ಉಡುಪಿ:ನೇತ್ರಾವತಿ ಎಕ್ಸ್ಪ್ರೆಸ್ನ ಬೋಗಿ ನಂ.16345ರಲ್ಲಿ ರಾಜಸ್ಥಾನ ಮೂಲದ ಇಬ್ಬರು ವ್ಯಕ್ತಿಗಳನ್ನು ರೈಲ್ಪೆ ಪೊಲೀಸರು ಇಂದ್ರಾಳಿ ರೈಲ್ಪೇ ನಿಲ್ದಾಣದಲ್ಲಿ ಶುಕ್ರವಾರ ಬೆಳಗ್ಗೆ ಬಂಧಿಸಿ, ನಗದು ವಶ ಪಡಿಸಿಕೊಂಡಿದ್ದಾರೆ.
ರೈಲಿನಲ್ಲಿ ಪದೇ ಪದೇ ನಡೆಯುವ ಕಳ್ಳತನ ಪತ್ತೆಗಾಗಿ ರೈಲ್ವೆ ರಕ್ಷಣಾ ಸಿಬ್ಬಂದಿ ಹೆಚ್ಚುವರಿಯಾಗಿ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಶುಕ್ರವಾರ ತಪಾಸಣೆ ನಡೆಸುವಾಗ ರೈಲಿನ ಎಸಿ ಬೋಗಿಯಲ್ಲಿದ್ದ ಇಬ್ಬರ ನಡವಳಿಕೆ ಪೊಲೀಸರಿಗೆ ಅನುಮಾನ ಹುಟ್ಟಿಸಿದೆ. ಟಿಕೆಟ್ ಪರಿಶೀಲಿಸಿದಾಗ ಟಿಕೆಟ್‌ನಲ್ಲಿದ್ದ ಹೆಸರಿಗೂ ಆರೋಪಿಗಳ ಹೆಸರಿಗೂ ವ್ಯತ್ಯಾಸವಿದ್ದ ಹಿನ್ನೆಲೆಯಲ್ಲಿ ತಪಾಸಣೆ ತೀವ್ರಗೊಳಿಸಿದ್ದಾರೆ. ಆಗ ನಗದು ಪತ್ತೆಯಾಗಿದೆ.
ಆರೋಪಿಗಳನ್ನು ವಶಪಡಿಸಿಕೊಂಡ ರೈಲ್ವೆ ಪೊಲೀಸರು ಪ್ರಾಥಮಿಕ ವಿಚಾರಣೆ ನಡೆಸಿದ್ದಾರೆ. ಅರೋಪಿಗಳ ವಿಚಾರಣೆ ಮುಂದುವರಿದಿದ್ದು, ವಿಚಾರಣೆ ವೇಳೆ ಜಾಗದ ಖರೀದಿಗಾಗಿ ಹಣ ತಂದಿರುವುದಾಗಿ ತಿಳಿಸಿದ್ದಾರೆ.
ಆದರೆ ಹವಾಲಾ ಹಣ ಅಕ್ರಮ ಸಾಗಾಟದ ಬಗ್ಗೆ ಶಂಕೆ ವ್ಯಕ್ತವಾಗಿದ್ದು ಲೋಕಸಭೆಯ ಉಪ ಚುನಾವಣೆಗೂ ಹಾಗೂ ಈ ಹಣಕ್ಕೂ ಏನಾದರೂ ಸಂಬಂಧ ಇದೆಯಾ ಎಂಬ ಬಗ್ಗೆ ಮಣಿಪಾಲ ಹಾಗೂ ರೈಲ್ವೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ಐಟಿ ಅಧಿಕಾರಿಗಳು , ಉಡುಪಿ ತಹಶೀಲ್ದಾರ್, ಚುನಾವಣಾಧಿಕಾರಿಗಳು ಸ್ಥಳಕ್ಕೆ ಭೇಟಿ ಕೊಟ್ಟಿದ್ದು, ಹಣದ ಮೂಲದ ಬಗ್ಗೆ ತೀವ್ರ ಸ್ವರೂಪದ ವಿಚಾರಣೆ ಮುಂದುವರಿದಿದೆ..
ಜಾಹೀರಾತುಗಳು
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…