Featured

ಉಡುಪಿ ಎಸ್‍ಪಿ ವರ್ಗಾವಣೆ ಮಾಡಿದರೆ ಜಿಲ್ಲೆಯಾದ್ಯಂತ ಉಗ್ರ ಹೋರಾಟ ; ಎಚ್ಚರಿಕೆ ನೀಡಿದ ಶ್ರೀನಿವಾಸ್ ಪೂಜಾರಿ

ಉಡುಪಿ: ಕಾಂಗ್ರೆಸ್ ರಾಜಕೀಯ ಒತ್ತಡ ಬಳಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರ್ಗಿಯವರನ್ನು ವರ್ಗಾವಣೆ ಮಾಡಲು ಯತ್ನಸುತ್ತಿದ್ದು, ಒಂದು ವೇಳೆ ಎಸ್‍ಪಿ ಅವರನ್ನು ವರ್ಗಾವಣೆ ಮಾಡಿದರೆ ಜಿಲ್ಲೆಯಲ್ಲಿ ಹೋರಾಟ ನಡೆಸುತ್ತೇವೆ ಎಂದು ವಿಧಾನಪರಿಷತ್ ವಿರೋಧ ಪಕ್ಷ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸೆಪ್ಟೆಂಬರ್ 10 ರಂದು ಕಾಂಗ್ರೆಸ್ ಹಮ್ಮಿಕೊಂಡಿದ್ದ ಭಾರತ್ ಬಂದ್ ವೇಳೆ ಕಾರ್ಯಕರ್ತರು ಬಲವಂತವಾಗಿ ಅಂಗಡಿ-ಮುಗ್ಗಟ್ಟುಗಳನ್ನು ಮುಚ್ಚಿಸಿದ್ದಲ್ಲದೇ, ಬಸ್‍ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಸಂಬಂಧ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರ್ಗಿಯವರು ಉದ್ರಿಕ್ತರ ಮೇಲೆ ಲಾಠಿ ಚಾರ್ಜ್ ನಡೆಸಲು ಆದೇಶ ಕೊಟ್ಟಿದ್ದರು. ಆದರೆ ಆಳುವ ಪಕ್ಷ ಹೇಳಿದಂತೆ ಎಸ್‍ಪಿ ನಿಂಬರ್ಗಿ ನಡೆದುಕೊಂಡಿಲ್ಲ ಎಂದು ಅವರನ್ನು ವರ್ಗಾವಣೆ ಮಾಡಲು ಭಾರೀ ರಾಜಕೀಯ ಪಿತೂರಿ ನಡೆಯುತ್ತಿದೆ. ಇತ್ತೀಚೆಗೆ ಸಚಿವೆ ಜಯಮಾಲಾಗೆ ಉಡುಪಿ ಕಾಂಗ್ರೆಸ್ ಕಾರ್ಯಕರ್ತರು ಎಸ್‍ಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು ಎಂದು ಹೇಳಿದರು.

ಒಂದು ವೇಳೆ ರಾಜಕೀಯ ಒತ್ತಡದಿಂದ ಎಸ್‍ಪಿಯವರನ್ನು ವರ್ಗಾವಣೆ ಮಾಡಿದರೆ, ಬಿಜೆಪಿ ಜಿಲ್ಲೆಯಾದ್ಯಂತ ಹೋರಾಟ ನಡೆಸುತ್ತದೆ. ಅಲ್ಲದೇ ಈಗಾಗಲೇ ನಾವು ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತಕ್ಕೆ ಸ್ಪಷ್ಟವಾಗಿ ಹೇಳಿದ್ದೇವೆ. ಆಡಳಿತಾತ್ಮಕ ದೃಷ್ಟಿಯಿಂದ ವರ್ಗಾವಣೆ ಮಾಡಲಿ. ವರ್ಗಾವಣೆ ಮಾಡುವುದು ಸರ್ಕಾರದ ಹಕ್ಕು. ಸರ್ಕಾರದ ಹಕ್ಕನ್ನು ನಾವು ಪ್ರಶ್ನೆ ಮಾಡುವುದಿಲ್ಲ. ಆದರೆ ರಾಜಕೀಯ ಪ್ರೇರಿತ ವರ್ಗಾವಣೆ ಮಾಡಿದರೇ, ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

 

Vishwa News 24

Recent Posts

ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ. 19 ರಂದು ರಾಹುಲ್ ಗಾಂಧಿ ಜನ್ಮದಿನಾಚರಣೆ – vishwanews24

ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ. 19 ರಂದು ರಾಹುಲ್ ಗಾಂಧಿ ಜನ್ಮದಿನಾಚರಣೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಕಾಂಗ್ರೆಸ್…

7 minutes ago

ಸುಳ್ಯ: ಮನೆಯ ಅಂಗಳಕ್ಕೆ ಮುರಿದು ಬಿದ್ದ ತೆಂಗಿನ ಮರ; ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ – vishwanews24

ಸುಳ್ಯ: ಮನೆಯ ಅಂಗಳಕ್ಕೆ ಮುರಿದು ಬಿದ್ದ ತೆಂಗಿನ ಮರ; ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ ಸುಳ್ಯ: ಮನೆಯ ಮುಂಭಾಗದಲ್ಲಿದ್ದ ತೆಂಗಿನ…

16 minutes ago

ಮಂಗಳೂರು: ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ – vishwanews24

ಮಂಗಳೂರು: ಸೋಮೇಶ್ವರದಲ್ಲಿ 16 ವರ್ಷದ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಂಗಳೂರು : 16 ವರ್ಷದ ಪ್ರಥಮ ವರ್ಷದ ಪಿಯುಸಿ (ಪಿಯುಸಿ)…

28 minutes ago

ಇನ್ಮುಂದೆ ವೈದ್ಯರ ಶಿಫಾರಸು ಇಲ್ಲದೇ ಮೆಡಿಕಲ್‌ನಲ್ಲಿ ಯಾವುದೇ ಸಿರಪ್‌ಗಳನ್ನು ಖರೀದಿಸುವಂತಿಲ್ಲ : ಕೇಂದ್ರ ಆದೇಶ – vishwanews24

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ: ಕೇಂದ್ರ ಆದೇಶ ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ…

38 minutes ago

ಪಟ್ಲ ರೂರಲ್ ಎಜುಕೇಶನ್ ಸೊಸೈಟಿಯ ಸುವರ್ಣ ಮಹೋತ್ಸವಕ್ಕೆ ಚಾಲನೆ; ವನ ಮಹೋತ್ಸವ ಕಾರ್ಯಕ್ರಮ – vishwanews24

ಪಟ್ಲ ರೂರಲ್ ಎಜುಕೇಶನ್ ಸೊಸೈಟಿಯ ಸುವರ್ಣ ಮಹೋತ್ಸವಕ್ಕೆ ಚಾಲನೆ; ವನ ಮಹೋತ್ಸವ ಕಾರ್ಯಕ್ರಮ ಪಟ್ಲ: ರೂರಲ್ ಎಜುಕೇಶನ್ ಸೊಸೈಟಿ (ರಿ.),…

49 minutes ago

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

20 hours ago