ಕಾಪು: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಪಂಚಮ ವರ್ಷದ ಉಡುಪಿ ಉಚ್ಚಿಲ ದಸರಾ- 2026 ಮಹೋತ್ಸವವು ಅಂತಿಮ ಹಂತ ತಲುಪಿದೆ. ಅ. 20ರಂದು ಮಹಾನವಮಿ, ಅ. 21ರಂದು ವಿಜಯದಶಮಿ, ಮಹಾ ಚಂಡಿಕಾಯಾಗ, ಶೋಭಾಯಾತ್ರೆ ನಡೆಯಲಿದೆ.
ಅ. 20ರಂದು ಬೆಳಗ್ಗೆ ಚಂಡಿಕಾ ಹೋಮ, ಮಧ್ಯಾಹ್ನ ನವದುರ್ಗೆಯರಿಗೆ ಮಹಾಪೂಜೆ, ಅನ್ನ ಸಂತರ್ಪಣೆ, ಸಂಜೆ ಸುಮಂಗಲೆಯರಿಂದ ಸಾಮೂಹಿಕ ಕುಂಕುಮಾರ್ಚನೆ, ರಾತ್ರಿ ನವದುರ್ಗೆ ಯರಿಗೆ ಮಹಾಪೂಜೆ, ಕಲ್ಪೋಕ್ತ ಪೂಜೆ ನೆರವೇರಲಿದೆ. ದಸರಾ ಮುಖ್ಯ ವೇದಿಕೆಯಲ್ಲಿ ಬೆಳಗ್ಗೆ 9.30ರಿಂದ ಭಜನ ಸಂಕೀರ್ತನೆ, ಅಪರಾಹ್ನ 2.30ರಿಂದ ಭಕ್ತಿಗಾನಸುಧೆ, ಸಂಕೀರ್ತನೆ ನಡೆಯಲಿದೆ. ಸಂಜೆ 5ಕ್ಕೆ ಧರ್ಮಸಭೆಯಲ್ಲಿ ಧಾರ್ಮಿಕ ಪ್ರವಚನ ನಡೆಯಲಿದೆ. ರಾತ್ರಿ 7ರಿಂದ ರಥಬೀದಿ ಸುತ್ತ ಸಾಮೂಹಿಕ ದಾಂಡಿಯಾ ರಾಸ್, ರಾತ್ರಿ 8.30ರಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ ಪ್ರದರ್ಶನಗೊಳ್ಳಲಿದೆ.
ನಾಳೆ ಮಹಾಚಂಡಿಕಾ ಯಾಗ, ಅನ್ನಸಂತರ್ಪಣೆ
ಅ. 21ರಂದು ಬೆಳಗ್ಗೆ ಉದಯಪೂಜೆ, ಸಾಮೂಹಿಕ ಪ್ರಾರ್ಥನೆ, ಮಹಾಪೂಜೆ, ಸಾಮೂಹಿಕ ಚಂಡಿಕಾಯಾಗ, ಪೂರ್ಣಾಹುತಿ, ಪ್ರಸಾದ ವಿತರಣೆ ಹಾಗೂ ಮಹಾಅನ್ನಸಂತರ್ಪಣೆ ನಡೆಯಲಿದೆ. ಶ್ರೀ ಶಾರದಾ ಮಾತೆ, ನವದುರ್ಗೆಯರ ವಿಗ್ರಹಗಳಿಗೆ ಅಪರಾಹ್ನ 2.30ಕ್ಕೆ ವಿಸರ್ಜನಾ ಪೂಜೆ ನೆರವೇರಿಸಿ, ಅಪರಾಹ್ನ 3.30ಕ್ಕೆ ಶೋಭಾಯಾತ್ರೆ ಆರಂಭಗೊಳ್ಳಲಿದೆ.
ಮಂಗಳೂರು: ಯಕ್ಷಗಾನದಲ್ಲಿ ಧಾರ್ಮಿಕ ಸೌಹಾರ್ದದ ಅನಾವರಣ; ಶ್ರೀದೇವಿಯ ವೇಷದಲ್ಲಿ ಕಂಗೊಳಿಸಿದ ಮುಸ್ಲಿಂ ಯುವತಿ ಮಂಗಳೂರು: ಕರಾವಳಿಯ ಗಂಡುಕಲೆ ಯಕ್ಷಗಾನದಲ್ಲಿ ಧಾರ್ಮಿಕ…
ಟೈಗರ್ ಶ್ರಾಫ್ ಕಾರಿನ ಮೇಲೆ ದಾಳಿ ಪ್ರಕರಣ : ಇಬ್ಬರು ಮಹಿಳೆಯರು ಸೇರಿ ಮತ್ತೆ ನಾಲ್ವರ ಬಂಧನ ಮುಂಬೈ: ಬಾಲಿವುಡ್…
ಬೆಂಗಳೂರು – ಮುಂಬೈ ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ದಿನಾಂಕ ನಿಗದಿ ..! ಬೆಂಗಳೂರು:ಬೆಂಗಳೂರು ಮತ್ತು ಮುಂಬೈ…
ಮಂಗಳೂರು: ಬೋಳಿಯಾರ್ ಅಪಘಾತ ಪ್ರಕರಣಕ್ಕೆ ತಿರುವು ; ಪಿಕಪ್ ಚಾಲಕನ ವಿರುದ್ಧ ಕೊಲೆ ಪ್ರಕರಣ ದಾಖಲು ಮಂಗಳೂರು: ಸೋಮವಾರ ಬೋಳಿಯಾರ್…
ಬಂಟ್ವಾಳ : ವೇಷ ಧರಿಸಿ ಸಂಗ್ರಹಿಸಿದ ಹಣದಿಂದ ಅಸ್ವಸ್ಥ ಯುವಕನಿಗೆ ನೆರವು ; ಪುಟಾಣಿಗಳ ಮಾನವೀಯ ಕಾರ್ಯಕ್ಕೆ ಭಾರೀ ಮೆಚ್ಚುಗೆ…
ಮಕ್ಕಳ ಕೈಗೆ ಮೋಟಾರು ವಾಹನಗಳನ್ನು ನೀಡುವುದಕ್ಕೆ ಅದು ಆಟಿಕೆಯಲ್ಲ , ಸಾರ್ವಜನಿಕ ರಸ್ತೆಗಳು ಆಟದ ಮೈದಾನವಲ್ಲ : ಕರ್ನಾಟಕ ಹೈಕೋರ್ಟ್…