ಬೆಂಗಳೂರು: ರಾಜ್ಯದ ಗಮನ ಸೆಳೆದಿದ್ದ ಉಡುಪಿಯ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಪತ್ನಿ ರಾಜೇಶ್ವರಿ ಶೆಟ್ಟಿಗೆ ಹೈಕೋರ್ಟ್ ಜಾಮೀನು ನೀಡಿದೆ.
ಉಡುಪಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ವಿಧಿಸಿರುವ ಜೀವಾವಧಿ ಶಿಕ್ಷೆ ರದ್ದುಪಡಿಸಬೇಕು ಮತ್ತು ಅಧೀನ ನ್ಯಾಯಾಲಯ ವಿಧಿಸಿರುವ ಶಿಕ್ಷೆಯನ್ನು ಅಮಾನತಿನಲ್ಲಿ ಇಟ್ಟು ಜಾಮೀನು ಮಂಜೂರು ಮಾಡಬೇಕು ಎಂದು ಕೋರಿ ರಾಜೇಶ್ವರಿ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಜಿ ನರೇಂದರ್ ಮತ್ತು ಇ ಎಸ್ ಇಂದಿರೇಶ್ ಅವರಿದ್ದ ವಿಭಾಗೀಯ ಪೀಠ ನಡೆಸಿತು.
ಮಧ್ಯಂತರ ಮನವಿ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ.ನರೇಂದರ್ ಮತ್ತು ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಅವರಿದ್ದ ವಿಭಾಗೀಯ ನ್ಯಾಯಪೀಠ ರಾಜೇಶ್ವರಿ ಶೆಟ್ಟಿ ಅವರಿಗೆ ವಿಧಿಸಿರುವ ಜಾಮೀನು ನೀಡಿ ಗುರುವಾರ ಆದೇಶಿಸಿದೆ.
2016ರ ಜುಲೈ 28ರಂದು ಉದ್ಯಮಿ ಇಂದ್ರಾಳಿಯ ಭಾಸ್ಕರ್ ಅವರನ್ನು ಭೀಕರವಾಗಿ ಕೊಲೆ ಮಾಡಿ ಶವವನ್ನು ಹೋಮಕುಂಡದಲ್ಲಿ ದಹಿಸಲಾಗಿತ್ತು. ಅವಶೇಷಗಳನ್ನು ಹತ್ತಿರದ ನದಿಗೆ ಎಸೆಯಲಾಗಿತ್ತು. ಅದೇ ತಿಂಗಳ 31ರಂದು ತಮ್ಮ ಮಗ ನಾಪತ್ತೆಯಾಗಿರುವ ಬಗ್ಗೆ ಭಾಸ್ಕರ್ ಅವರ ತಾಯಿ ಮಣಿಪಾಲ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ತನಿಖೆ ನಡೆಸಿದ ಪೊಲೀಸರು ಆಗಸ್ಟ್ ನಲ್ಲಿ ಆರೋಪಿಗಳನ್ನು ಬಂಧಿಸಿದ್ದರು.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…