ಉಡುಪಿ: ಆಕಾಶಕಾಯದಲ್ಲಿ ದಿನವೂ ಬೆಳ್ಳಗೆ ಗೋಚರಿಸುವ ಚಂದ್ರ ಏ.1ರಂದು ಸಂಜೆ 6:30ಕ್ಕೆ ಪಿಂಕ್ ಸೂಪರ್ ಮೂನ್ (ಗುಲಾಬಿ ಬಣ್ಣದಲ್ಲಿ) ಕಂಡುಬರಲಿದ್ದಾನೆ. ಅಲ್ಲದೆ, ಪ್ರತಿದಿನ ಕಾಣುತ್ತಿದ್ದ ಗಾತ್ರಕ್ಕಿಂತ ಶೇ.30ರಷ್ಟು ಹೆಚ್ಚು ಪ್ರಕಾಶಮಾನವಾಗಿ ಮತ್ತು ದೊಡ್ಡದಾಗಿ ಗೋಚರಿಸಲಿದ್ದಾನೆ.
ಬಣ್ಣ ಬದಲಿಸಿಕೊಳ್ಳಲಿರುವ ಚಂದ್ರನ ಗೋಚರದಲ್ಲಿನ ಕೌತುಕ ಹಾಗೂ ಅಪೂರ್ವ ಕ್ಷಣಗಳನ್ನು ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ. ‘ಮೋಸ್ಟ್ ಪವರ್ ಫುಲ್’ ಎಂಬ ವಿಶ್ವ ದಾಖಲೆ ಗಳಿಸಿದ ಮಣಿಪಾಲದ ಆರ್. ಮನೋಹರ್ ಅವರು ಆವಿಷ್ಕರಿಸಿದ ದೂರದರ್ಶಕದ ಮೂಲಕ ಏ.1ರಂದು ಸಂಜೆ 6:30ಕ್ಕೆ ಕೊಳಲಗಿರಿಯ ಅತಿ ಎತ್ತರ ಪ್ರದೇಶದಲ್ಲಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯ ಎದುರು. (ಗೋ ಆಸ್ಪತ್ರೆಯ ಬಳಿ ) ಕಾರ್ಯಕ್ರಮ ಆಯೋಜಿಸಲಾಗಿದೆ.
ಇದನ್ನೂ ಓದಿ:
ತುಳುನಾಡು ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಫ್ರಾಂಕಿ ಡಿಸೋಜ ಕೊಳಲಗಿರಿ ಉದ್ಘಾಟಿಸಲಿದ್ದು, ಉದ್ಯಮಿ ಪ್ರಕಾಶ್ ಭಂಡಾರಿ ಪಾಲ್ಗೊಳ್ಳಲಿದ್ದಾರೆ. ಖಗೋಳದ ವಿಶೇಷತೆ ಹಾಗೂ ಆಸಕ್ತಿ ಹೆಚ್ಚಿಸುವ ನಿಟ್ಟಿನಲ್ಲಿ ಉಚಿತವಾಗಿ ವೀಕ್ಷಣೆಗೆ ಅವಕಾಶ ಮಾಡಲಾಗಿದೆ. ಸಾರ್ವಜನಿಕರು, ವಿಶೇಷವಾಗಿ ವಿದ್ಯಾರ್ಥಿಗಳು ಪ್ರಯೋಜನ ಮಾಡಿಕೊಳ್ಳಬೇಕು ಎಂದು ಕಾರ್ಯಕ್ರಮ ಸಂಘಟಕರಾದ ಗಣೇಶ್ ರಾಜ್ ಸರಳಬೆಟ್ಟು, ಜಯ ಶೆಟ್ಟಿ ಬನ್ನಂಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…