ಉಡುಪಿ; ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಏರ್ ಲಿಫ್ಟ್ ಮಾಡೋದಾಗಿ ಹೇಳಿ ವ್ಯಕ್ತಿಯೊಬ್ಬರಿಗೆ 3 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಈ ಬಗ್ಗೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮಂದಾರ್ತಿಯ ಪ್ರಮೋದ್ ಕುಮಾರ್ ಶೆಟ್ಟಿ(39) ಎಂಬವರು ಅಲ್ಯೂಮಿನಿಯಂ ಫ್ಯಾಬ್ರಿಕೇಷನ್ ವ್ಯವಹಾರ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. ಅವರಿಗೆ ಸೆ.4ರಂದು ಇವರಿಗೆ ಅಪರಿಚಿತ ವ್ಯಕ್ತಿ ಮೊಬೈಲ್ ಕರೆ ಮಾಡಿ ತಾನು ರಾಜೇಶ್ ಶಾ, ಇರೋ ಬಾಂಡ್ ಕಂಪನಿಯ ಮಾಲೀಕನೆಂದು ಪರಿಚಯಿಸಿಕೊಂಡಿದ್ದಾನೆ. ಬಳಿಕ ತನ್ನ ಮಗನಿಗೆ ಕಾರವಾರ-ಗೋವಾ ಮಾರ್ಗದ ನಡುವೆ ರಸ್ತೆ ಅಪಘಾತವಾಗಿದ್ದು ಆತನನ್ನು ಏರ್‌ಲಿಫ್ಟ್ ಮೂಲಕ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲು ತುರ್ತಾಗಿ 3 ಲಕ್ಷ ರೂ. ಹಣ ಬೇಕಾಗಿದೆ. ಆದುದರಿಂದ ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸುವಂತೆ ತಿಳಿಸಿದ್ದನು.
ಅದನ್ನು ನಂಬಿದ ಪ್ರಮೋದ್ ಅವರು ತನ್ನ ಗೆಳೆಯರಿಂದ ಒಟ್ಟು 3 ಲಕ್ಷ ರೂ. ಹಣವನ್ನು ಜಿಪೇ ಮೂಲಕ ವರ್ಗಾಯಿಸಿದ್ದು ಬಳಿಕ ಆತ ಮೋಸ ಮಾಡಿರುವುದು ಗೊತ್ತಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಉಡುಪಿ :ಬಸ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಮಹಿಳೆ ಸ್ಥಳದಲ್ಲಿಯೇ ಸಾವು – Vishwanews24
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…