ಉಡುಪಿ: ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ 52 ರ ಬಾಳೆಬರೆ ಘಾಟ್ ನಲ್ಲಿ ಕಾಂಕ್ರೀಟ್ ಪೇವ್ ಮೆಂಟ್ ಕಾಮಗಾರಿಯಲ್ಲಿ ವ್ಯತ್ಯಯ ಉಂಟಾದ ಹಿನ್ನೆಲೆಯಲ್ಲಿ ಬಾಳೆಬರೆ ಘಾಟ್ ನಲ್ಲಿ ವಾಹನ ಸಂಚಾರಕ್ಕೆ ಇದ್ದ ನಿಷೇಧವನ್ನು 10 ದಿನಗಳ ಕಾಲ ಹೆಚ್ಚವರಿಯಾಗಿ ವಿಸ್ತರಿಸಿ ಉಡುಪಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಈ ಮೊದಲು ಎಪ್ರಿಲ್ 5 ರ ವರೆಗೆ ವಾಹನ ಸಂಚಾರಕ್ಕೆ ನಿಷೇಧ ಹೇರಲಾಗಿತ್ತು. ಇದೀಗ ಕಾಮಗಾರಿ ವಿಳಂವಾಗಿರುವ ಕಾರಣ ಎಪ್ರಿಲ್ 15 ರವರೆಗೆ ನಿಷೇಧ ಮುಂದುವರೆಸಲಾಗಿದ್ದು, ವಾಹನ ಸವಾರರು ಬದಲಿ ರಸ್ತೆಯಲ್ಲಿ ಸಂಚಾರ ನಡೆಸಲು ಆದೇಶಿಸಲಾಗಿದೆ.
ತೀರ್ಥಹಳ್ಳಿ ಮೂಲಕ ಕುಂದಾಪುರ ಕಡೆಗೆ ಸಂಚರಿಸುವ ಲಘು ವಾಹನಗಳು ತೀರ್ಥಹಳ್ಳಿ – ಹಾಲಾಡಿ – ಬಸ್ರೂರು – ಕುಂದಾಪುರ, ಭಾರೀ ವಾಹನಗಳು ತೀರ್ಥಹಳ್ಳಿ- ಹೆಬ್ರಿ – ಉಡುಪಿ – ಕುಂದಾಪುರ ಮೂಲಕ ಸಂಚರಿಸಲು ಸೂಚಿಸಲಾಗಿದೆ. ತೀರ್ಥಹಳ್ಳಿ – ಯಡೂರು – ಹುಲಿಕಲ್ – ಕುಂದಾಪುರ ಕಡೆಗೆ ಹೋಗುವ ವಾಹನಗಳು ತೀರ್ಥಹಳ್ಳಿ – ಯಡೂರು – ಮಾಸ್ತಿಕಟ್ಟೆ- ನಗರ – ಕೊಲ್ಲೂರು –ಕುಂದಾಪುರ ಮೂಲ ಸಂಚರಿಸಬೇಕು. ಹೊಸನಗರ – ನಗರ – ಕೊಲ್ಲೂರು – ಕುಂದಾಪುರ ರಸ್ತೆಯಲ್ಲಿ ಭಾರಿ ಸರಕು ವಾಹನಗಳಾದ ಮಲ್ಟಿ ಆಕ್ಸೆಲ್ ಹೊರತುಪಡಿಸಿ ಲಘು ಸರಕು ವಾಹನಗಳು ಮಾತ್ರ ಸಂಚರಿಸಬಹುದಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…