ಉಡುಪಿ: ಜಿಲ್ಲೆಯ ಆಸ್ಪತ್ರೆಗಳಲ್ಲಿ ಸ್ವಾಬ್ ಪರೀಕ್ಷೆ ಕಡಿಮೆಯಾಗುತ್ತಿದ್ದು, ಐಎಲ್‌ಐ ಹಾಗೂ ಸಾರಿ ವರದಿ ಸರಿಯಾಗಿ ನಿರ್ವಹಿಸದೇ ಇರುವ ಹಾಗೂ ಹೊರರೋಗಿ ವಿಭಾಗದ ನೋಂದಣಿಯನ್ನು ನಿರ್ವಹಿಸದ ಮತ್ತು ದರಪಟ್ಟಿಯನ್ನು ಪ್ರದರ್ಶಿಸದೇ ಇರುವ ಖಾಸಗಿ ಆಸ್ಪತ್ರೆಗಳ ಮಾನ್ಯತೆಯನ್ನು ರದ್ದು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು.
ಅವರು ಜಿಲ್ಲಾ ಆರೋಗ್ಯ ಮತ್ತು ಕು.ಕ. ಅಧಿಕಾರಿಯವರ ಕಚೇರಿಯಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಖಾಸಗಿ ವೈದ್ಯಕೀಯ ನೊಂದಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಉಡುಪಿ : ಹೆಚ್ಚಿನ ಸಂಖ್ಯೆಯಲ್ಲಿ ಯುವ ಮತದಾರರನ್ನು ನೊಂದಣಿ ಮಾಡಿ : ಶಂಭುಭಟ್ -Vishwanews24
ಕೋವಿಡ್ ಲಸಿಕೆಯನ್ನು ಎಲ್ಲಾ ಆರೋಗ್ಯ ಕಾರ್ಯಕರ್ತರು ಕಡ್ಡಾಯವಾಗಿ ತೆಗೆದುಕೊಳ್ಳುವಂತೆ ಸೂಚಿಸಿದ ಜಿಲ್ಲಾಧಿಕಾರಿ, ಜಿಲ್ಲೆಯು ಎಲ್ಲಾ ವಿಚಾರದಲ್ಲಿ ಮುಂಚೂಣಿಯಲ್ಲಿದ್ದು, ಲಸಿಕಾ ಕಾರ್ಯಕ್ರಮದಲ್ಲಿಯೂ ಕೂಡ ಈ ಸ್ಥಾನವನ್ನು ಕಾಯ್ದುಕೊಳ್ಳುವಂತೆ ಅವರು ತಿಳಿಸಿದರು. ಖಾಸಗಿ ಕ್ಲಿನಿಕ್‌ಗಳಲ್ಲಿ ಕೋವಿಡ್‌ಗೆ ಸಂಬAಧಿಸಿದ ಐಎಲ್‌ಐ ಹಾಗೂ ಸಾರಿ ವರದಿ ಗಳನ್ನು ಸರಿಯಾದ ರೀತಿಯಲ್ಲಿ ಸಮರ್ಪಕವಾಗಿ ನಿರ್ವಹಿಸಬೇಕು ಹಾಗೂ ಅವರನ್ನು ಸ್ವಾಬ್ ಪರೀಕ್ಷೆಗೆ ಒಳಪಡಿಸದೇ ಇದ್ದಲ್ಲಿ ಅಂತವರ ಕ್ಲಿನಿಕ್ ನೋಂದಣಿಯನ್ನು ರದ್ದುಗೊಳಿಸಲಾಗುವುದು ಎಂದರು.
ಸಭೆಯಲ್ಲಿ ಡಿಹೆಚ್‌ಓ ಡಾ. ಸುಧೀರ್ ಚಂದ್ರ ಸೂಡ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶ್ರೀ ರಾಮರಾವ್ ಕೆ, ತಾಲೂಕು ಆರೋಗ್ಯಾಧಿಕಾರಿಗಳು ಮತ್ತು ಖಾಸಗಿ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಉಡುಪಿ : ಬುಡಕಟ್ಟು ಜನಾಂಗದವರು ಒಗ್ಗಟ್ಟಿನಲ್ಲಿದ್ದರೆ ಯಶಸ್ಸು : ದಿನಕರ ಬಾಬು -Vishwanews24
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…