Featured

ಉಡುಪಿ ಎಕ್ಸ್​ಪ್ರೆಸ್​ ರೈಲಿನಲ್ಲಿ 1.65 ಕೋಟಿ ಅಕ್ರಮ ಹಣ ಪತ್ತೆ..

ಉಡುಪಿ:ನೇತ್ರಾವತಿ ಎಕ್ಸ್​ಪ್ರೆಸ್​ನ ಬೋಗಿ ನಂ.16345ರಲ್ಲಿ ರಾಜಸ್ಥಾನ ಮೂಲದ ಇಬ್ಬರು ವ್ಯಕ್ತಿಗಳನ್ನು ರೈಲ್ಪೆ ಪೊಲೀಸರು ಇಂದ್ರಾಳಿ ರೈಲ್ಪೇ ನಿಲ್ದಾಣದಲ್ಲಿ ಶುಕ್ರವಾರ ಬೆಳಗ್ಗೆ ಬಂಧಿಸಿ, ನಗದು ವಶ ಪಡಿಸಿಕೊಂಡಿದ್ದಾರೆ.

ರೈಲಿನಲ್ಲಿ ಪದೇ ಪದೇ ನಡೆಯುವ ಕಳ್ಳತನ ಪತ್ತೆಗಾಗಿ ರೈಲ್ವೆ ರಕ್ಷಣಾ ಸಿಬ್ಬಂದಿ ಹೆಚ್ಚುವರಿಯಾಗಿ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಶುಕ್ರವಾರ ತಪಾಸಣೆ ನಡೆಸುವಾಗ ರೈಲಿನ ಎಸಿ ಬೋಗಿಯಲ್ಲಿದ್ದ ಇಬ್ಬರ ನಡವಳಿಕೆ ಪೊಲೀಸರಿಗೆ ಅನುಮಾನ ಹುಟ್ಟಿಸಿದೆ. ಟಿಕೆಟ್ ಪರಿಶೀಲಿಸಿದಾಗ ಟಿಕೆಟ್‌ನಲ್ಲಿದ್ದ ಹೆಸರಿಗೂ ಆರೋಪಿಗಳ ಹೆಸರಿಗೂ ವ್ಯತ್ಯಾಸವಿದ್ದ ಹಿನ್ನೆಲೆಯಲ್ಲಿ ತಪಾಸಣೆ ತೀವ್ರಗೊಳಿಸಿದ್ದಾರೆ. ಆಗ ನಗದು ಪತ್ತೆಯಾಗಿದೆ.

ಆರೋಪಿಗಳನ್ನು ವಶಪಡಿಸಿಕೊಂಡ ರೈಲ್ವೆ ಪೊಲೀಸರು ಪ್ರಾಥಮಿಕ ವಿಚಾರಣೆ ನಡೆಸಿದ್ದಾರೆ. ಅರೋಪಿಗಳ ವಿಚಾರಣೆ ಮುಂದುವರಿದಿದ್ದು, ವಿಚಾರಣೆ ವೇಳೆ ಜಾಗದ ಖರೀದಿಗಾಗಿ ಹಣ ತಂದಿರುವುದಾಗಿ ತಿಳಿಸಿದ್ದಾರೆ.

ಆದರೆ ಹವಾಲಾ ಹಣ ಅಕ್ರಮ ಸಾಗಾಟದ ಬಗ್ಗೆ ಶಂಕೆ ವ್ಯಕ್ತವಾಗಿದ್ದು ಲೋಕಸಭೆಯ ಉಪ ಚುನಾವಣೆಗೂ ಹಾಗೂ ಈ ಹಣಕ್ಕೂ ಏನಾದರೂ ಸಂಬಂಧ ಇದೆಯಾ ಎಂಬ ಬಗ್ಗೆ ಮಣಿಪಾಲ ಹಾಗೂ ರೈಲ್ವೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ಐಟಿ ಅಧಿಕಾರಿಗಳು , ಉಡುಪಿ ತಹಶೀಲ್ದಾರ್, ಚುನಾವಣಾಧಿಕಾರಿಗಳು ಸ್ಥಳಕ್ಕೆ ಭೇಟಿ ಕೊಟ್ಟಿದ್ದು, ಹಣದ ಮೂಲದ ಬಗ್ಗೆ ತೀವ್ರ ಸ್ವರೂಪದ ವಿಚಾರಣೆ ಮುಂದುವರಿದಿದೆ..

ಜಾಹೀರಾತುಗಳು

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

21 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

21 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

22 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

22 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

24 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

24 hours ago