Featured

ಉಡುಪಿ: ಉದ್ಯಾವರದ ಕಲ್ಸಂಕದಲ್ಲಿ ಏಳನೇ ಶತಮಾನದ ಆಳುಪರ ಕಾಲದ ಶಾಸನ ಪತ್ತೆ -Vishwanews24

ಉಡುಪಿ: ಉದ್ಯಾವರದ ಕಲ್ಸಂಕದಲ್ಲಿ ಏಳನೇ ಶತಮಾನದ ಆಳುಪರ ಕಾಲದ ಶಾಸನ ಪತ್ತೆ -Vishwanews24

ಉಡುಪಿ‌: ಜಿಲ್ಲೆಯ ಉದ್ಯಾವರದ ಕಲ್ಸಂಕದಲ್ಲಿ ನಾರಾಯಣ ಪೂಜಾರಿ ಎಂಬವರ ಜಾಗದಲ್ಲಿ ರಸ್ತೆ ಅಗಲೀಕರಣ ಸಂದರ್ಭ ಸರಕಾರಿ ಪದವಿ ಪೂರ್ವ ಕಾಲೇಜು-ಹೆಜಮಾಡಿ ದೈಹಿಕ ಶಿಕ್ಷಕ ಅಲ್ವಿನ್ ಅಂದ್ರಾದೆ ಶಾಸನವೊಂದನ್ನು ಪತ್ತೆ ಮಾಡಿದ್ದಾರೆ.

ಈ ಶಾಸನವನ್ನು ಪರಿಶೀಲಿಸಿದ ಇತಿಹಾಸ ಮತ್ತು ಪುರಾತತ್ವ ಸಂಶೋಧನಾರ್ಥಿ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಅವರು ಇದು 7ನೇ ಶತಮಾನದ ಆಳುಪರ ಶಾಸನವೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ‌‌.

ಕೆಂಪುಕೋಟೆ ಮೇಲೆ ಅನ್ಯ ಧ್ವಜ ಹಾರಿಸಿದ ಪ್ರಕರಣ : ಓರ್ವ ಪೊಲೀಸ್ ವಶಕ್ಕೆ -Vishwanews24

ಅಗ್ನಿ ಶಿಲೆ (Volcanic Rock) ಯಿಂದ ಕೊರೆಯಲ್ಪಟ್ಟ ‌ಈ ಶಾಸನವು 3 ಅಡಿ ಎತ್ತರ ‌ಹೊಂದಿದ್ದು,‌ ಶಿಲೆಯ ಎರಡು ಭಾಗದಲ್ಲಿ‌ ಶಾಸನವನ್ನು ಬರೆಯಲಾಗಿದೆ‌. ಶಾಸನದ ಒಂದು ಮಗ್ಗುಲಲ್ಲಿ 5 ಸಾಲುಗಳಿದ್ದು, ಇನ್ನೊಂದು‌ ಮಗ್ಗುಲಲ್ಲಿ 6 ಸಾಲುಗಳಿವೆ‌. 7ನೇ ಶತಮಾನದ ಕನ್ನಡ ಲಿಪಿ ಮತ್ತು ಕನ್ನಡ ಭಾಷೆಯಲ್ಲಿರುವ ಶಾಸನದ ಹೆಚ್ಚಿನ ಅಕ್ಷರಗಳು‌ ತೃಟಿತಗೊಂಡಿದ್ದು, ಕೊನೆಯಲ್ಲಿ ನಿರಿದ ಕಲ್ಲು ಎಂಬ ಉಲ್ಲೇಖವಿದೆ. ಹಾಗಾಗಿ ಈ‌ ಶಾಸನವನ್ನು ಯಾವುದೋ ಘಟನೆಯ‌ ನೆನಪಿಗಾಗಿ‌ ಹಾಕಿರಬಹುದೆಂದು ಮತ್ತು ಈ ಶಾಸನದ ಹೆಚ್ಚಿನ ಅಧ್ಯಯನವನ್ನು ಮಾಡುವುದಾಗಿ ಸಂಶೋಧನಾರ್ಥಿ ಶ್ರುತೇಶ್ ತಿಳಿಸಿದ್ದಾರೆ.

ಈ ಕ್ಷೇತ್ರಕಾರ್ಯ ಶೋಧನೆಯ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತ ಗಣೇಶ್‌ ರಾಜ್ ಸರಳಬೆಟ್ಟು‌ ಹಾಗೂ ಮಂಜುನಾಥ ಆಚಾರ್ಯ ಪಳ್ಳಿ ಮತ್ತು ಸ್ಥಳೀಯರು ಸಹಕಾರ ನೀಡಿದರು.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

4 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

4 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

7 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

7 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

7 hours ago