Featured

ಉಡುಪಿ: ಕಂಠಪೂರ್ತಿ ಕುಡಿದು ಶಾಲೆಯ ಜಗುಲಿ ಮೇಲೆ  ಮಲಗಿದ್ದ ಶಿಕ್ಷಕ ಅಮಾನತು – Vishwanews24

ಉಡುಪಿ: ಕಂಠಪೂರ್ತಿ ಕುಡಿದು ಶಾಲೆಯ ಜಗುಲಿ ಮೇಲೆ  ಮಲಗಿದ್ದ ಶಿಕ್ಷಕ ಅಮಾನತು

ಉಡುಪಿ: ಶಾಲಾ ಕೆಲಸದ ಅವಧಿಯಲ್ಲಿ ಮದ್ಯಪಾನ ಮಾಡಿ ಶಾಲೆಯ ಜಗಲಿಯಲ್ಲಿ ಮಲಗಿದ್ದ ಪೆರ್ಡೂರು ಸಮೀಪದ ಅಲಂಗಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಕೃಷ್ಣಮೂರ್ತಿ ನಾಯಕ್‌ ಅವರನ್ನು ಡಿಡಿಪಿಐ ಗಣಪತಿ ಕೆ. ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಿದ್ದಾರೆ ಎಂದು ವರದಿಯಾಗಿದೆ.

ಗ್ರಾಮದ ಶಾಲೆಯ ಮಕ್ಕಳ ಭವಿಷ್ಯ ರೂಪಿಸಬೇಕಾದ ಶಿಕ್ಷಕ ಬೇಜವಾಬ್ದಾರಿಯುತವಾಗಿ ವರ್ತಿಸುತ್ತಿದ್ದು, ಕೂಡಲೇ ಅವರನ್ನು ಅಮಾನತು ಮಾಡಬೇಕು ಎಂದು ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷರು, ಶಾಲಾಭಿವೃದ್ಧಿ ಸಮಿತಿ, ಗ್ರಾಮಸ್ಥರು ಸಾಮಾಜಿಕ ಕಾರ್ಯಕರ್ತರು ಒತ್ತಾಯಿಸಿದ್ದು, ಘಟನೆಯ ಸತ್ಯಾಸತ್ಯತೆಯ ಅಧ್ಯಯನ ವರದಿ ಪಡೆದು ಅದರ ಆಧಾರದಲ್ಲಿ ತಪ್ಪಿತಸ್ಥರೆಂದು ಕಂಡು ಬಂದ ಕೃಷ್ಣ ಮೂರ್ತಿ ನಾಯಕ್‌ರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತಿನಲ್ಲಿಡಲಾಗಿದೆ ಎಂದು ಡಿಡಿಪಿಐ ಆದೇಶದಲ್ಲಿ ತಿಳಿಸಿದ್ದಾರೆ.

ಇನ್ನು ಶಿಕ್ಷಕರು ಕರ್ನಾಟಕ ನಾಗರಿಕ ಸೇವಾ ನಿಯಮಗಳನ್ನು ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿರುವುದರಿಂದ ತಕ್ಷಣಕ್ಕೆ ಜಾರಿಗೆ ಬರುವಂತೆ ಇಲಾಖಾ ತನಿಖೆಯನ್ನು ಕಾಯ್ದಿರಿಸಿ ಕರ್ತವ್ಯದಿಂದ ಅಮಾನತುಗೊಳಿಸಿರುವುದಾಗಿ ಡಿಡಿಪಿಐ ಆದೇಶದಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

20 minutes ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

42 minutes ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

53 minutes ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

1 hour ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

1 hour ago

ಉಡುಪಿ: ಅ.9ರಂದು ಕುಂತಳನಗರದಲ್ಲಿ ಬೃಹತ್ ಉದ್ಯೋಗ ಮೇಳ, ಸ್ಟಡಿ ಅಬ್ರಾಡ್ ಎಕ್ಸ್ಪೋ – vishwanews24

ಉಡುಪಿ: ಅ.9ರಂದು ಕುಂತಳನಗರದಲ್ಲಿ ಬೃಹತ್ ಉದ್ಯೋಗ ಮೇಳ, ಸ್ಟಡಿ ಅಬ್ರಾಡ್ ಎಕ್ಸ್ಪೋ; 2,500 ಉದ್ಯೋಗಾವಕಾಶಗಳ ನಿರೀಕ್ಷೆ ಉಡುಪಿ: ಉಡುಪಿ ಗ್ರಾಮೀಣ…

1 hour ago