ಉಡುಪಿ: ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಿಸುವ ವಾಹನಗಳು ಓವರ್‌ಲೋಡ್‌ನಿಂದಾಗಿ ಕಾಂಕ್ರೀಟ್ ರಸ್ತೆಯ ಮೇಲೆ ಬೀಳುವುದರಿಂದ ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ತೊಂದರೆ ಉಂಟಾಗುವುದಲ್ಲದೇ ಅಪಘಾತಕ್ಕೆ ಕಾರಣವಾಗುತ್ತಿವೆ. ಅಂತಹ ವಾಹನಗಳ ವಿರುದ್ಧ ದಂಡ ವಿಧಿಸಬೇಕು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ರಸ್ತೆ ಸುರಕ್ಷಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಕೆಲವು ಬಸ್‌ಗಳು ಬಸ್ ನಿಲ್ದಾಣವನ್ನು ಹೊರತುಪಡಿಸಿ ಎಲ್ಲೆಂದರಲ್ಲಿ ನಿಲ್ಲುತ್ತಿವೆ. ಇದರಿಂದ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ. ಈ ಬಗ್ಗೆ ಆರ್.ಟಿ.ಒ. ಅಧಿಕಾರಿಗಳಿಗೆ ಕ್ರಮ ವಹಿಸಲು ಸೂಚಿಸಲಾಗಿತ್ತು. ಆದರೂ ಸುಧಾರಣೆ ಆಗಿಲ್ಲ. ಪ್ರತೀ ತಿಂಗಳೂ ನಿಯಮ ಉಲ್ಲಂ ಸಿದ ಬಸ್‌ಗಳ ಮೇಲೆ ಪ್ರಕರಣ ದಾಖಲಿಸಬೇಕು. ಬಸ್‌ಗಳಿಗೂ ಬಾಗಿಲು ಅಳವಡಿಸಬೇಕು. ಈ ಬಗ್ಗೆ ನಿಗದಿತ ಸಮಯಾವಕಾಶ ನೀಡಿ ಅಳವಡಿಸದಿರುವ ವಾಹನಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.
ಜಿಲ್ಲೆಯ ಹೆದ್ದಾರಿಗಳಲ್ಲಿ ಅಪಘಾತ ಸಂಭವಿಸುವ 18 ಬ್ಲ್ಯಾಕ್ ಸ್ಪಾಟ್ ಗುರುತಿಸಿದ್ದು, ವೈಜ್ಞಾನಿಕವಾಗಿ ರಸ್ತೆ ಕಾಮಗಾರಿ ಕೈಗೊಳ್ಳಲು ಸೂಚಿಸಲಾಗಿತ್ತು. ಇವುಗಳಲ್ಲಿ ಬಹುತೇಕ ಕಾಮ ಗಾರಿ ಕೈಗೊಳ್ಳಲಾಗಿದೆ. ಬಾಕಿ ಕಾಮಗಾರಿಗಳನ್ನು ಆದ್ಯತೆ ಮೇಲೆ ಕೈಗೊಳ್ಳಲು ಸೂಚಿಸಲಾಯಿತು.
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…
ಮಂಗಳೂರು: ವಿದೇಶಿ ಉದ್ಯೋಗದ ಆಕಾಂಕ್ಷಿಗಳು ಯಾವುದೇ ಏಜೆನ್ಸಿಯನ್ನು ನಂಬುವ ಮುನ್ನಎಚ್ಚರ : ಸುಧೀರ್ ಕುಮಾರ್ ರೆಡ್ಡಿ ಮನವಿ ಮಂಗಳೂರು: ವಿದೇಶದಲ್ಲಿ…
ಅಟ್ಟಿಕಾ ಗೋಲ್ಡ್ ಕಂಪನಿಗೆ ಡಬಲ್ ಶಾಕ್ : ED ದಾಳಿ ಬೆನ್ನಲ್ಲೇ, IT ಇಲಾಖೆ ಅಧಿಕಾರಿಗಳಿಂದ ದಾಳಿ ಬೆಂಗಳೂರು: ಅಟ್ಟಿಕಾ…