Featured

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ – vishwanews24

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ

ಉಡುಪಿ: ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ ಯಶಸ್ಸು ಖಚಿತ. ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶಗಳು ಬರುವಂತಹ ವಾತಾವರಣ ಇಂದು ನಿರ್ಮಾಣವಾಗುತ್ತಿದೆ ಎಂದು ಎಂ.ಆರ್.ಜಿ. ಗ್ರೂಪ್ ಅಧ್ಯಕ್ಷ ಡಾ. ಕೆ. ಪ್ರಕಾಶ್ ಶೆಟ್ಟಿ ಹೇಳಿದರು.

ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್‌ನ ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್ ವತಿಯಿಂದ ನಿಟ್ಟೆಯ ಎನ್‌ಎಂಎಎಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಹಯೋಗದಲ್ಲಿ ಹಾಗೂ ಎಂ.ಆರ್.ಜಿ. ಗ್ರೂಪ್‌ನ ಪ್ರಾಯೋಜಕತ್ವದಲ್ಲಿ ಕುಂತಳ ನಗರದ ಆಶಾ ಪ್ರಕಾಶ್ ಶೆಟ್ಟಿ ಕನ್ವೆನ್ಷನ್ ಸೆಂಟರ್ ಮತ್ತು ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ 5ನೇ ಬೃಹತ್ ಉದ್ಯೋಗ ಮೇಳ ಮತ್ತು ಸ್ಟಡಿ ಅಬ್ರಾಡ್ ಎಕ್ಸ್‌ಪೋ-2026 ಉದ್ಘಾಟಿಸಿ ಅವರು ಮಾತನಾಡಿದರು.

ಹುಟ್ಟೂರು, ನೆಲ, ಜಲ ಹಾಗೂ ಮಣ್ಣಿನ ನೆನಪನ್ನು ಎಂದಿಗೂ ಮರೆಯಬಾರದು. ಈ ಭಾವನೆಯಿಂದಲೇ ತಮಗೆ ಸಾಧ್ಯವಾದಷ್ಟು ಸಮಾಜಮುಖಿ ಕಾರ್ಯಗಳಿಗೆ ನೆರವು ನೀಡುತ್ತಿದ್ದೇನೆ. ಕುಂತಳನಗರದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದು, ಇದೇ ಪರಿಸರದಲ್ಲಿ ಉದ್ಯೋಗ ಮೇಳ ಆಯೋಜಿಸಿರುವುದು ಸಂತಸ ತಂದಿದೆ. ತಾನೂ ಒಂದು ಕಾಲದಲ್ಲಿ ಉದ್ಯೋಗ ಅರಸಿಕೊಂಡು ಹೋದವನು. ಆದರೆ, ಇಂದಿನ ಯುವಜನರು ಅದೃಷ್ಟವಂತರು.

ಉದ್ಯೋಗ ಹುಡುಕಿಕೊಂಡು ಹೋಗುವ ಬದಲು, ಉದ್ಯೋಗಾವಕಾಶಗಳೇ ಅವರ ಬಳಿಗೆ ಬರುತ್ತಿವೆ ಎಂದರು.ದೇಶ-ವಿದೇಶಗಳಿಂದ ವಿದ್ಯಾರ್ಥಿಗಳು ಇಲ್ಲಿಗೆ ಬಂದು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ನಮ್ಮ ಜಿಲ್ಲೆಯ ವಿದ್ಯಾರ್ಥಿಗಳು ಶಿಕ್ಷಣ ಪೂರ್ಣಗೊಳಿಸಿದ ಬಳಿಕ ಉದ್ಯೋಗಕ್ಕಾಗಿ ಬೇರೆಡೆಗೆ ತೆರಳುವ ಪರಿಸ್ಥಿತಿ ಬದಲಾಗಬೇಕು.

ಜಿಲ್ಲೆಯಲ್ಲಿಯೇ ಅವರಿಗೆ ಸೂಕ್ತ ಉದ್ಯೋಗಾವಕಾಶಗಳನ್ನು ಕಲ್ಪಿಸಿ, ಇಲ್ಲಿಯೇ ನೆಲೆಸುವಂತೆ ಮಾಡುವ ಪ್ರಯತ್ನಗಳು ನಡೆಯಬೇಕು. ಯುವಜನರು ಗುರಿಯೊಂದಿಗೆ ನಿರಂತರ ಪರಿಶ್ರಮಪಟ್ಟರೆ ಯಶಸ್ಸು ಸಾಧಿಸಲು ಸಾಧ್ಯ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಸ್ಟಡಿ ಅಬ್ರಾಡ್ ಎಕ್ಸ್‌ಪೋ-2026 ಅನ್ನು ನಿಟ್ಟೆ ವಿಶ್ವವಿದ್ಯಾಲಯದ ಕುಲಪತಿ ಎನ್. ವಿಶಾಲ್ ಹೆಗ್ಡೆ ಉದ್ಘಾಟಿಸಿದರು. ಮಾಹೆಯ ಸಹಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ್ ಅವರು ‘ಕೌಶಲ್ಯ ಸ್ಕಿಲ್ಸ್-2026’ ಬುಲೆಟಿನ್ ಬಿಡುಗಡೆಗೊಳಿಸಿದರು.

ಶಾಸಕರಾದ ಯಶ್‌ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ, ಕೆ. ಜಯಪ್ರಕಾಶ್ ಹೆಗ್ಡೆ, ಪ್ರಮೋದ್ ಮಧ್ವರಾಜ್, ಎನ್‌ಎಂಎಎಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಪ್ರಾಂಶುಪಾಲ ಡಾ. ನಿರಂಜನ್ ಎನ್. ಚಿಪ್ಳೂಂಕರ್, ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ, ಪ್ರಸಾದ್ ನೇತ್ರಾಲಯದ ವೈದ್ಯಕೀಯ ನಿರ್ದೇಶಕ ಡಾ. ಕೃಷ್ಣಪ್ರಸಾದ್, ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಉದಯಕುಮಾರ್ ಶೆಟ್ಟಿ, ಉದ್ಯಮಿಗಳಾದ ಮುನಿಯಾಲು ಉದಯಕುಮಾರ್ ಶೆಟ್ಟಿ, ವಿಜಯ ಹೆಗ್ಡೆ, ಕಾರ್ತಿಕ್ ಶೆಟ್ಟಿ, ಪಡುಬಿದ್ರಿ ಬಂಟರ ಸಂಘದ ಮಾಜಿ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ, ಉಡುಪಿ ಗ್ರಾಮೀಣ ಬಂಟರ ಸಂಘದ ಅಧ್ಯಕ್ಷ ಡಾ. ಎಚ್.ಬಿ. ಶೆಟ್ಟಿ, ಜಾಗತಿಕ ಬಂಟರ ಸಂಘದ ಅಧ್ಯಕ್ಷ ಹರೀಶ್ ಶೆಟ್ಟಿ ಐಕಳ, ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷ ಹರಿಪ್ರಸಾದ್ ರೈ, ಟ್ರಸ್ಟ್‌ನ ಕೋಶಾಧಿಕಾರಿ ವಿಜಿತ್ ಶೆಟ್ಟಿ ಹಾಗೂ ಟ್ರಸ್ಟಿ ಪದ್ಮನಾಭ ಹೆಗ್ಡೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

Vishwa News 24

Recent Posts

ಕಾಪು ಬೀಚ್‌ನಲ್ಲಿ ನಾಪತ್ತೆಯಾಗಿದ್ದ ಇಬ್ಬರು ಹುಡುಗರ ಮೃತದೇಹ ಪತ್ತೆ -vishwanews24

ಕಾಪು ಬೀಚ್‌ನಲ್ಲಿ ಸಮುದ್ರದ ಬೃಹತ್ ಅಲೆಗಳ ಹೊಡೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಇಬ್ಬರು ಹುಡುಗರ ಮೃತದೇಹ ಪತ್ತೆ.. ಉಡುಪಿ: ಕಾಪು ಬೀಚ್‌ನಲ್ಲಿ…

6 hours ago

ಕಾಪುವಿನಲ್ಲಿ ನ.27ರಂದು ಬೃಹತ್ ಉಚಿತ ಉದ್ಯೋಗ ಮೇಳ -vishwanews24

ಕಾಪುವಿನಲ್ಲಿ ನ.27ರಂದು ಬೃಹತ್ ಉಚಿತ ಉದ್ಯೋಗ ಮೇಳ ವಿದೇಶಿ ಕಂಪೆನಿ ಸೇರಿದಂತೆ ಹತ್ತಾರು ಸಂಸ್ಥೆಗಳ ಭಾಗಹಿಸುವಿಕೆ ಕಾಪು: ಯುವಜನತೆಗೆ ಉದ್ಯೋಗಾವಕಾಶ…

1 day ago

ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ಮಧ್ವರಾಜ್ ನೇಮಕ -vishwanews24

ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ಮಧ್ವರಾಜ್ ನೇಮಕ ನವದೆಹಲಿ: ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪದಾಧಿಕಾರಿಗಳನ್ನು…

3 days ago

ನ. 24, 25 ರಂದು ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜಾರ್ದೆ ಮಾರಿಪೂಜೆ ಸಂಭ್ರಮ – vishwanews24

ನ. 24, 25 ರಂದು ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜಾರ್ದೆ ಮಾರಿಪೂಜೆ ಸಂಭ್ರಮ ಇತಿಹಾಸ ಪ್ರಸಿದ್ಧ ಕಾಪು ಹಳೆ…

5 days ago

ಸಂಬಂಧಿಕರನ್ನು ಬೀಳ್ಕೊಡಲು ಬಂದ 12 ಮಂದಿ ವಂದೇ ಭಾರತ್‌ ರೈಲಲ್ಲಿ ಲಾಕ್‌ ; 36 ಸಾವಿರ ದಂಡ – vishwanews24

ಸಂಬಂಧಿಕರನ್ನು ಬೀಳ್ಕೊಡಲು ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರವೇಶಿಸಿದ 12 ಮಂದಿ ಸ್ವಯಂಚಾಲಿತ ಬಾಗಿಲುಗಳು ಮುಚ್ಚಿದ್ದರಿಂದ ರೈಲಿನೊಳಗೆ ಲಾಕ್ 140 ಕಿ.ಮೀ…

5 days ago

ಗ್ರಾಹಕರಿಗೆ ಗುಡ್ ನ್ಯೂಸ್: ಸೋನಾ ಮಸೂರಿ ಅಕ್ಕಿ ಬೆಲೆಯಲ್ಲಿ ಭಾರೀ ಇಳಿಕೆ, ಕೆಜಿಗೆ ₹ 20ರವರೆಗೆ ಕಡಿತ – vishwanews24

ಗ್ರಾಹಕರಿಗೆ ಗುಡ್ ನ್ಯೂಸ್: ಸೋನಾ ಮಸೂರಿ ಅಕ್ಕಿ ಬೆಲೆಯಲ್ಲಿ ಭಾರೀ ಇಳಿಕೆ, ಕೆಜಿಗೆ ₹20ರವರೆಗೆ ಕಡಿತ ಬೆಂಗಳೂರು: ಮಾರುಕಟ್ಟೆಯಲ್ಲಿ ಹೊಸ…

5 days ago