Featured

ಉಡುಪಿ : ಕಂದಾಯ ಸಚಿವರ ಗ್ರಾಮ ವಾಸ್ತವ್ಯಕ್ಕೆ ಅಗತ್ಯ ಸಿದ್ದತೆ ಮಾಡಿಕೊಳ್ಳಿ : ಜಿಲ್ಲಾಧಿಕಾರಿ ಕೂರ್ಮಾರಾವ್ – Vishwanews24

ಉಡುಪಿ : ಕಂದಾಯ ಸಚಿವರ ಗ್ರಾಮ ವಾಸ್ತವ್ಯಕ್ಕೆ ಅಗತ್ಯ ಸಿದ್ದತೆ ಮಾಡಿಕೊಳ್ಳಿ : ಜಿಲ್ಲಾಧಿಕಾರಿ ಕೂರ್ಮಾರಾವ್ – Vishwanews24

ಉಡುಪಿ : ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಪ್ರಯುಕ್ತಕಂದಾಯ ಸಚಿವ ಅಶೋಕ್ ಅವರು ಫೆ. 19 ರಂದು ಬ್ರಹ್ಮಾವರ ತಾಲೂಕಿನ ಆರೂರು ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದು,ಸಚಿವರ ಕಾರ್ಯಕ್ರಮಕ್ಕೆ ಎಲ್ಲಾ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಕಂದಾಯ ಸಚಿವರ ಗ್ರಾಮ ವಾಸ್ತವ್ಯ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಂದಾಯ ಸಚಿವರು ಮೊದಲಿಗೆ ಕಾರ್ಕಳ ತಾಲೂಕಿಗೆ ಭೇಟಿ ನೀಡಿ, ಅಲ್ಲಿ ಕಡತ ವಿಲೇವಾರಿ ಸಪ್ತಾಹ ಕಾರ್ಯಕ್ರಮ, ಕಂದಾಯ ಮೇಳ ಹಾಗೂ ಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಬ್ರಹ್ಮಾವರ ತಾಲೂಕಿನ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಪ್ರಯುಕ್ತ ಕೊಕ್ಕರ್ಣೆ, ಆರೂರು ಮತ್ತು ಕೆಂಜೂರು ಗ್ರಾಮಗಳಿಗೆ ಭೇಟಿ ನೀಡಲಿದ್ದಾರೆ ಎಂದರು.

ಗ್ರಾಮ ವಾಸ್ತವ್ಯದ ಪ್ರಯುಕ್ತ ಆಗಮಿಸುವ ಸಚಿವರನ್ನು ಕೊಕ್ಕರ್ಣೆಯ ಬಸ್ ನಿಲ್ದಾಣದ ಬಳಿ ಪೂರ್ಣಕುಂಭ ಸ್ವಾಗತದೊಂದಿಗೆ ಸ್ವಾಗತಿಸಲು ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕು, ಕೊಕ್ಕರ್ಣೆ ಕಾರ್ಯಕ್ರಮದ ನಂತರ ನಂತರ ಆರೂರು ತೆರಳುವ ಮಾರ್ಗದಲ್ಲಿ ಕುಡುಬಿ ಜನಾಂಗದವರ ಮನೆಗೆ ಬೇಟಿ ನೀಡಲಿದ್ದಾರೆ. ಸಂಜೆ ಆರೂರಿನಲ್ಲಿ ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ, ಯಕ್ಷಗಾನ , ವೀರಗಾಸೆ, ಡೊಳ್ಳು ಕುಣಿತ ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು.

ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಸಚಿವರು ಆರೂರಿನ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ವಾಸ್ತವ್ಯ ಮಾಡಲಿದ್ದು, ಸಚಿವರು ತಂಗಲು ಅನುಕೂಲವಾಗುವಂತೆ ಸೂಕ್ತ ವ್ಯವಸ್ಥೆಗಳನ್ನು ಕೈಗೊಳ್ಳುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಸಚಿವರು ಕಂದಾಯ ಇಲಾಖೆಗೆ ಸಂಬAಧಿಸಿದ 94 ಸಿ, ಸಿ.ಸಿ, ಸಾಮಾಜಿಕ ಭದ್ರತಾಯೋಜನೆಯ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ, ಕೋವಿಡ್ ಪರಿಹಾರದ ಚೆಕ್ ವಿತರಣೆ ಹಾಗೂ ನಿವೇಶನದ ಹಕ್ಕು ಪತ್ರ , ವಿವಿಧ ಇಲಾಖೆಯ ಸವಲತ್ತುಗಳನ್ನು ವಿತರಿಸಲಿದ್ದು, ಪ್ರಮುಖ ಇಲಾಖೆಗಳ ಯೋಜನೆಗಳ ಕುರಿತು ಮಾಹಿತಿ ನೀಡುವ ಸ್ಟಾಲ್ ಗಳನ್ನು ಅಳವಡಿಸಲು ಹಾಗೂ ಸಂಬAದಪಟ್ಟ ಗ್ರಾಮಗಳ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ತಿಳಿಸಿದರು. .

ಪೆಬ್ರವರಿ 20 ರಂದು ಬೆಳಗ್ಗೆ ಕೆಂಜೂರು ಗ್ರಾಮದ ಕೊರಗರ ಕಾಲೋನಿಗೆ ಸಚಿವರು ಭೇಟಿ ನೀಡಲಿದ್ದು, ಕೊರಗರ ಮನೆಯಲ್ಲಿ ಅವರೇ ಸಿದ್ದಪಡಿಸಿದ ಉಪಹಾರ ಸೇವಿಸಲಿದ್ದಾರೆ ಎಂದರು.

ಸಚಿವರ ಗ್ರಾಮ ವಾಸ್ಯವ್ಯ ಕಾರ್ಯಕ್ರಮದ ಯಶಸ್ವಿಗೆ ವಿವಿಧ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿಗಳನ್ನು ರಚಿಸಿದ ಜಿಲ್ಲಾಧಿಕಾರಿಗಳು , ಎಲ್ಲಾ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಹಾಗೂ ಸ್ಥಳೀಯ ಮುಖಂಡರು ಮತ್ತು ಸಾರ್ವಜನಿಕರಿಂದ ಅಗತ್ಯ ಸಹಕಾರ ಪಡೆಯುವಂತೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಡಾ.ನವೀನ್ ಭಟ್ ವೈ, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಸಹಾಯಕ ಕಮೀಷನರ್ ಕೆ.ರಾಜು ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Vishwa News 24

Recent Posts

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

6 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

6 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

7 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

9 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

9 hours ago

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

1 day ago