Featured

ಉಡುಪಿ: ಉದಯ ಗಾಣಿಗ ಕೊಲೆ ಪ್ರಕರಣ – ಯಾವುದೇ ಒತ್ತಡಕ್ಕೆ ಮಣಿಯದೆ ತಪ್ಪಿತಸ್ಥರನ್ನು ಬಂಧಿಸಿ ತಕ್ಕ ಶಿಕ್ಷೆ ಸಿಗುವಂತೆ ಮಾಡಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗೆ ಸೊರಕೆ ಮನವಿ  -Vishwanews24

ಉಡುಪಿ: ಉದಯ ಗಾಣಿಗ ಕೊಲೆ ಪ್ರಕರಣ – ಯಾವುದೇ ಒತ್ತಡಕ್ಕೆ ಮಣಿಯದೆ ತಪ್ಪಿತಸ್ಥರನ್ನು ಬಂಧಿಸಿ ತಕ್ಕ ಶಿಕ್ಷೆ ಸಿಗುವಂತೆ ಮಾಡಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗೆ ಸೊರಕೆ ಮನವಿ  -Vishwanews24

ಉಡುಪಿ,: ಮಾಜಿ ಸಚಿವ ವಿನಯ ಕುಮಾರ್ ಸೊರಕೆಯವರ ಮತ್ತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರ್, ಗೋಪಾಲ್ ಪೂಜಾರಿ ಇವರ ನೇತೃತ್ವದಲ್ಲಿ ಗಾಣಿಗ ಸಮಾಜದ ಮುಖಂಡರೊಂದಿಗೆ ಸೋಮವಾರ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವನ್ನು ಭೇಟಿ ನೀಡಿ ಸುಧೀರ್ಘ ಚರ್ಚೆ ನಡೆಸಿ ಉದಯ ಗಾಣಿಗ ಅವರ ಕೊಲೆ ಪ್ರಕರಣ ತಪ್ಪಿತಸ್ಥರು ಯಾರೇ ಆಗಿದ್ದರೂ ಯಾವುದೇ ಒತ್ತಡಕ್ಕೆ ಮಣಿಯದೆ ತಪ್ಪಿತಸ್ಥರನ್ನು ಬಂಧಿಸಿ ತಕ್ಕ ಶಿಕ್ಷೆ ಸಿಗುವಂತೆ ಮಾಡಿ ಪತ್ನಿ ಮಕ್ಕಳು ಮತ್ತು ಕುಟುಂಬಸ್ಥರಿಗೆ ನ್ಯಾಯವನ್ನು ಒದಗಿಸಿ ಕೊಡುವದರೊಂದಿಗೆ ಮೃತರ ಕುಟುಂಬಕ್ಕೆ ಸರಕಾರದಿಂದ ಪರಿಹಾರವನ್ನು ಸಿಗುವ ಹಾಗೆ ತಮ್ಮ ವರದಿಯನ್ನು ಕೊಡಬೇಕು” ಎಂದು ಒತ್ತಾಯಿಸಿದ್ದಾರೆ.

ಜೂನ್ 11 ಶುಕ್ರವಾರದಂದು ಸಚಿವ ವಿನಯ ಕುಮಾರ್ ಸೊರಕೆಯವರ ಮತ್ತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕೊಡವೂರು ಮಾಜಿ ಶಾಸಕರಾದ ಗೋಪಾಲ್ ಪೂಜಾರಿ ಇವರ ನೇತೃತ್ವದಲ್ಲಿ ಯಡಮೋಗೆಯಲ್ಲಿ ಕೊಲೆಯಾದ ಉದಯ್ ಗಾಣಿಗರ ಅವರ ಮನೆಗೆ ಭೇಟಿ ನೀಡಿ ಅವರ ಪತ್ನಿ ಮಕ್ಕಳು ಮತ್ತು ಹೆತ್ತವರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಮೃತ ಉದಯ ಗಾಣಿಗ ರವರ ಪತ್ನಿ ಹೆತ್ತವರು ಮತ್ತು ಸ್ಥಳೀಯರು ಕಾಂಗ್ರೆಸ್ ನಿಯೋಗದ ಮುಂದೆ ನಮಗೆ ನ್ಯಾಯ ದೊರಕಿಸಿಕೊಡಿ ಈಗಾಗಲೇ ಕೆಲವರನ್ನು ಮಾತ್ರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇನ್ನು ಕೆಲವು ಪ್ರಭಾವಿ ನಾಯಕರು ಭಾಗಿಯಾಗಿದ್ದಾರೆ. ಅವರನ್ನು ಬಂಧಿಸಿ ಅವರಿಗೆ ಕಾನೂನು ರೀತಿಯಲ್ಲಿ ಶಿಕ್ಷೆ ನೀಡುವುದಕ್ಕೆ ನಮಗೆ ಸಹಾಯ ಮಾಡಬೇಕೆಂದು ಮೃತರ ಕುಟುಂಬದವರು ಕಾಂಗ್ರೆಸ್ ನಿಯೋಗಕ್ಕೆ ಮನವಿ ಮಾಡಿದರು.

ಇನ್ನು ಕುಟುಂಬದ ಮನವಿಯಂತೆ ಇಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಪ್ರಶಾಂತ್ ಜತನ್ನ , ರಮೇಶ್ ಗಾಣಿಗ, ರವಿ ಗಾಣಿಗ ಆಜ್ರಿ ಮತ್ತಿತರರು ಉಪಸ್ಥತರಿದ್ದರು.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

4 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

5 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

5 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

6 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

6 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

6 hours ago