರು ಮಾರ್ಗವಾಗಿ ಸಂಚರಿಸಬೇಕು. 

ಟ್ರಕ್, ಲಾರಿ, ಟ್ಯಾಂಕರ್ ಮುಂತಾದ ಘನ ವಾಹನಗಳನ್ನು ರಾತ್ರಿ 9 ಗಂಟೆಯವರೆಗೆ ಕುಂದಾಪುರ, ಉಡುಪಿ ಕಡೆಗಳಲ್ಲಿ ಟ್ರಕ್ ಬೇ ಯಲ್ಲಿ ನಿಲ್ಲಿಸಿ ನಂತರ ಸಂಚಾರ ಮುಂದುವರೆಸಬೇಕು. ಉಡುಪಿಯಿಂದ ಮಂಗಳೂರು ಮಾರ್ಗವಾಗಿ ಬೆಂಗಳೂರು ಸಂಚರಿಸುವ ರಾತ್ರಿ ಪ್ರಯಾಣಿಕ ಬಸ್ಸುಗಳು ರಾತ್ರಿ 9 ಗಂಟೆ ನಂತರ ಉಡುಪಿಯಿಂದ ಸಂಚರಿಸಬೇಕು. ಮಂಗಳೂರು–ಉಡುಪಿ ಮಾರ್ಗವಾಗಿ ಅಪರಾಹ್ನ 3 ಗಂಟೆಯಿAದ ರಾತ್ರಿ 11 ಗಂಟೆಯವರೆಗೆ ಘನ ವಾಹನಗಳ ಸಂಚಾರ ನಿಷೇಧಿಸಿದೆ.

 ಈ ಅಧಿಸೂಚನೆಯನ್ನು ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನ ನಿಯಮ 1989 ರ ನಿಯಮ 221 5(ಎ) ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಹೊರಡಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. 

 

Vishwa News 24

Recent Posts

ಮಂಗಳೂರು: ಯಕ್ಷಗಾನದಲ್ಲಿ ಧಾರ್ಮಿಕ ಸೌಹಾರ್ದದ ಅನಾವರಣ; ಶ್ರೀದೇವಿಯ ವೇಷದಲ್ಲಿ ಕಂಗೊಳಿಸಿದ ಮುಸ್ಲಿಂ ಯುವತಿ -vishwanews24

ಮಂಗಳೂರು: ಯಕ್ಷಗಾನದಲ್ಲಿ ಧಾರ್ಮಿಕ ಸೌಹಾರ್ದದ ಅನಾವರಣ; ಶ್ರೀದೇವಿಯ ವೇಷದಲ್ಲಿ ಕಂಗೊಳಿಸಿದ ಮುಸ್ಲಿಂ ಯುವತಿ ಮಂಗಳೂರು: ಕರಾವಳಿಯ ಗಂಡುಕಲೆ ಯಕ್ಷಗಾನದಲ್ಲಿ ಧಾರ್ಮಿಕ…

2 days ago

ಟೈಗರ್ ಶ್ರಾಫ್ ಕಾರಿನ ಮೇಲೆ ದಾಳಿ ಪ್ರಕರಣ : ಇಬ್ಬರು ಮಹಿಳೆಯರು ಸೇರಿ ಮತ್ತೆ ನಾಲ್ವರ ಬಂಧನ – vishwanews24

ಟೈಗರ್ ಶ್ರಾಫ್ ಕಾರಿನ ಮೇಲೆ ದಾಳಿ ಪ್ರಕರಣ : ಇಬ್ಬರು ಮಹಿಳೆಯರು ಸೇರಿ ಮತ್ತೆ ನಾಲ್ವರ ಬಂಧನ ಮುಂಬೈ: ಬಾಲಿವುಡ್…

2 days ago

ಬೆಂಗಳೂರು – ಮುಂಬೈ ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ದಿನಾಂಕ ನಿಗದಿ ..! vishwanews24

ಬೆಂಗಳೂರು – ಮುಂಬೈ ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ದಿನಾಂಕ ನಿಗದಿ ..! ಬೆಂಗಳೂರು:ಬೆಂಗಳೂರು ಮತ್ತು ಮುಂಬೈ…

2 days ago

ಮಂಗಳೂರು: ಬೋಳಿಯಾರ್ ಅಪಘಾತ ಪ್ರಕರಣಕ್ಕೆ ತಿರುವು ; ಪಿಕಪ್ ಚಾಲಕನ ವಿರುದ್ಧ ಕೊಲೆ ಪ್ರಕರಣ ದಾಖಲು – vishwanews24

ಮಂಗಳೂರು: ಬೋಳಿಯಾರ್ ಅಪಘಾತ ಪ್ರಕರಣಕ್ಕೆ ತಿರುವು ; ಪಿಕಪ್ ಚಾಲಕನ ವಿರುದ್ಧ ಕೊಲೆ ಪ್ರಕರಣ ದಾಖಲು ಮಂಗಳೂರು: ಸೋಮವಾರ ಬೋಳಿಯಾರ್…

2 days ago

ಬಂಟ್ವಾಳ : ವೇಷ ಧರಿಸಿ ಸಂಗ್ರಹಿಸಿದ ಹಣದಿಂದ ಅಸ್ವಸ್ಥ ಯುವಕನಿಗೆ ನೆರವು ; ಪುಟಾಣಿಗಳ ಮಾನವೀಯ ಕಾರ್ಯಕ್ಕೆ ಭಾರೀ ಮೆಚ್ಚುಗೆ – vishwanews24

ಬಂಟ್ವಾಳ : ವೇಷ ಧರಿಸಿ ಸಂಗ್ರಹಿಸಿದ ಹಣದಿಂದ ಅಸ್ವಸ್ಥ ಯುವಕನಿಗೆ ನೆರವು ; ಪುಟಾಣಿಗಳ ಮಾನವೀಯ ಕಾರ್ಯಕ್ಕೆ ಭಾರೀ ಮೆಚ್ಚುಗೆ…

2 days ago

ಮಕ್ಕಳ ಕೈಗೆ ಮೋಟಾರು ವಾಹನಗಳನ್ನು ನೀಡುವುದಕ್ಕೆ ಅದು ಆಟಿಕೆಯಲ್ಲ : ಹೈಕೋರ್ಟ್ – vishwanews24

ಮಕ್ಕಳ ಕೈಗೆ ಮೋಟಾರು ವಾಹನಗಳನ್ನು ನೀಡುವುದಕ್ಕೆ ಅದು ಆಟಿಕೆಯಲ್ಲ , ಸಾರ್ವಜನಿಕ ರಸ್ತೆಗಳು ಆಟದ ಮೈದಾನವಲ್ಲ : ಕರ್ನಾಟಕ ಹೈಕೋರ್ಟ್…

3 days ago