Featured

ಉಡುಪಿ : ಎಂಡೋ ಸಲ್ಫಾನ್ ಸಂತ್ರಸ್ಥರಿಗೆ ವಿವಿಧ ಸೌಲಭ್ಯಗಳನ್ನುಒದಗಿಸಿ: ಜಿಲ್ಲಾಧಿಕಾರಿ ಕೂರ್ಮರಾವ್ ಎಂ -Vishwanews24

ಉಡುಪಿ : ಎಂಡೋ ಸಲ್ಫಾನ್ ಸಂತ್ರಸ್ಥರಿಗೆ ವಿವಿಧ ಸೌಲಭ್ಯಗಳನ್ನುಒದಗಿಸಿ: ಜಿಲ್ಲಾಧಿಕಾರಿ ಕೂರ್ಮರಾವ್ ಎಂ -Vishwanews24

ಉಡುಪಿ : ಎಂಡೋಸಲ್ಫಾನ್ ಪೀಡಿತರಿಗೆ ಅಗತ್ಯ ವೈದ್ಯಕೀಯ ನೆರವುಗಳನ್ನು ಒದಗಿಸುವುದರ ಜೊತೆಗೆ ಸರ್ಕಾರದ ಸೌಲಭ್ಯಗಳನ್ನು ಒದಗಿಸಿ , ಅವರ ಕುಂದು ಕೊರತೆಗಳಿಗೆ ಸ್ಪಂದಿಸುವ ಕಾರ್ಯವನ್ನು ಚಾಚೂ ತಪ್ಪದೆ ಮಾಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮರಾವ್ ಎಂ ಸೂಚಿಸಿದರು.

ಅವರು ಇಂದು ನಗರದ ಜಿಲ್ಲಾ ಪಂಚಾಯತ್‌ನ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಎಂಡೋಸಲ್ಫಾನ್ ಪೀಡಿತ ಸಂತ್ರಸ್ಥರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಹಾಗೂ ಕುಂದುಕೊರತೆಗಳ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಎಂಡೋಸಲ್ಫಾನ್ ಭಾದ್ಯತೆಯಿಂದ ಕೆಲವರು ಶಾಶ್ವತ ಅಂಗವಿಕಲತೆಯನ್ನು ಹೊಂದಿದರೆ ಇನ್ನೂ ಕೆಲವರು ಮಾರಕ ರೋಗಗಳಾದ ಕ್ಯಾನ್ಸರ್, ಅಸ್ತಮಾ, ಚರ್ಮರೋಗ, ಅಪಸ್ಮಾರ ಮತ್ತಿತರ ರೋಗಗಳಿಗೆ ತುತ್ತಾಗುತ್ತಿದ್ದಾರೆ , ಇವರಿಗೆ ಉಚಿತ ಆರೋಗ್ಯ ಸೌಲಭ್ಯಗಳನ್ನು ಒದಗಿಸುವುದರ ಜೊತೆಗೆ ಸರ್ಕಾರದ ಇತರೆ ಸೌಲಭ್ಯಗಳನ್ನು ಒದಗಿಸಬೇಕು ಎಂದು ಸೂಚನೆ ನೀಡಿದರು.

ಎಂಡೋಸಲ್ಫಾನ್ ಭಾಧಿತ ಪ್ರದೇಶಗಳಲ್ಲಿ ಅಂಗವಿಕಲತೆ ಹೊಂದದೇ ಇತರೇ ಕಾಯಿಲೆಗಳನ್ನು ಇದರಿಂದಲೇ ಉಂಟಾಗಿದೆ ಎಂಬುದರ ಬಗ್ಗೆ ಸರ್ವೆ ಕಾರ್ಯವನ್ನು ಮಾಡಿಸುವುದರೊಂದಿಗೆ ಅವರಿಗೆ ಅಂಗವಿಕಲರಿಗೆ ನೀಡುವ ಸೌಲಭ್ಯಗಳನ್ನು ಒದಗಿಸುವ ಕುರಿತು ರಾಜ್ಯಮಟ್ಟದ ಮಂಡಳಿಗೆ ಶಿಫಾರಸ್ಸು ಮಾಡಬೇಕೆಂದು ಸೂಚನೆ ನೀಡಿದರು.

ಸರ್ಕಾರದ ಸೌಲಭ್ಯಗಳು ಆದೇಶಗಳು ಸೇರಿದಂತೆ ಮತ್ತಿತರ ಕಾರ್ಯಕ್ರಮಗಳ ಕುರಿತ ಮಾಹಿತಿಗಳನ್ನು ಪೀಡಿತರಿಗೆ ತಲುಪಲು ಅನುಕೂಲವಾಗುವ ರೀತಿಯಲ್ಲಿ ಜಿಲಾಮಟ್ಟದ ವೆಬ್‌ಸೈಟ್ ನ್ನು ತೆರೆಯಬೇಕು , ಇದರಲ್ಲಿಯೇ ಅವರುಗಳ ಕುಂದು ಕೊರೆತೆ ಅರ್ಜಿಗಳನ್ನು ಸಲ್ಲಿಸಲು ಅನುವು ಮಾಡಿಕೊಡುವುದರ ಜೊತೆಗೆ ಅವುಗಳಿಗೆ ನಿಯಮಾನುಸಾರವಾಗಿ ಸ್ಪಂದಿಸುವ ಕಾರ್ಯ ತತ್‌ಕ್ಷಣದಲ್ಲಿ ಮಾಡಬೇಕು ಎಂದರು.

ಎಂಡೋ ಪೀಡಿತ ವಿಕಲಚೇತನರಿಗೆ ಫಿಜಿಯೋಥೆರಪಿ ಚಿಕಿತ್ಸೆ ನೀಡಲು ಶಾಶ್ವತ ಪುರ್ನವಸತಿ ಕೇಂದ್ರವನ್ನು ಭಾಧಿತ ಪ್ರದೇಶಗಳಲ್ಲಿ ತೆರೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಗುರುತಿನ ಚೀಟಿ ಹಾಗೂ ಪಾಸ್ ನ್ನು ತಪ್ಪದೇ ನೀಡಬೇಕು ಎಂದರು.

ತಾಲೂಕು ಮಟ್ಟದಲ್ಲಿ ಎಂಡೋಸಲ್ಫಾನ್ ಸಂತೃಸ್ತರಿಗೆ ಸೌಲಭ್ಯ ನೀಡುವ ಹಾಗೂ ಕುಂದು ಕೊರತೆಗಳನ್ನು ಚರ್ಚಿಸುವ ಸಭೆಗಳನ್ನು ಪ್ರತೀ 3 ತಿಂಗಳಿಗೊಮ್ಮೆ ಕರೆಯಬೇಕು ಸಾಧ್ಯವಾದಷ್ಟು ಸ್ಥಳೀಯವಾಗಿಯೇ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಸೂಚನೆ ನೀಡಿದರು

ಜಿಲ್ಲೆಯಲ್ಲಿ ಗೇರು ಬೀಜದ ಮರಳಿಗೆ ಹಾನಿ ಉಂಟು ಮಾಡುವ ಕೀಟಗಳ ನಿಯಂತ್ರಣಕ್ಕೆ ಕುಂದಾಪುರ ತಾಲೂಕಿನ 29, ಉಡುಪಿಯ 5 ಹಾಗೂ ಕಾರ್ಕಳದ 9 ಗ್ರಾಮಗಳು ಸೇರಿದಂತೆ 43 ಗ್ರಾಮಗಳಲ್ಲಿ ಎಂಡೋಸಲ್ಫಾನ್ ಸಿಂಪಡಿಸಿದ್ದು, ಇದು ಸುತ್ತಲಿನ ಇತರೆ ಗ್ರಾಮಗಳಿಗೂ ಭಾಧಿಸಿ ಒಟ್ಟು 86 ಗ್ರಾಮ ಜನರಿಗೆ ತೊಂದರೆ ಉಂಟಾಗಿರುತ್ತದೆ ಎಂದರು.

ಜಿಲ್ಲೆಯಲ್ಲಿ 669 ಪುರುಷ , 620 ಮಹಿಳೆ , 353 ಮಕ್ಕಳೂ ಸೇರಿದಂತೆ ಒಟ್ಟು 1642 ಎಂಡೋಸಲ್ಫಾನ್ ಪೀಡಿತರಾಗಿದ್ದು ಅವರಲ್ಲಿ 120 ಜನ ಮರಣ ಹೊಂದಿ, ಪ್ರಸ್ತುತ 1522 ಪೀಡಿತರಿದ್ದಾರೆ. ಅವರಲ್ಲಿ 203 ಜನರಿಗೆ ಶೇ.25 ರಷ್ಟು , 351 ಜನರಿಗೆ ಶೇ.25 ರಿಂದ 59 ರಷ್ಟು ಹಾಗೂ 968 ಜನರಿಗೆ ಶೇ.60 ಕ್ಕಿಂತ ಹೆಚ್ಚು ಅಂಗವಿಕಲತೆ ಹೊಂದಿರುತ್ತಾರೆ ಎಂದರು.

ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ ಮಾತನಾಡಿ,ಶಾಶ್ವತ ಪುರ್ನವಸತಿ ಕೇಂದ್ರವನ್ನು ತೆರೆಯುವವರೆಗೂ ಪೀಡಿತರಿಗೆ ಫಿಜಿಯೋಥೆರಪಿ ಚಿಕಿತ್ಸೆಯನ್ನು ವಿಕಲಚೇತನರ ಇಲಾಖೆ ಹಾಗೂ ಎನ್.ಜಿಓ ಗಳ ಸಹಯೋಗದೊಂದಿಗೆ ನೀಡಬೇಕೆಂದು ತಿಳಿಸಿದರು.

ಪ್ರಾಥಮಿಕ ಆರೋಗ್ಯ ಕೇಂಧ್ರಗಳಿಗೆ ಚಿಕಿತ್ಸೆಗಾಗಿ ಬರುವ ಎಂಡೋಸಲ್ಪಾನ್ ಪೀಡಿತರಿಗೆ ಔಷಧಿ ಗಳನ್ನು ನೀಡಲು ಆದ್ಯತೆಯ ಮೇಲೆ ಖರೀದಿ ಮಾಡಿ, ಉಚಿತವಾಗಿ ವಿತರಿಸಬೇಕು ಎಂದರು.

ಸಭೆಯಲ್ಲಿ ವಿವಿಧ ಸ್ವಯಂ ಸೇವಾ ಸಂಸ್ಥೆಯ ಪದಾಧಿಕಾರಿಗಳು ಭಾಗವಹಿಸಿ, ಎಂಡೋಸಲ್ಫಾನ್ ಪೀಡಿತರಿಗೆ ಅವಶ್ಯವಿರುವ ಬೇಡಿಕೆಗಳನ್ನು ಸಮಿತಿಯ ಮುಂದೆ ತಂದರು, ಬಾಧಿತ ಪ್ರದೇಶದಲ್ಲಿ ಜನ್ಮ ಹೊಂದಿದ ಹೆಣ್ಣು ಮಕ್ಕಳು ಮದುವೆಯಾಗಿ ಇತರೆ ಪ್ರದೇಶಗಳಿಗೆ ಹೋಗಿದ್ದು, ಅವರುಗಳಿಗೆ ಜನಿಸಿದ ಮಕ್ಕಳಿಗೂ ಸಹ ಎಂಡೋಸಲ್ಫಾನ್ ದುಷ್ಪರಿಣಾಮ ಬೀರಿದ್ದು ಅವರಿಗೂ ಸಹ ಸವಲತ್ತುಗಳನ್ನು ಒದಗಿಸಬೇಕು ಎಂದರು.

ಸಭೆಯಲ್ಲಿ ಕುಂದಾಪುರ ಉಪವಿಭಾಗಾಧಿಕಾರಿ ರಾಜು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ, ಡಾ.ಪ್ರಶಾಂತ್ ಭಟ್, ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಹಾಗೂ ತಾಲೂಕುಗಳ ತಹಶೀಲ್ದಾರರು ಸಭೆಯಲ್ಲಿ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago