Featured

ಉಡುಪಿ: ಎ.ವಿ.ಬಾಳಿಗಾ ಆಸ್ಪತ್ರೆಯಲ್ಲಿ  1ರಿಂದ10 ತನಕ 35 ನೇ ಮದ್ಯವ್ಯಸನ ವಿಮುಕ್ತಿ ಶಿಬಿರ – vishwanews24

ಉಡುಪಿ: ಎ.ವಿ.ಬಾಳಿಗಾ ಆಸ್ಪತ್ರೆಯಲ್ಲಿ  1ರಿಂದ10 ತನಕ 35 ನೇ ಮದ್ಯವ್ಯಸನ ವಿಮುಕ್ತಿ ಶಿಬಿರ

ಉಡುಪಿ: ದೊಡ್ಡಣಗುಡ್ಡೆ ಡಾ. ಎ.ವಿ.ಬಾಳಿಗಾ ಸಮೂಹ ಸಂಸ್ಥೆಗಳ ನಿರ್ದೇಶಕ ಡಾ.ಪಿ.ವಿ.ಭಂಡಾರಿ‌ ಅವರ ನೇತೃತ್ವದಲ್ಲಿ 2026 ಜನವರಿ 1ರಿಂದ 10ರ ವರೆಗೆ 35ನೇ ಮದ್ಯವ್ಯಸನ ವಿಮುಕ್ತಿ ಶಿಬಿರ ಡಾ. ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆಯಲ್ಲಿ ನಡೆಯಲಿದೆ ಎಂದು ಮನೋವೈದ್ಯ ಡಾ. ವಿರೂಪಾಕ್ಷ ದೇವರಮನೆ ತಿಳಿಸಿದರು.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಜ.1ರಂದು ಬೆಳಿಗ್ಗೆ 10.30ಕ್ಕೆ ಶಿಬಿರವನ್ನು ಸಮಾಜಸೇವಕ ವಿಶು ಶೆಟ್ಟಿ ಅವರು ಉದ್ಘಾಟಿಸಲಿದ್ದಾರೆ. ಜ.10ರಂದು ಬೆಳಿಗ್ಗೆ 10.30 ಕ್ಕೆ ಶಿಬಿರದ ಸಮಾರೋಪ ಸಮಾರಂಭದ ನಡೆಯಲಿದೆ ಎಂದರು.

ಶಿಬಿರಕ್ಕೆ ಶಿಬಿರಾರ್ಥಿಗಳಿಗೆ ತಗಲುವ ಊಟ, ವಸತಿ, ಚಿಕಿತ್ಸೆಯ ವೆಚ್ಚವನ್ನು ಕಮಲ್ ಎ. ಬಾಳಿಗಾ ಚ್ಯಾರಿಟೇಬಲ್ ಟ್ರಸ್ಟ್ ಭರಿಸುತ್ತಿದೆ. ಶಿಬಿರಾರ್ಥಿಗಳಲ್ಲಿ ಕಂಡುಬರುವ ದೈಹಿಕ ಸಮಸ್ಯೆಗಳನ್ನು ಗುರುತಿಸಿ ಅದಕ್ಕೆ ಅನುಗುಣವಾದ ಚಿಕಿತ್ಸೆಯನ್ನು ನೀಡಲಾಗುತ್ತದೆ. ಪ್ರತಿದಿನ ಶಿಬಿರಾರ್ಥಿಗಳಿಗೆ ಮದ್ಯ ಹಾಗೂ ಮಾದಕ ದ್ರವ್ಯಗಳಿಂದಾಗುವ ದುಷ್ಪರಿಣಾಮಗಳು ಮತ್ತು ಜೀವನ ಶೈಲಿ ಬದಲಾವಣೆ ಕುರಿತು ನುರಿತ ತಜ್ಞರಿಂದ ಮಾಹಿತಿ ಕಾರ್ಯಕ್ರಮ ನಡೆಯಲಿದೆ. ಸಂಜೆ ವಿವಿಧ ಮನೋರಂಜನೆ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದರು.

ಚಿಕಿತ್ಸೆಯಲ್ಲಿ ಪ್ರತಿದಿನ ಅನಾಮಿಕ ಅಮಲಿಗಳ ಸದಸ್ಯರಿಂದ ಒಂದು ಗಂಟೆಯ ಚರ್ಚೆ ಮತ್ತು ಮದ್ಯ ವಿಮುಕ್ತ ಜೀವನ ನಡೆಸುವ ಬಗ್ಗೆ ಮಾಹಿತಿ ಮತ್ತು ಅನುಭವಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ. ರಾತ್ರಿ 7 ರ ನಂತರ ಪ್ರತಿ ದಿನ ಭಜನೆ ಮತ್ತು ಧಾರ್ಮಿಕ ವಿಚಾರಗಳನ್ನು ಕುರಿತು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಶಿಬಿರದಿಂದ ತೆರಳಿದ ನಂತರವೂ ಶಿಬಿರಾರ್ಥಿಗಳ ಪ್ರಗತಿಯನ್ನು ನಮ್ಮ ಸಮುದಾಯ ಕಾರ್ಯಕರ್ತರು ಮನೆ ಭೇಟಿ, ದೂರವಾಣಿ ಕರೆ ಮತ್ತು ಪತ್ರಗಳನ್ನು ಬರೆಯುವ ಮೂಲಕ ಅವರ ಮದ್ಯಮುಕ್ತ ಜೀವನವನ್ನು ನಿರಂತರವಾಗಿ ಪರಿಶೀಲಿಸುತ್ತಾರೆ. ಇದರೊಂದಿಗೆ ಒಂದು ವರ್ಷದ ಅವಧಿಯವರೆಗೆ ಮರುಭೇಟಿ ದಿನಾಂಕವನ್ನು ನಿರ್ಧರಿಸಿ ಪ್ರತಿ ತಿಂಗಳು ಶಿಬಿರಾರ್ಥಿಗಳನ್ನು ಪರೀಕ್ಷಿಸಲಾಗುವುದು.ಉದ್ಘಾಟನೆ ದಿನದಂದು ಮದ್ಯವ್ಯಸನದಿಂದ ಮುಕ್ತರಾದ ಸುಮಾರು ಐವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ.ಪ್ರತೀ ವರ್ಷ ಇದನ್ನು ಮಾಡುತ್ತಾ ಬಂದಿದ್ದೇವೆ.ಶಿಬಿರವು ಪುರುಷರಿಗೆ ಮಾತ್ರವೂ ಅಲ್ಲದೆ ಮಹಿಳೆಯರಿಗೂ ಇರಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಬಾಳಿಗಾ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸೌಜನ್ಯ ಶೆಟ್ಟಿ, ನಾಗರಾಜ ಮೂರ್ತಿ, ಡಾ. ಮಾನಸ್ ,ಡಾ.ದೀಪಕ್ ಮಲ್ಯ ಮತ್ತು ಪದ್ಮ ನಾಗರಾಜ್ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago