ಉಡುಪಿ: ಎ.26 ರಂದು ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆ : 8 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಸಹಕಾರ ಭಾರತಿ – vishwanews24
ಉಡುಪಿ: ಎ.26 ರಂದು ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆ : 8 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಸಹಕಾರ ಭಾರತಿ
ಉಡುಪಿ: ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ 8 ಸ್ಥಾನಗಳಿಗೆ ಎ.26 ರಂದು ಚುನಾವಣೆ ನಡೆಯಲಿದ್ದು, ಸಹಕಾರ ಭಾರತಿಯು 8 ಕ್ಷೇತ್ರಗಳಿಗೆ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ ಎಂದು ಸಹಕಾರ ಭಾರತಿಯ ಜಿಲ್ಲಾಧ್ಯಕ್ಷ ದಿನೇಶ್ ಹೆಗ್ಡೆ ಆತ್ರಾಡಿ ಹೇಳಿದರು.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಹಕಾರಿ ಭಾರತಿ ಬೆಂಬಲದೊಂದಿಗೆ ಕುಂದಾಪುರ ಉಪವಿಭಾಗ ಕ್ಷೇತ್ರದ 7 ಸಾಮಾನ್ಯ ಸ್ಥಾನಗಳಿಗೆ ಅಭ್ಯರ್ಥಿಯಾಗಿ ಮೋಹನ್ದಾಸ್ ಅಡ್ಯಂತಾಯ (ಕಾರ್ಕಳ), ಭೋಜ ಪೂಜಾರಿ(ಹೆಬ್ರಿ), ಅಶೋಕ್ ರಾವ್(ಕಾಪು), ಹೆರ್ಗ ದಿನಕರ್ ಶೆಟ್ಟಿ(ಉಡುಪಿ), ಕಾಡೂರು ಸುರೇಶ್ ಶೆಟ್ಟಿ(ಕುಂದಾಪುರ), ಸುಬ್ಬಣ್ಣ ಶೆಟ್ಟಿ & ಟಿವಿ.ಪ್ರಾಣೇಶ್ ಯಡಿಯಾಳ್(ಬೈಂದೂರು), ಮಹಿಳಾ ಮೀಸಲಾತಿ ಕ್ಷೇತ್ರದಲ್ಲಿ ಶಾಂತಾ.ಎಸ್.ಭಟ್ (ಬ್ರಹ್ಮಾವರ) ಸ್ಪರ್ಧಿಸಲಿದ್ದಾರೆ ಎಂದರು.
UPSC ಪರೀಕ್ಷೆ 2024 ಫಲಿತಾಂಶ ಪ್ರಕಟ : ಶಕ್ತಿ ದುಬೆ ದೇಶಕ್ಕೆ ಮೊದಲ ರ್ಯಾಂಕ್ – vishwanews24
ಸಹಕಾರಿ ಭಾರತಿಯಿಂದ ಕಳೆದ 18 ವರ್ಷ ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಾಗಿ, ಅಧ್ಯಕ್ಷರಾಗಿ, ಕೆಎಮ್ಎಫ್ ಪ್ರತಿನಿಧಿಯಾಗಿ ಸ್ಕಾಡ್ಸ್ ಸಂಸ್ಥೆಯ ಅಧ್ಯಕ್ಷರಾಗಿ ನಿರಂತರ ಸ್ಥಾನಮಾನಗಳನ್ನು ಪಡೆದಿದ್ದ ಕೊಡವೂರು ರವಿರಾಜ್ ಹೆಗ್ಡೆ ಅವರು, ಚುನಾವಣಾ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯವರೆಗೆ ಸಹಕಾರ ಭಾರತಿಯೊಂದಿಗೆ ಇದ್ದು, ತಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ, ಹೊಸಬರಿಗೆ ಅವಕಾಶ ನೀಡಿ ಎಂದು ಹೇಳಿದ್ದರು. ಆದರೆ, ಇದೀಗ ಕಾಂಗ್ರೆಸ್ ಬೆಂಬಲಿತ ಕೂಟದಲ್ಲಿ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಆ ಮೂಲಕ ಸಹಕಾರ ಭಾರತಿಗೆ ದ್ರೋಹ ಎಸಗಿದ್ದಾರೆ ಎಂದು ದೂರಿದರು.
ಕಾಂಗ್ರೆಸ್ ಬೆಂಬಲಿತವಾಗಿ ಕೊಡವೂರು ರವಿರಾಜ್ ಹೆಗ್ಡೆ, ಮಮತಾ ಶೆಟ್ಟಿ, ಸ್ವತಂತ್ರ ಅಭ್ಯರ್ಥಿಯಾಗಿ ಕಮಲಾಕ್ಷ ಹೆಬ್ಬಾರ್ ಮತ್ತು ಸಿತ್ಮಾ ಆರ್ ಶೆಟ್ಟಿ ಸಹಕಾರ ಭಾರತಿಯ ವಿರುದ್ದ ಸ್ಪರ್ಧಿಸುತ್ತಿದ್ದಾರೆ. ಹೈನುಗಾರರು ಗೊಂದಲಕ್ಕೆ ಒಳಗಾಗದೇ, ಸಹಕಾರ ಭಾರತಿಯ ಅಧಿಕೃತ ಅಭ್ಯರ್ಥಿಗಳಿಗೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.
ಉಡುಪಿ: ಜನಿವಾರವನ್ನು ಹಿಜಾಬ್ಗೆ ಹೋಲಿಸುವುದು ದುರುದ್ದೇಶಪೂರಿತ ಕೃತ್ಯ : ಶಾಸಕ ಯಶ್ಪಾಲ್ ಸುವರ್ಣ – vishwanews24
ಸುದ್ದಿಗೋಷ್ಠಿಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ನರಸಿಂಹ ಕಾಮತ್, ಹಾಲು ಪ್ರಕೋಷ್ಠ ರಾಜ್ಯ ಸಂಚಾಲಕ ಬೋಳ ಸದಾಶಿವ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುದೇಶ್ ನಾಯಕ್ ಉಪಸ್ಥಿತರಿದ್ದರು.
