Featured

ಉಡುಪಿ ಕಂಬಳಕ್ಕೆ ನನ್ನ ಅಭ್ಯಂತರವಿಲ್ಲ , ಆದರೆ ಅದು ಬಿಜೆಪಿ ಕಂಬಳ ಆಗಬಾರದು : ವಿನಯಕುಮಾರ್ ಸೊರಕೆ – vishwanews24

ಕಾಪು ಶಾಸಕರ ನೇತೃತ್ವದಲ್ಲಿ ನಡೆದ ಕಂಬಳ ಕರೆಯ ಭೂಮಿ ಪೂಜೆ ಕಾನೂನು ಬಾಹಿರ

ಕಂಬಳದ ಹೆಸರಿನಲ್ಲಿ ನನ್ನ ಮೇಲೆ ವಿನಾ ಕಾರಣ ಅಪವಾದ ಮಾಡುವ ಹುನ್ನಾರ

ಉಡುಪಿ: 80 ಬಡಗುಬೆಟ್ಟುವಿನಲ್ಲಿ ನಡೆಯುವ ಉಡುಪಿ ಕಂಬಳಕ್ಕೆ ಜಿಲ್ಲಾಡಳಿತದಿಂದ 6.30 ಎಕ್ರೆ ಭೂಮಿ ಕಂಬಳ ಸಮಿತಿಗೆ ಹಸ್ತಾಂತರವಾಗಿಲ್ಲ. ಆದ್ದರಿಂದ ಫೆ.28 ರಂದು ಕಾಪು ಶಾಸಕರ ನೇತೃತ್ವದಲ್ಲಿ ನಡೆದ ಕಂಬಳ ಕರೆಯ ಭೂಮಿ ಪೂಜೆ ಕಾನೂನು ಬಾಹಿರ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಹೇಳಿದರು.

ಉಡುಪಿ ಕಂಬಳಕ್ಕೆ ನನ್ನ ಅಭ್ಯಂತರವಿಲ್ಲ. ಆದರೆ ಅದು ಬಿಜೆಪಿಯ ಕಂಬಳ ಆಗದೇ ಜಿಲ್ಲಾಡಳಿತದ ಕಂಬಳ ಆಗಬೇಕು. ಸ್ಥಳೀಯರಿಗೆ ಕಂಬಳದಿಂದ ತೊಂದರೆ ಆಗದಂತೆ ಸೂಕ್ತ ವ್ಯವಸ್ಥೆ ಆಗಬೇಕು ಎಂದು ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.

ಇದನ್ನೂ ಓದಿ 👇:

ಕಂಬಳಕ್ಕೆ ಕಾಯ್ದಿರಿಸಿದ ಜಾಗ ಯುವಜನ ಮತ್ತು ಕ್ರೀಡಾ ಇಲಾಖೆಗೆ ಸಂಬಂಧಿಸಿದ್ದು. ಆ ಇಲಾಖೆಯಿಂದ ಸಮಿತಿಗೆ ಹಸ್ತಾಂತರವಾಗಿಲ್ಲ. ಜಿಲ್ಲಾಡಳಿತವೂ ಯಾವುದೇ ತೀರ್ಮಾನ ಮಾಡಿಲ್ಲ. ಶಾಸಕರು ತಮ್ಮ ಅಕ್ರಮಗಳನ್ನು ಮುಚ್ಚಿಹಾಕಲು ನನ್ನ ಮೇಲೆ ಆರೋಪ ಹೊರಿಸುತ್ತಿದ್ದಾರೆ ಎಂದರು.

ಅರಣ್ಯ ಇಲಾಖೆಯ ಭೂಮಿಯಲ್ಲಿ ಕಂಬಳ ಮಾಡಲು ಹೊರಟಿದ್ದರಿಂದ ಅರಣ್ಯ ಇಲಾಖೆ ಕಾಯ್ದೆ ಉಲ್ಲಂಘಿಸಿದ್ದಕ್ಕಾಗಿ ಪ್ರಕರಣ ದಾಖಲಿಸಿದೆ. 40 ವರ್ಷ ಗಳಿಂದ 10 ಕುಟುಂಬಗಳು ಕೃಷಿ ಮಾಡುತ್ತಿದ್ದು, ಅವರಿಗೆ ತೊಂದರೆಯಾಗಬಾರದು. ಇದನ್ನೆಲ್ಲ ಉಸ್ತುವಾರಿ ಸಚಿವರ ಗಮನಕ್ಕೆ ತಂದಿದ್ದು, ಮಾ. 4 ರಂದು ಜಿಲ್ಲಾಡಳಿತ ನಡೆಸಲು ಉದ್ದೇಶಿಸಿದ್ದ ಶಂಕು ಸ್ಥಾಪನೆಯನ್ನು ಕೈಬಿಟ್ಟಿದೆ ಎಂದರು.

ಇದನ್ನೂ ಓದಿ 👇:

ನಾನು ಕಂಬಳದ ವಿರೋಧಿಯಲ್ಲ ಎಂದು ಸ್ಪಷ್ಟಪಡಿಸಿದ ಅವರು, ಪುತ್ತೂರಿನಲ್ಲಿ ನಾನು ಶಾಸಕನಾಗಿದ್ದ ಅವಧಿಯಲ್ಲಿ ಪ್ರಥಮ ಬಾರಿಗೆ ಪುತ್ತೂರು ಕಂಬಳ ಆಯೋಜಿಸಿದ್ದೇನೆ. ಕಂಬಳದ ಹೆಸರಿನಲ್ಲಿ ನನ್ನ ಮೇಲೆ ವಿನಾ ಕಾರಣ ಅಪವಾದ ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಟೀಕಿಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪ್ರಮುಖರಾದ ಹರೀಶ್ ಕಿಣಿ, ಸಂತೋಷ್ ಬೈರಂಪಳ್ಳಿ, ಇಸ್ಮಾಯಿಲ್ ಆತ್ರಾಡಿ, ಸಂತೋಷ್ ಕುಲಾಲ್ ಉಪಸ್ಥಿತರಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago