ಉಡುಪಿ: ಶಾಲಾ ಕೆಲಸದ ಅವಧಿಯಲ್ಲಿ ಮದ್ಯಪಾನ ಮಾಡಿ ಶಾಲೆಯ ಜಗಲಿಯಲ್ಲಿ ಮಲಗಿದ್ದ ಪೆರ್ಡೂರು ಸಮೀಪದ ಅಲಂಗಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಕೃಷ್ಣಮೂರ್ತಿ ನಾಯಕ್ ಅವರನ್ನು ಡಿಡಿಪಿಐ ಗಣಪತಿ ಕೆ. ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಿದ್ದಾರೆ ಎಂದು ವರದಿಯಾಗಿದೆ.
ಗ್ರಾಮದ ಶಾಲೆಯ ಮಕ್ಕಳ ಭವಿಷ್ಯ ರೂಪಿಸಬೇಕಾದ ಶಿಕ್ಷಕ ಬೇಜವಾಬ್ದಾರಿಯುತವಾಗಿ ವರ್ತಿಸುತ್ತಿದ್ದು, ಕೂಡಲೇ ಅವರನ್ನು ಅಮಾನತು ಮಾಡಬೇಕು ಎಂದು ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷರು, ಶಾಲಾಭಿವೃದ್ಧಿ ಸಮಿತಿ, ಗ್ರಾಮಸ್ಥರು ಸಾಮಾಜಿಕ ಕಾರ್ಯಕರ್ತರು ಒತ್ತಾಯಿಸಿದ್ದು, ಘಟನೆಯ ಸತ್ಯಾಸತ್ಯತೆಯ ಅಧ್ಯಯನ ವರದಿ ಪಡೆದು ಅದರ ಆಧಾರದಲ್ಲಿ ತಪ್ಪಿತಸ್ಥರೆಂದು ಕಂಡು ಬಂದ ಕೃಷ್ಣ ಮೂರ್ತಿ ನಾಯಕ್‌ರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತಿನಲ್ಲಿಡಲಾಗಿದೆ ಎಂದು ಡಿಡಿಪಿಐ ಆದೇಶದಲ್ಲಿ ತಿಳಿಸಿದ್ದಾರೆ.
ಇನ್ನು ಶಿಕ್ಷಕರು ಕರ್ನಾಟಕ ನಾಗರಿಕ ಸೇವಾ ನಿಯಮಗಳನ್ನು ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿರುವುದರಿಂದ ತಕ್ಷಣಕ್ಕೆ ಜಾರಿಗೆ ಬರುವಂತೆ ಇಲಾಖಾ ತನಿಖೆಯನ್ನು ಕಾಯ್ದಿರಿಸಿ ಕರ್ತವ್ಯದಿಂದ ಅಮಾನತುಗೊಳಿಸಿರುವುದಾಗಿ ಡಿಡಿಪಿಐ ಆದೇಶದಲ್ಲಿ ತಿಳಿಸಿದ್ದಾರೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…