ಉಡುಪಿ: ಮೂರು ದಿನಗಳ ಹಿಂದೆ ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಸೂಳೆಬಾವಿ ಗ್ರಾಮದ ಮುತ್ತು (35) ಬಂಧಿತ ಆರೋಪಿ.
ಈತ ಜ.23ರಂದು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.
ಈ ಪ್ರಕರಣದಲ್ಲಿ ಆರೋಪಿತನು ಅಪರಿಚಿತನಾಗಿದ್ದರಿಂದ, ಆರೋಪಿತನ ಪತ್ತೆಗೆ ಪೊಲೀಸರ ಐದು ತಂಡಗಳನ್ನು ರಚಿಸಲಾಗಿತ್ತು. ಹಲವಾರು ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡಿ ಆರೋಪಿಯ ಮಾಹಿತಿಯನ್ನು ಸಾರ್ವಜನಿಕರಿಗೂ ಪ್ರಚಾರಪಡಿಸಲಾಗಿತ್ತು.
ಸಾರ್ವಜನಿಕರ ಸಹಾಯ ಮತ್ತು ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ಸತತ ಪ್ರಯತ್ನದಿಂದ, ಜ.26ರಂದು ಸಂಜೆ ಆರೋಪಿ ಮುತ್ತುನನ್ನು ಶ್ರೀಕೃಷ್ಣ ಮಠದ ಪರಿಸರದ ವಾದೀರಾಜ 3ನೇ ಕ್ರಾಸ್ ಬಳಿ ಬಂಧಿಸಲಾಯಿತು. ಆರೋಪಿ ಉಡುಪಿಯಲ್ಲಿ ಯಾವುದೇ ವಿಳಾಸವನ್ನು ಹೊಂದದೆ ಅಲೆಮಾರಿಯಾಗಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…