ಉಡುಪಿ : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಬೆಂಗಳೂರು, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ಧಾರವಾಡ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಅಧ್ಯಯನ ಮತ್ತು ಅಭಿವೃದ್ಧಿ ಟ್ರಸ್ಟ್ ಮಂಗಳೂರು, ಉಡುಪಿ ಜಿಲ್ಲೆ ಎಸ್.ಸಿ-ಎಸ್.ಟಿ ಕೈಗಾರಿಕೋದ್ಯಮಿಗಳ ಸಂಘ (ರಿ) ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಪಡುಬಿದ್ರಿಯ ಸುಝಲಾನ್ ಆರ್. ಆರ್ ಕಾಲೋನಿ ಸಭಾಭವನದಲ್ಲಿ ಒಂದು ದಿನದ ಉದ್ಯಮಶೀಲತಾ ತಿಳುವಳಿಕೆ ಶಿಬಿರ ನಡೆಯಿತು.
ಶಿಬಿರದ ಅಧ್ಯಕ್ಷತೆ ವಹಿಸಿದ್ದ ಇಲಾಖೆಯ ಜಂಟಿ ನಿರ್ದೇಶಕ ಅರವಿಂದ ಡಿ. ಬಾಳೇರಿ, ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮ, ಸರಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರಗಳು, ಉದ್ಯಮ ನಿರ್ವಹಣೆ ಮಾಡುವ ವಿಧಾನ ಮುಂತಾದ ವಿಷಯಗಳ ಕುರಿತು ಸಂಕ್ಷಿಪ್ತ ಮಾಹಿತಿ ನೀಡಿದರು.
ಸಿಡಾಕ್ ಉಡುಪಿಯ ತರಬೇತುದಾರ ಪ್ರಥ್ವಿರಾಜ್ ನಾಯಕ್, ರಾಜ್ಯ ಸರಕಾರ ಮತ್ತು ಕೇಂದ್ರ ಸರಕಾರ ನಿರುದ್ಯೋಗ ನಿವಾರಣೆಗಾಗಿ ಹಮ್ಮಿಕೊಂಡಿರುವ ಧನಸಹಾಯ ಹಾಗೂ ಸಹಾಯಧನ ಯೋಜನೆಗಳನ್ನು ವಿವರಿಸಿ, ಉತ್ತಮ ಸಾಧಕರಾಗಿ ಉದ್ದಿಮೆಗಳನ್ನು ಬೆಳೆಸಿ ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಕೊಡುಗೆಯನ್ನು ನೀಡುವಂತೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಸಿಡಾಕ್‌ನ ಮಹಿಳಾ ಸಲಹೆಗಾರ್ತಿ ವಿದ್ಯಾ, ಎಸ್.ಸಿ-ಎಸ್.ಟಿ ಕೈಗಾರಿಕೋದ್ಯಮಿಗಳ ಸಂಘದ ಜಿಲ್ಲಾ ಅಧ್ಯಕ್ಷ ಉಮಾನಾಥ, ಯು.ಎನ್.ಡಿ.ಪಿ. ದಕ್ಷಿಣ ಕನ್ನಡ ಹಾಗೂ ಉಡುಪಿ ವಿಭಾಗದ ಜಿಲ್ಲಾ ವ್ಯವಸ್ಥಾಪಕ ಉಮೇಶ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಅಧ್ಯಯನ ಮತ್ತು ಅಭಿವೃದ್ಧಿ ಟ್ರಸ್ಟ್, ಮಂಗಳೂರಿನ ಅಧ್ಯಕ್ಷರಾದ ಮೋಹನಾಂಗಯ್ಯ ಸ್ವಾಮಿ, ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷ ರವಿ ಶೆಟ್ಟಿ, ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಾಣೇಶ್, ಪಲಿಮಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಗಾಯತ್ರಿ, ಅಬ್ಬೇಡಿ ಗ್ರಾಮ ಪಂಚಾಯತ್ ಅಧ್ಯಕ್ಷ ನಿಯಾಝ್ ಮತ್ತಿತರರು ಉಪಸ್ಥಿತರಿದ್ದರು.
ಸಿಡಾಕ್‌ನ ಮಹಿಳಾ ಸಲಹೆಗಾರ್ತಿ ಪ್ರವಿಷ್ಯ ನಿರೂಪಿಸಿದರು. ಶಿಬಿರದಲ್ಲಿ ಜಿಲ್ಲೆಯ ಸುಮಾರು 80 ಮಂದಿ ಅಭ್ಯರ್ಥಿಗಳು ಭಾಗವಹಿಸಿದ್ದರು.
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…
ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…