ಉಡುಪಿ: ಸರ್ಕಾರವು 2024-25ನೇ ಸಾಲಿನ ಬಜೆಟ್ ಭಾಷಣದಲ್ಲಿ ಘೋಷಿಸಿದಂತೆ ಎನಿವೇರ್ ನೋಂದಣಿ ವ್ಯವಸ್ಥೆಯನ್ನು ಉಡುಪಿ ಜಿಲ್ಲೆಗೂ ವಿಸ್ತರಿಸಿದ್ದು, ಸೆ. 2ರಿಂದ ಜಾರಿಗೆ ಬರಲಿದೆ ಎಂದು ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ಪ್ರಸ್ತುತ ಸಾರ್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಯ ಉಪನೋಂದಣಿ ಕಚೇರಿಯಲ್ಲಿ ಮಾತ್ರ ದಸ್ತಾವೇಜನ್ನು ನೋಂದಣಿ ಮಾಡಲು ಅವಕಾಶವಿದೆ.
ಎನಿವೇರ್ ನೋಂದಣಿ ವ್ಯವಸ್ಥೆ ಜಾರಿಗೊಳ್ಳುವ ಮೂಲಕ ದಸ್ತಾವೇಜನ್ನು ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರೂ ಉಪನೋಂದಣಿ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದು ಎಂದರು.
ಈ ವ್ಯವಸ್ಥೆಯನ್ನು ಬೆಂಗಳೂರು ನಗರ ಜಿಲ್ಲೆಯಲ್ಲಿ 2011ರಲ್ಲಿ, ತುಮಕೂರು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ 2024ರ ಮಾರ್ಚ್‌ನಲ್ಲಿ ನೋಂದಣಿ ಕಾಯ್ದೆ 1908ರ ಕಲಂ (5) ಹಾಗೂ ಕಲಂ (6)ರ ಅಡಿಯಲ್ಲಿ ಅನುಷ್ಠಾನಗೊಳಿಸಲಾಗಿತ್ತು. ಅಲ್ಲಿ ಈ ವ್ಯವಸ್ಥೆಯು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿರುವ ಕಾರಣದಿಂದ ಉಡುಪಿ ಜಿಲ್ಲೆಯ ನೋಂದಣಿ ಉಪನೋಂದಣಿ ಕಚೇರಿಗಳಿಗೂ ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ವಿವರಿಸಿದರು.
ಈ ವ್ಯವಸ್ಥೆಯು ದಸ್ತಾವೇಜಿನ ನೋಂದಣಿಯಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ ಮತ್ತು ಇದರಿಂದ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಅಲ್ಲದೆ ನೋಂದಣಿಯಲ್ಲಿ ವಿಳಂಬವಾಗುತ್ತಿರುವ ಸಮಸ್ಯೆಯನ್ನೂ ಪರಿಹರಿಸಲಿದೆ ಎಂದು ಹೇಳಿದರು.
ಸಾರ್ವಜನಿಕರು ಸಮೀಪದ ಉಪನೋಂದಣಿ ಕಚೇರಿಯಲ್ಲಿ ದಸ್ತಾವೇಜನ್ನು ನೋಂದಾಯಿಸಬಹುದು. ಈ ಮೂಲಕ ನೋಂದಣಿ ಪ್ರಕ್ರಿಯೆ ಸುಲಭವಾಗುವುದಲ್ಲದೆ ಸಮಯ ಕೂಡ ಉಳಿತಾಯವಾಗಲಿದೆ ಎಂದು ತಿಳಿಸಿದರು.
ಈ ವ್ಯವಸ್ಥೆಯಿಂದಾಗಿ ಕಚೇರಿಗಳಲ್ಲಿ ನೋಂದಣಿ ಕೆಲಸ ಸಮಾನವಾಗಿ ಹಂಚಿಕೆಯಾಗುವ ಮೂಲಕ, ಸಿಬ್ಬಂದಿ ಮೇಲಿನ ಕೆಲಸದ ಒತ್ತಡವೂ ಕಡಿಮೆಯಾಗಲಿದೆ. ಜೊತೆಗೆ ಕಚೇರಿಗಳಲ್ಲಿ ಜನದಟ್ಟಣೆಯೂ ಕಡಿಮೆಯಾಗಲಿದೆ ಎಂದರು.
ಸಾರ್ವಜನಿಕರು ತಮಗೆ ಹತ್ತಿರವಾಗುವ ಮತ್ತು ಸ್ಪಾಟ್ ಲಭ್ಯವಿರುವ ಕಚೇರಿಗಳನ್ನು ಆಯ್ಕೆ ಮಾಡಿಕೊಂಡು ದಸ್ತಾವೇಜನ್ನು ನೋಂದಾಯಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಹೇಳಿದರು.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…