Featured

ಉಡುಪಿ: ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ ; ಆರೋಪಿ ಬಂಧನ – vishwanews24

ಉಡುಪಿ: ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ ; ಆರೋಪಿ ಬಂಧನ

ಉಡುಪಿ: ಮೂರು ದಿನಗಳ ಹಿಂದೆ ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಸೂಳೆಬಾವಿ ಗ್ರಾಮದ ಮುತ್ತು (35) ಬಂಧಿತ ಆರೋಪಿ.

ಈತ ಜ.23ರಂದು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಉಡುಪಿ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.

ಈ ಪ್ರಕರಣದಲ್ಲಿ ಆರೋಪಿತನು ಅಪರಿಚಿತನಾಗಿದ್ದರಿಂದ, ಆರೋಪಿತನ ಪತ್ತೆಗೆ ಪೊಲೀಸರ ಐದು ತಂಡಗಳನ್ನು ರಚಿಸಲಾಗಿತ್ತು. ಹಲವಾರು ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡಿ ಆರೋಪಿಯ ಮಾಹಿತಿಯನ್ನು ಸಾರ್ವಜನಿಕರಿಗೂ ಪ್ರಚಾರಪಡಿಸಲಾಗಿತ್ತು.

ಸಾರ್ವಜನಿಕರ ಸಹಾಯ ಮತ್ತು ಪೊಲೀಸ್‌ ಅಧಿಕಾರಿ, ಸಿಬ್ಬಂದಿಗಳ ಸತತ ಪ್ರಯತ್ನದಿಂದ, ಜ.26ರಂದು ಸಂಜೆ ಆರೋಪಿ ಮುತ್ತುನನ್ನು ಶ್ರೀಕೃಷ್ಣ ಮಠದ ಪರಿಸರದ ವಾದೀರಾಜ 3ನೇ ಕ್ರಾಸ್‌ ಬಳಿ ಬಂಧಿಸಲಾಯಿತು. ಆರೋಪಿ ಉಡುಪಿಯಲ್ಲಿ ಯಾವುದೇ ವಿಳಾಸವನ್ನು ಹೊಂದದೆ ಅಲೆಮಾರಿಯಾಗಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

1 hour ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

2 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

2 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

3 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

4 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

4 hours ago