ಉಡುಪಿ: ಜಿಲ್ಲೆಯ ಉದ್ಯಾವರದ ಕಲ್ಸಂಕದಲ್ಲಿ ನಾರಾಯಣ ಪೂಜಾರಿ ಎಂಬವರ ಜಾಗದಲ್ಲಿ ರಸ್ತೆ ಅಗಲೀಕರಣ ಸಂದರ್ಭ ಸರಕಾರಿ ಪದವಿ ಪೂರ್ವ ಕಾಲೇಜು-ಹೆಜಮಾಡಿ ದೈಹಿಕ ಶಿಕ್ಷಕ ಅಲ್ವಿನ್ ಅಂದ್ರಾದೆ ಶಾಸನವೊಂದನ್ನು ಪತ್ತೆ ಮಾಡಿದ್ದಾರೆ.
ಈ ಶಾಸನವನ್ನು ಪರಿಶೀಲಿಸಿದ ಇತಿಹಾಸ ಮತ್ತು ಪುರಾತತ್ವ ಸಂಶೋಧನಾರ್ಥಿ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಅವರು ಇದು 7ನೇ ಶತಮಾನದ ಆಳುಪರ ಶಾಸನವೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕೆಂಪುಕೋಟೆ ಮೇಲೆ ಅನ್ಯ ಧ್ವಜ ಹಾರಿಸಿದ ಪ್ರಕರಣ : ಓರ್ವ ಪೊಲೀಸ್ ವಶಕ್ಕೆ -Vishwanews24
ಅಗ್ನಿ ಶಿಲೆ (Volcanic Rock) ಯಿಂದ ಕೊರೆಯಲ್ಪಟ್ಟ ಈ ಶಾಸನವು 3 ಅಡಿ ಎತ್ತರ ಹೊಂದಿದ್ದು, ಶಿಲೆಯ ಎರಡು ಭಾಗದಲ್ಲಿ ಶಾಸನವನ್ನು ಬರೆಯಲಾಗಿದೆ. ಶಾಸನದ ಒಂದು ಮಗ್ಗುಲಲ್ಲಿ 5 ಸಾಲುಗಳಿದ್ದು, ಇನ್ನೊಂದು ಮಗ್ಗುಲಲ್ಲಿ 6 ಸಾಲುಗಳಿವೆ. 7ನೇ ಶತಮಾನದ ಕನ್ನಡ ಲಿಪಿ ಮತ್ತು ಕನ್ನಡ ಭಾಷೆಯಲ್ಲಿರುವ ಶಾಸನದ ಹೆಚ್ಚಿನ ಅಕ್ಷರಗಳು ತೃಟಿತಗೊಂಡಿದ್ದು, ಕೊನೆಯಲ್ಲಿ ನಿರಿದ ಕಲ್ಲು ಎಂಬ ಉಲ್ಲೇಖವಿದೆ. ಹಾಗಾಗಿ ಈ ಶಾಸನವನ್ನು ಯಾವುದೋ ಘಟನೆಯ ನೆನಪಿಗಾಗಿ ಹಾಕಿರಬಹುದೆಂದು ಮತ್ತು ಈ ಶಾಸನದ ಹೆಚ್ಚಿನ ಅಧ್ಯಯನವನ್ನು ಮಾಡುವುದಾಗಿ ಸಂಶೋಧನಾರ್ಥಿ ಶ್ರುತೇಶ್ ತಿಳಿಸಿದ್ದಾರೆ.
ಈ ಕ್ಷೇತ್ರಕಾರ್ಯ ಶೋಧನೆಯ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತ ಗಣೇಶ್ ರಾಜ್ ಸರಳಬೆಟ್ಟು ಹಾಗೂ ಮಂಜುನಾಥ ಆಚಾರ್ಯ ಪಳ್ಳಿ ಮತ್ತು ಸ್ಥಳೀಯರು ಸಹಕಾರ ನೀಡಿದರು.
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…