ಉಡುಪಿ : ಶಾಲೆಯ ಶಿಕ್ಷಕನೋರ್ವ ಕಂಠಪೂರ್ತಿ ಕುಡಿದು ಶಾಲೆಯ ಜಗುಲಿ ಮೇಲೆ ಮಲಗಿದ ಘಟನೆ ಪೆರ್ಡೂರು ಗ್ರಾಮದ ಅಲಂಗಾರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಇಲ್ಲಿನ ಪೆರ್ಡೂರು ಗ್ರಾಮದ ಅಲಂಗಾರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕೃಷ್ಣಮೂರ್ತಿ ಎಂಬಾತನೇ ಕಂಠಪೂರ್ತಿ ಕುಡಿದು ಶಾಲೆಯ ಜಗಲಿಯಲ್ಲಿ ಮಲಗಿರುವ ಶಿಕ್ಷಕನಾಗಿದ್ದಾನೆ.
ಶಾಲೆಯ ಶಿಕ್ಷಕರಾದ ಕೃಷ್ಣಮೂರ್ತಿ ಕಂಠಪೂರ್ತಿ ಕುಡಿದು ಜಗಲಿಯಲ್ಲೆ ಮಲಗಿದ್ದಾರೆ. ಗ್ರಾಮದ ಶಾಲೆಯ ಮಕ್ಕಳ ಭವಿಷ್ಯ ರೂಪಿಸಬೇಕಾದ ಶಿಕ್ಷಕ ಇಂತಹ ಕಾರ್ಯವನ್ನು ನಡೆಸಿದ್ದು, ಶಿಕ್ಷಕನನ್ನು ಕೂಡಲೇ ಅಮಾನಾತು ಮಾಡುವಂತೆ ಪೆರ್ಡೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ದೇವು ಪೂಜಾರಿ ಉಪಾಧ್ಯಕ್ಷೆ ಚೇತನಾ ಶೆಟ್ಟಿ. ಗ್ರಾಮ ಪಂಚಾಯಿತಿ ಸದಸ್ಯರಾದ ಕೆ ತುಕಾರಾಮ ನಾಯಕ್ .ರಮೇಶ್ ಪೂಜಾರಿ ಶಾಲಾಭಿವೃದ್ಧಿ ಸಮಿತಿ, ಬೈದಷ್ರಿ ಫ್ರೆಂಡ್ಸ್ ನ ಸತೀಶ್ (ಅಣ್ಣು), ಗ್ರಾಮಸ್ಥರು ಸಾಮಾಜಿಕ ಕಾರ್ಯಕರ್ತರು ಆಗ್ರಹಿಸಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ನೀಡಿ ಮನವಿ ಸಲ್ಲಿಸಿದ್ದಾರೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…