Featured

ಉಡುಪಿ : ಎಸ್ ಐ ಓ ಉಡುಪಿ ವತಿಯಿಂದ ವಿದ್ಯಾರ್ಥಿ ಪ್ರಣಾಳಿಕೆ ಬಿಡುಗಡೆ – Vishwanews24

ಉಡುಪಿ ; ದ್ವೇಷದ ರಾಜಕಾರಣ ಮಾಡುವುದನ್ನು ಬಿಟ್ಟು ಶಿಕ್ಷಣ, ಉದ್ಯೋಗ ಮತ್ತು ಪ್ರೀತಿಯ ರಾಜಕಾರಣ ಬೇಕು : ಅಫ್ವಾನ್ ಹೂಡೆ

ಉಡುಪಿ: ಆರ್ಟಿಕಲ್ 21A ಮೂಲಕ ಸಂವಿಧಾನಬದ್ಧ ಮೂಲಭೂತ ಹಕ್ಕಾದ ಶಿಕ್ಷಣವು ಸರ್ಕಾರದ ಸ್ವಾಮ್ಯದಿಂದ ದಿನೇ ದಿನೇ ದುರ್ಬಲಗೊಳ್ಳುತ್ತ ಹೋಗುತ್ತಿರುವುದು ಶೋಚನೀಯ. ಮೂಲಭೂತ ಹಕ್ಕುಗಳು ಇವತ್ತು ಸರ್ಕಾರದ ನಿರ್ಲಕ್ಷ್ಯಕ್ಕೆ ಒಳಗಾಗುತ್ತಿರುವ ದುರಂತ ಕಾಲದಲ್ಲಿ ಸಂವಿಧಾನ ಖಾತರಿಪಡಿಸಿದ ಶಿಕ್ಷಣದ ಹಕ್ಕನ್ನು (‘ಆರ್’ಟಿಇ’ಯನ್ನು) ಸಮರ್ಪಕ ಜಾರಿ ಮಾಡಬೇಕು. ದ್ವೇಷದ ರಾಜಕಾರಣ ಮಾಡುವುದನ್ನು ಬಿಟ್ಟು ಶಿಕ್ಷಣ, ಉದ್ಯೋಗ ಮತ್ತು ಪ್ರೀತಿಯ ರಾಜಕಾರಣ ನಮಗೆ ಬೇಕು ಎಂದು ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಷನ್ ಆಫ್ ಇಂಡಿಯಾ (ಎಸ್. ಐ ಓ ) ರಾಜ್ಯ ಕಾರ್ಯದರ್ಶಿ ಅಫ್ವಾನ್ ಹೂಡೆ ಆಗ್ರಹಿಸಿದ್ದಾರೆ.

ಇವರು ಇಂದು ಉಡುಪಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 2023ರ ಈ ಬಾರಿಯ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ರಾಜಕೀಯ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ವಿದ್ಯಾರ್ಥಿ-ಯುವಜನರ ಬೇಡಿಕೆಯ ವಿಚಾರಗಳನ್ನು ಸೇರಿಸಲು ಮತ್ತು ಈ ಹಕ್ಕೊತ್ತಾಯಗಳೇ ಯುವಜನರ ಮತಗಳನ್ನು ನಿರ್ಣಯಿಸುವಂತೆ ಜನಾಭಿಪ್ರಾಯ ಮೂಡಿಸಲು ಎಸ್.ಐ.ಓ ಕರ್ನಾಟಕವು ಶಿಕ್ಷಣದ ಮೂಲಭಾಗಿದಾರರೊಂದಿಗೆ ಸಮಾಲೋಚಿಸಿ “ವಿದ್ಯಾರ್ಥಿ ಪ್ರಣಾಳಿಕೆ”ಯನ್ನು ತಯಾರುಗೊಳಿಸಿದ್ದು, ಪಕ್ಷಗಳು ಈ ಬೇಡಿಕೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮತ್ತು ಬದ್ಧತೆಯನ್ನು ಖಚಿತಪಡಿಸಬೇಕು ಎಂದು ಹೇಳಿದರು.

ಶಾಲಾ ಪೂರ್ವ ಶಿಕ್ಷಣದ ಮೂಲಕ ಮಕ್ಕಳ ಅಪೌಷ್ಟಿಕತೆ ನಿವಾರಣೆ ಮತ್ತು ಕಲಿಕಾ ಪ್ರಕ್ರಿಯೆಯತ್ತ ತಯಾರುಗೊಳಿಸುವ ಅಂಗನವಾಡಿ ವ್ಯವಸ್ಥೆಯನ್ನು ಸಶಕ್ತಗೊಳಿಸಿ, ಅಪೌಷ್ಟಿಕತೆ ನಿವಾರಣೆಗೆ ಫಲಿತಾಂಶ ಆಧಾರಿತ ಕಾಲಾತೀತ ಕಾರ್ಯಕ್ರಮ ರೂಪಿಸಬೇಕಾಗಿದೆ. ಗ್ರಾಮೀಣ ಮಕ್ಕಳ ಮತ್ತು ವಲಸೆ ಹಾಗೂ ಅಸಂಘಟಿತ ಕಾರ್ಮಿಕರ ಮಕ್ಕಳ ಶಾಲಾ ಹೊರಗುಳಿಯುವಿಕೆ (ಡ್ರಾಪ್ ಔಟ್) ದರವನ್ನು ತಡೆಗಟ್ಟಲು ಕಡ್ಡಾಯ ಶಿಕ್ಷಣ ಹಕ್ಕನ್ನು ಖಾತರಿಪಡಿಸಬೇಕು. ಮಕ್ಕಳ ಶಾಲಾ ದಾಖಲಾತಿಯನ್ನು ಖಚಿತಪಡಿಸುವುದು ಸರ್ಕಾರದ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ಸಹಕಾರಿಯಾಗುವ ಸ್ಕಾಲರ್’ಶಿಪ್ ಮತ್ತು ಶಾಲಾ ಸಮವಸ್ತ್ರ ದಂತಹ ಯೋಜನೆಗಳನ್ನು ಸಕಾಲಕ್ಕೆ ನೀಡಿ, ಶಾಲಾ ಕಾಲೇಜುಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯ ಮತ್ತು ಸೂಕ್ತ ಕಲಿಕಾ ಸಂಪನ್ಮೂಲ ಒದಗಿಸುವ ಮೂಲಕ ಶಾಲಾ ಚಟುವಟಿಕೆಗಳಲ್ಲಿನ ವಿದ್ಯಾರ್ಥಿಗಳ ಸಕ್ರಿಯ ಭಾಗವಹಿಸುವಿಕೆಗೆ ಕಲಿಕಾ ವಾತಾವರಣವನ್ನು ಕಲ್ಪಿಸಬೇಕು ಹಾಗೂ ಸರ್ಕಾರಿ ಶಾಲಾ ಶಿಕ್ಷಣ ವ್ಯವಸ್ಥೆಯನ್ನು ಬಲಗೊಳಿಸಬೇಕು ಎಂದು ಹೇಳಿದರು.

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಸರಿಸುಮಾರು 50% ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, ಅವುಗಳನ್ನು ಶೀಘ್ರವೇ ತುಂಬಬೇಕು ಹಾಗೂ ಸರ್ಕಾರದ ವಾರ್ಷಿಕ ಬಜೆಟ್ ಹಂಚಿಕೆಯಲ್ಲಿ ಕೊಠಾರಿ ಆಯೊಗದ ಶಿಫಾರಸ್ಸಿನ ಅನ್ವಯ GDP ಯ 6% ರಷ್ಟು ಅನುದಾನವನ್ನು ಶಿಕ್ಷಣ ವಲಯಕ್ಕೆ ಬಜೆಟ್ ನಲ್ಲಿ ಮೀಸಲಿರಿಸಬೇಕು.

ರಾಜ್ಯದ ಉನ್ನತ ಶಿಕ್ಷಣದ ವ್ಯವಸ್ಥೆಯು ತೀರಾ ಚಿಂತಾಜನಕವಾಗಿದ್ದು, ರಾಜ್ಯದ ಬಹುತೇಕ ವಿವಿಗಳು ಸರ್ಕಾರದ ಸರಿಯಾದ ಅನುದಾನ ಮತ್ತು ನಿರ್ವಹಣೆ ಇಲ್ಲದೇ, ಅವುಗಳು ಗುಣಮಟ್ಟದ ಶಿಕ್ಷಣ ಒದಗಿಸುವಲ್ಲಿ ವಿಫಲವಾಗುತ್ತಿವೆ, ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಸಾರ್ವಜನಿಕ ವಿವಿಗಳ ಸೂಕ್ತ ನಿರ್ವಹಣೆಗಾಗಿ ಮತ್ತು ಉನ್ನತೀಕರಣಕ್ಕಾಗಿ ವಿಶೇಷ ಗಮನ ಹರಿಸುವುದು ಅಗತ್ಯವಿದೆ ಎಂದು ಹೇಳಿದರು.

ಎನ್’ಇಪಿ-2020ರಲ್ಲಿ ಪ್ರಸ್ತಾಪಿಸಿದಂತೆ ಫಾರೀನ್ (ವಿದೇಶಿ) ಖಾಸಗಿ ವಿವಿಗಳನ್ನು ಭಾರತದಲ್ಲಿ ಹೊಸದಾಗಿ ಪ್ರಾರಂಭಿಸುವುದಕ್ಕಿಂತ ಚಾಲ್ತಿಯಲ್ಲಿರುವ ವಿವಿಗಳಲ್ಲಿ ಗುಣಮಟ್ಟದ ಶಿಕ್ಷಣವನ್ನು ಖಾತರಿಪಡಿಸಲು, ಫಾರೀನ್’ನ ಪ್ರಾಧ್ಯಾಪಕರನ್ನು ವಿಶೇಷ ಅಥವಾ ಅತಿಥಿ ಉಪನ್ಯಾಸಕರನ್ನಾಗಿ ನೇಮಕ ಮಾಡಬೇಕು ಹಾಗೂ ರಾಜ್ಯದ ಮಟ್ಟದ ಮತ್ತು ಕೇಂದ್ರಿಯ ವಿವಿಗಳಲ್ಲಿ ಖಾಲಿ ಇರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಿ, ಇಲ್ಲಿನ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಬೇಕು ಎಂದು ಹೇಳಿದರು.

ಸಂವಿಧಾನದ ಆಶಯವಾದ ಸಾಮಾಜಿಕ ನ್ಯಾಯವು ಪ್ರಜಾಪ್ರಭುತ್ವ ಮೌಲ್ಯಗಳನ್ನು ಪ್ರತಿನಿಧಿಸುತ್ತದೆ, ಶಾಲಾ-ಕಾಲೇಜು ಕ್ಯಾಂಪಸ್ ಗಳು ದೇಶದ ಭವಿಷ್ಯ ರೂಪಿಸುವ ತಾಣಗಳಾಗಿವೆ, ಕ್ಯಾಂಪಸ್ ಗಳಲ್ಲಿ ಜಾತಿ ಮತ್ತು ಧರ್ಮದ ನಿಂದನೆ ಹಾಗೂ ತಾರತಮ್ಯದಂತಹ ಅನೇಕ ಘಟನೆಗಳು ಇತ್ತಿಚೆಗೆ ವರದಿಯಾಗುತ್ತಿರುವುದು ಆಘಾತಕಾರಿ, ಇದನ್ನು ತಡೆಹಿಡಿಯಲು ಮತ್ತು ಪರಸ್ಪರರ ನಡುವೆ ಸಹೋದರತೆ ಹಾಗೂ ಸಾಮರಸ್ಯವನ್ನು ಖಾಯಂಗೊಳಿಸಬೇಕಾಗಿದೆ, ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳನ್ನು ರಾಜ್ಯದ ಶೈಕ್ಷಣಿಕವಾಗಿ ಹಿಂದುಳಿದ ಪ್ರದೇಶದಲ್ಲಿ ಪ್ರಾರಂಭಿಸಿ, ಆ ಭಾಗದ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹಿಸಬೇಕು. ಉನ್ನತ ಶಿಕ್ಷಣದಲ್ಲಿನ ಸಾಮಾನ್ಯ ದಾಖಲಾತಿ ಅನುಪಾತ (ಜಿಇಆರ್-GER) 2019-20 ರಲ್ಲಿ 32% ಇದ್ದು, ಅದನ್ನು ಹೆಚ್ಚಿಸಲು ಮತ್ತು ಉನ್ನತ ಶಿಕ್ಷಣದತ್ತ ವಿದ್ಯಾರ್ಥಿಗಳನ್ನು ಉತ್ತೇಜಿಸಲು ಅಗತ್ಯ “ವಿದ್ಯಾರ್ಥಿ ವೇತನ” ನೀಡಬೇಕು

ಅಗಾಧ ಮಾನವ ಸಂಪನ್ಮೂಲವನ್ನು ಅದರಲ್ಲೂ ಅತಿ ಹೆಚ್ಚು ಯುವಜನರನ್ನು ಹೊಂದಿರುವ ಭಾರತ ದೇಶವು ನಿರುದ್ಯೋಗ ಸಮಸ್ಯೆಯನ್ನು ಎದುರಿಸುತ್ತಿದೆ, ಪ್ರತಿ ವರ್ಷವೂ ಶಿಕ್ಷಣವನ್ನು ಪೊರೈಸಿ, ಔದ್ಯೋಗಿಕ ರಂಗಕ್ಕೆ ಕಾಲಿಡುವ ಅನೇಕರಲ್ಲಿ ಬಹುತೇಕ ನಿರುದ್ಯೋಗದಿಂದ ಬೇಸೆತ್ತು ಹೋಗಿದ್ದಾರೆ, ಅರ್ಹತೆಗೆ ತಕ್ಕಂತೆ ಕೆಲಸಗಳು ಸಿಗದೆ ಆರ್ಥಿಕವಾಗಿ ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ ಮತ್ತು ಮಾನಸಿಕ ಒತ್ತಡದಿಂದಾಗಿ ಖಿನ್ನತೆಗೆ ಒಳಗಾಗುತ್ತಿದ್ದಾರೆ. ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ತ್ವರಿತ ಮತ್ತು ಪಾರದರ್ಶಕ ನೇಮಕಾತಿ ಮಾಡಬೇಕಾಗಿದೆ, ಮತ್ತು ವಿವಿಧ ಅಂತಾರಾಷ್ಟ್ರೀಯ ಹಾಗೂ ರಾಷ್ಟ್ರೀಯ ಕಂಪನಿಗಳ ಹುದ್ದೆಗಳಲ್ಲಿ ಸ್ಥಳೀಯರಿಗೆ ಮೀಸಲಾತಿ ನೀಡಿ, ಇಲ್ಲಿನ ಜನತೆಗೆ ನ್ಯಾಯ ಒದಗಿಸಬೇಕು.
ರಾಜ್ಯದಲ್ಲಿ ವಿವಿಧ ಹೆಸರಿನಡಿ ಅಥವಾ ನಿರ್ದಿಷ್ಟ ವಿಷಯಗಳಲ್ಲಿ ಗುಂಪು ಹಲ್ಲೆ ಮತ್ತು ನೈತಿಕ ಪೋಲಿಸ್ ಗಿರಿ ಹೆಚ್ಚುತ್ತಿದೆ ಹಾಗೂ ಅಸಂವಿಧಾನಿಕ ಮಾತುಗಳ ಮೂಲಕ ದ್ವೇಷ ಭಾಷಣ ಮತ್ತು ಮತೀಯ ಹಿಂಸಾಚಾರಕ್ಕೆ ಪ್ರಚೋದನೆ ನೀಡುವವರ ಸಂಖ್ಯೆಯೂ ಹೆಚ್ಚಾಗುತ್ತಿರುವುದು ಸಂವಿಧಾನದ ಮೌಲ್ಯಗಳನ್ನು ಒಂದೊಂದಾಗಿ ನಗಣ್ಯ ಮಾಡಲಾಗುತ್ತಿರುವ ಸಂಕೇತವಾಗಿದೆ. ಈ ನಿಟ್ಟಿನಲ್ಲಿ ವ್ಯಕ್ತಿ ಘನತೆ ಮತ್ತು ಗೌರವದ ಬದುಕಿಗೆ ದಕ್ಕೆ ಬಾರದ ಆಗೆ ನೋಡಿಕೊಳ್ಳುವ ಮತ್ತು ರಾಜ್ಯದ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಲು ರಾಜ್ಯದ ಆಡಳಿತವನ್ನು ಹಿಡಿಯುವವರು ಈ ಬಗ್ಗೆ ವಿಶೇಷ ಕಾಳಜಿಯನ್ನು ತೋರಬೇಕು ಎಂದು ಹೇಳಿದರು.

ಎಸ್ ಐ ಓ ಉಡುಪಿ ಜಿಲ್ಲಾದ್ಯಕ್ಷ ಅಯಾನ್ ಮಲ್ಪೆ ಮಾತನಾಡಿ, ನಾವು ಈ ಪತ್ರಿಕಾಗೋಷ್ಠಿ ಮುಖಾಂತರ ರಾಜಕೀಯ ಪಕ್ಷಗಳಿಗೆ ಆಗ್ರಹಿಸುವುದೇನೆಂದರೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಾವು ನಿಮ್ಮ ಪ್ರಣಾಳಿಕೆಯಲ್ಲಿ ಶಿಕ್ಷಣ ಕ್ಷೇತ್ರ ಮತ್ತು ವಿದ್ಯಾರ್ಥಿ ಸಂಬಂಧಿಸಿದಂತೆ ಸಮಸ್ಯೆ ಯನ್ನು ಸೇರಿಸಬೇಕೆಂದು ಈ ರೀತಿ ಕೇಳಿಕೊಳ್ಳುತ್ತಿದ್ದೇವೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಎಸ್ ಐ ಓ ಉಡುಪಿ ಜಿಲ್ಲಾ ಮಾಧ್ಯಮ ಕಾರ್ಯದರ್ಶಿ ಡಾ ಫಹೀಮ್ ಅಬ್ದುಲ್ಲಾ, ಜಿಲ್ಲಾ ಕ್ಯಾಂಪಸ್ ಕಾರ್ಯದರ್ಶಿ ನಿಫಾಲ್ ಹೂಡೆ. ಸದಸ್ಯರಾದ ಫರ್ಹಾನ್, ವಸೀಮ್ ಅಬ್ದುಲ್ಲಾ ಉಪಸ್ಥಿತರಿದ್ದರು.

Vishwa News 24

Recent Posts

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

57 minutes ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

1 hour ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

2 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

2 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

2 hours ago

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

3 hours ago