ಉಡುಪಿ, : ”ಎಲ್ಲಾ ಮುಸಲ್ಮಾನರು ದೇಶದ್ರೋಹಿಗಳಲ್ಲ, ದೇಶಭಕ್ತರೂ ಕೂಡಾ ಇದ್ದಾರೆ. ಆದರೆ ರಾಷ್ಟ್ರ ಭಕ್ತರೆಲ್ಲರೂ ಬಿಜೆಪಿಯವರೇ” ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರಪ್ಪನವರು ಹೇಳಿದರು.
ಉಡುಪಿಯ ಮಣಿಪಾಲ್ ಇನ್ ಹೊಟೇಲ್ ಮತ್ತು ಕನ್ವೆಂಶನ್ ಸೆಂಟರ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ”ಎಲ್ಲಾ ಮುಸಲ್ಮಾನರು ದೇಶದ್ರೋಹಿಗಳಲ್ಲ, ದೇಶಭಕ್ತರೂ ಕೂಡಾ ಇದ್ದಾರೆ. ಮುಸಲ್ಮಾನರ ಓಟು ಬೇಡ ಎಂದು ನಾವು ಹೇಳಿಲ್ಲ” ಎಂದರು.
”ರಾಷ್ಟ್ರ ಭಕ್ತರೆಲ್ಲರೂ ಬಿಜೆಪಿಯವರೇ, ಆದರೆ ಕಾಂಗ್ರೆಸ್ ನಾಯಕರು ಮುಸ್ಲಿಂ ಸಮುದಾಯವನ್ನು ಒಲಿಸುವಲ್ಲಿ ನಿರತವಾಗಿದೆ. ಅವರೆಲ್ಲರೂ ಕಾಂಗ್ರೆಸ್‌ಗೆ ಮತ ಹಾಕುತ್ತಾರೆ ಎನ್ನುವ ಭ್ರಮೆಯಲ್ಲಿ ಕಾಂಗ್ರೆಸ್ ಇದೆ” ಎಂದು ಹೇಳಿದ ಅವರು, ”ಕಾಂಗ್ರೆಸ್ ತನ್ನ ಮನೋಭಾವನೆ ಬದಲಾಯಿಸಿಕೊಳ್ಳಬೇಕು” ಎಂದು ಕುಟುಕಿದರು.
”ವಿರೋಧ ಪಕ್ಷದವರಿಗೆ ಎಸಿ ರೂಮ್‌ನಲ್ಲಿ ಕೂತು ಟ್ವೀಟ್ ಮಾಡುವುದೇ ಅಭ್ಯಾಸವಾಗಿ ಬಿಟ್ಟಿದೆ. ರಾಜ್ಯದಲ್ಲಿ ವಿರೋಧ ಪಕ್ಷವೇ ಇಲ್ಲದಂತಾಗಿದೆ. ಕಾಂಗ್ರೆಸ್ ರಾಜ್ಯದಲ್ಲಿ ನಿರ್ನಾಮ ಆಗಿದೆ” ಎಂದು ಟೀಕಿಸಿದರು.
”ಜೆಡಿಎಸ್ ನಾಯಕ ಕುಮಾರಸ್ವಾಮಿ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗುವ ಹಗಲು ಕನಸನ್ನು ಕಾಣುತ್ತಿದ್ದಾರೆ” ಎಂದು ಹೇಳಿದರು.
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…