Featured

ಉಡುಪಿ : ಉದ್ಯಮಿಗೆ ವ್ಯವಹಾರದಲ್ಲಿ ಕೋಟಿ ರೂ. ವಂಚನೆ ಆರೋಪ; ದಂಪತಿ ವಿರುದ್ಧ ಪ್ರಕರಣ ದಾಖಲು – vishwanews24

ಉದ್ಯಮಿಗೆ ವ್ಯವಹಾರದಲ್ಲಿ ಕೋಟಿ ರೂ. ವಂಚನೆ ಆರೋಪ; ಉಡುಪಿ ಮೂಲದ ದಂಪತಿ ವಿರುದ್ಧ ಪ್ರಕರಣ ದಾಖಲು

ಉಡುಪಿ: ಹರಾಜಿನಲ್ಲಿ ಫ್ಲ್ಯಾಟ್ ಮತ್ತು ಚಿನ್ನದ ಖರೀದಿಸಿ ಕೊಡುವುದಾಗಿ ನಂಬಿಸಿ ಮುಂಬೈ ಮೂಲದ ಉದ್ಯಮಿ ಮಮತಾ ಶೆಟ್ಟಿಗೆ ಸುಮಾರು 4.78 ಕೋಟಿ ರೂ. ವಂಚನೆ ನಡೆಸಿರುವ ಆರೋಪ ಉಡುಪಿಯ ದಂಪತಿ ವಿರುದ್ಧ ಕೇಳಿಬಂದಿದೆ. ಈ ಸಂಬಂಧ ಸುಹಾಸಿನಿ ಶೆಟ್ಟಿ ಹಾಗೂ ಅವರ ಪತಿ ಪುನೀತ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿದೆ.

ಎರಡು ವರ್ಷಗಳಲ್ಲಿ ಹಂತ ಹಂತವಾಗಿ ವಂಚನೆ ಮಮತಾ ಶೆಟ್ಟಿಗೆ ದೂರದ ಸಂಬಂಧಿಯಾಗಿರುವ ಸುಹಾಸಿನಿ, 2024ರ ಜನವರಿಯಿಂದ ಜೂನ್‌ವರೆಗೆ ಹಂತ ಹಂತವಾಗಿ 4.78 ಕೋಟಿ ರೂ. ಹಣ ವರ್ಗಾಯಿಸಿಕೊಳ್ಳಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಹರಾಜಿನಲ್ಲಿ ಚಿನ್ನ, ಫ್ಲ್ಯಾಟ್ ಹಾಗೂ ಸ್ಕ್ರಾಪ್ ವ್ಯವಹಾರದಲ್ಲಿ ಲಾಭಕರ ಹೂಡಿಕೆ ಮಾಡಿಕೊಡುವುದಾಗಿ ಭರವಸೆ ನೀಡಿ ಹಣ ಪಡೆದುಕೊಂಡಿದ್ದರೂ, ನಂತರ ಯಾವುದೇ ಆಸ್ತಿಯನ್ನೂ ಖರೀದಿಸಿ ಕೊಡದೆ ವಂಚನೆ ಮಾಡಿರುವುದಾಗಿ ಆರೋಪಿಸಲಾಗಿದೆ.

ಇದನ್ನೂ ಓದಿ :

ಈ ಬಗ್ಗೆ 2024ರಲ್ಲಿ ಉಡುಪಿ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಸುಹಾಸಿನಿ ಶೆಟ್ಟಿ ನ್ಯಾಯಾಲಯದಿಂದ ಪ್ರಕರಣಕ್ಕೆ ಸ್ಟೇ ಆದೇಶ ಪಡೆದಿದ್ದರು ಎನ್ನಲಾಗಿದೆ. ನಂತರ ಕಿಶೋರ್ ಶೆಟ್ಟಿ ಮತ್ತು ನವೀನ್ ಮೂಲ್ಕಿ ಎನ್ನುವವರ ಮೂಲಕ ಸಂಧಾನ ಮಾತುಕತೆ ನಡೆದಿದ್ದರೂ ಅದು ವಿಫಲವಾಗಿದೆ. ಇದೀಗ ಸುಹಾಸಿನಿ ಮತ್ತು ಪತಿ ಮಣಿಪಾಲದಿಂದ ಮಂಗಳೂರಿಗೆ ಸ್ಥಳಾಂತರಗೊಂಡ ಹಿನ್ನೆಲೆ, ಮಮತಾ ಶೆಟ್ಟಿ ಮಂಗಳೂರು ಪೊಲೀಸ್ ಆಯುಕ್ತರನ್ನು ಸಂಪರ್ಕಿಸಿ ಮರು ತನಿಖೆಗೆ ಮನವಿ ಮಾಡಿದ್ದಾರೆ. ಪ್ರಕರಣವನ್ನು ಮರು ಪರಿಶೀಲಿಸುವುದಾಗಿ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಭರವಸೆ ನೀಡಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago