Featured

ಉಡುಪಿ: ಎನಿವೇರ್‌ ನೋಂದಣಿ ವ್ಯವಸ್ಥೆ ಸೆ.2ರಿಂದ ಜಾರಿ : ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ – vishwanews24

ಉಡುಪಿ: ಎನಿವೇರ್‌ ನೋಂದಣಿ ವ್ಯವಸ್ಥೆ ಸೆ.2ರಿಂದ ಜಾರಿ : ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ

ಉಡುಪಿ: ಸರ್ಕಾರವು 2024-25ನೇ ಸಾಲಿನ ಬಜೆಟ್‌ ಭಾಷಣದಲ್ಲಿ ಘೋಷಿಸಿದಂತೆ ಎನಿವೇರ್‌ ನೋಂದಣಿ ವ್ಯವಸ್ಥೆಯನ್ನು ಉಡುಪಿ ಜಿಲ್ಲೆಗೂ ವಿಸ್ತರಿಸಿದ್ದು, ಸೆ. 2ರಿಂದ ಜಾರಿಗೆ ಬರಲಿದೆ ಎಂದು ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ಪ್ರಸ್ತುತ ಸಾರ್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಯ ಉಪನೋಂದಣಿ ಕಚೇರಿಯಲ್ಲಿ ಮಾತ್ರ ದಸ್ತಾವೇಜನ್ನು ನೋಂದಣಿ ಮಾಡಲು ಅವಕಾಶವಿದೆ.

ಎನಿವೇರ್‌ ನೋಂದಣಿ ವ್ಯವಸ್ಥೆ ಜಾರಿಗೊಳ್ಳುವ ಮೂಲಕ ದಸ್ತಾವೇಜನ್ನು ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರೂ ಉಪನೋಂದಣಿ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದು ಎಂದರು.

ಈ ವ್ಯವಸ್ಥೆಯನ್ನು ಬೆಂಗಳೂರು ನಗರ ಜಿಲ್ಲೆಯಲ್ಲಿ 2011ರಲ್ಲಿ, ತುಮಕೂರು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ 2024ರ ಮಾರ್ಚ್‌ನಲ್ಲಿ ನೋಂದಣಿ ಕಾಯ್ದೆ 1908ರ ಕಲಂ (5) ಹಾಗೂ ಕಲಂ (6)ರ ಅಡಿಯಲ್ಲಿ ಅನುಷ್ಠಾನಗೊಳಿಸಲಾಗಿತ್ತು. ಅಲ್ಲಿ ಈ ವ್ಯವಸ್ಥೆಯು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿರುವ ಕಾರಣದಿಂದ ಉಡುಪಿ ಜಿಲ್ಲೆಯ ನೋಂದಣಿ ಉಪನೋಂದಣಿ ಕಚೇರಿಗಳಿಗೂ ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ವಿವರಿಸಿದರು.

ಈ ವ್ಯವಸ್ಥೆಯು ದಸ್ತಾವೇಜಿನ ನೋಂದಣಿಯಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ ಮತ್ತು ಇದರಿಂದ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಅಲ್ಲದೆ ನೋಂದಣಿಯಲ್ಲಿ ವಿಳಂಬವಾಗುತ್ತಿರುವ ಸಮಸ್ಯೆಯನ್ನೂ ಪರಿಹರಿಸಲಿದೆ ಎಂದು ಹೇಳಿದರು.

ಸಾರ್ವಜನಿಕರು ಸಮೀಪದ ಉಪನೋಂದಣಿ ಕಚೇರಿಯಲ್ಲಿ ದಸ್ತಾವೇಜನ್ನು ನೋಂದಾಯಿಸಬಹುದು. ಈ ಮೂಲಕ ನೋಂದಣಿ ಪ್ರಕ್ರಿಯೆ ಸುಲಭವಾಗುವುದಲ್ಲದೆ ಸಮಯ ಕೂಡ ಉಳಿತಾಯವಾಗಲಿದೆ ಎಂದು ತಿಳಿಸಿದರು.

ಈ ವ್ಯವಸ್ಥೆಯಿಂದಾಗಿ ಕಚೇರಿಗಳಲ್ಲಿ ನೋಂದಣಿ ಕೆಲಸ ಸಮಾನವಾಗಿ ಹಂಚಿಕೆಯಾಗುವ ಮೂಲಕ, ಸಿಬ್ಬಂದಿ ಮೇಲಿನ ಕೆಲಸದ ಒತ್ತಡವೂ ಕಡಿಮೆಯಾಗಲಿದೆ. ಜೊತೆಗೆ ಕಚೇರಿಗಳಲ್ಲಿ ಜನದಟ್ಟಣೆಯೂ ಕಡಿಮೆಯಾಗಲಿದೆ ಎಂದರು.

ಸಾರ್ವಜನಿಕರು ತಮಗೆ ಹತ್ತಿರವಾಗುವ ಮತ್ತು ಸ್ಪಾಟ್‌ ಲಭ್ಯವಿರುವ ಕಚೇರಿಗಳನ್ನು ಆಯ್ಕೆ ಮಾಡಿಕೊಂಡು ದಸ್ತಾವೇಜನ್ನು ನೋಂದಾಯಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಹೇಳಿದರು.

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

13 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

14 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

14 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

14 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

18 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

19 hours ago