Featured

ಉಡುಪಿ: ಕಟ್ಟಡ ಪರವಾನಿಗೆ ನಿರಾಕರಣೆ ಆರೋಪಿಸಿ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯೊಳಗೆ ಧರಣಿ -vishwanews24

ಉಡುಪಿ: ಕಟ್ಟಡ ಪರವಾನಿಗೆ ನಿರಾಕರಣೆ ಆರೋಪಿಸಿ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯೊಳಗೆ ಧರಣಿ

ಉಡುಪಿ: ಹಲವು ಬಾರಿ ಕಚೇರಿಗೆ ಅಲೆದಾಟ ಮಾಡಿದರೂ ಕಟ್ಟಡ ಪರವಾನಿಗೆ ನೀಡುತ್ತಿಲ್ಲ ಎಂದು ಆರೋಪಿಸಿ ಅರ್ಜಿದಾರ ಸಾಮಾಜಿಕ ಕಾರ್ಯಕರ್ತರೊಬ್ಬರು ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯೊಳಗೆ ಧರಣಿ ಕುಳಿತ ಘಟನೆ ಇಂದು ನಡೆದಿದೆ.

ಬೆಳಗ್ಗೆ ಕಚೇರಿಯೊಳಗೆ ನೆಲದಲ್ಲಿ ಕುಳಿತು ಧರಣಿ ನಡೆಸಿದ ಸಾಮಾಜಿಕ ಕಾರ್ಯಕರ್ತ ಮುಹಮ್ಮದ್ ಹನೀಫ್, ಬಳಿಕ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಅವರ ಭರವಸೆ ಹಿನ್ನೆಲೆಯಲ್ಲಿ ಮಧ್ಯಾಹ್ನ ವೇಳೆ ಧರಣಿಯನ್ನು ಕೈಬಿಟ್ಟು ಮುಂದೂಡಿದ್ದಾರೆ. ‘ಪ್ರಾಧಿಕಾರ 2019ರಲ್ಲಿ ಸಗ್ರಿಯಲ್ಲಿ ನೀಡಿದ ಲೇಔಟ್‌ನಲ್ಲಿ ನಿರ್ಮಿಸಿದ ಕಟ್ಟಡಕ್ಕೆ ಪರವಾನಿಗೆ ನೀಡುವಂತೆ ಎರಡು ತಿಂಗಳಿನಿಂದ ಅರ್ಜಿ ಸಲ್ಲಿಸಿ ಅಲೆದಾಡುತ್ತಿದ್ದೇನೆ. ಪ್ರಾಧಿಕಾರವೇ ನೀಡಿದ ಲೇಔಟ್‌ನ್ನು ಅಧಿಕಾರಿಗಳು ಅಕ್ರಮ ಹೇಳಿ ಪರವಾನಿಗೆ ನೀಡಲು ಹಿಂದೇಟು ಹಾಕುತ್ತಿದ್ದಾರೆ. ಈ ಜಾಗಕ್ಕೆ ಭೂಬೆಲೆಯ ಶೇ.15ರಷ್ಟು ದಂಡ ಪಾವತಿಸಲಾಗಿದೆ. ಹಾಗಾಗಿ ಈ ಲೇಔಟ್ ಅಕ್ರಮ ಆಗಲು ಹೇಗೆ ಸಾಧ್ಯ’ ಎಂದು ಮುಹಮ್ಮದ್ ಹನೀಫ್ ಪ್ರಶ್ನಿಸಿದರು.

ಬಡವರಿಗೆ ನೀಡಿದ ಮೂವರೆ ಸೆಂಟ್ಸ್ ಜಾಗಕ್ಕೆ ಇವರು ತೊಂದರೆ ಕೊಡುತ್ತಿದ್ದಾರೆ. ಬಡವರು ಯಾರು ಕೂಡ ಜೀವನ ಮಾಡಲು ಇಲ್ಲವೇ? ಇವರು ಮಾಡಿದ ತಪ್ಪಿಗೆ ನಾವು ಶಿಕ್ಷೆ ಅನುಭವಿಸುವಂತಾಗಿದೆ. ಇಂತಹ ಪ್ರಾಧಿಕಾರ ನಮಗೆ ಬೇಡ. ಪರವಾನಿಗೆ ಸಿಗುವವರೆಗೆ ಇಲ್ಲಿಂದ ಕದಲುವುದಿಲ್ಲ ಎಂದು ಅವರು ಪಟ್ಟು ಹಿಡಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಈ ವಿಚಾರವನ್ನು ನ.22ರಂದು ನಡೆಯಲಿರುವ ಪ್ರಾಧಿಕಾರದ ಸಭೆಯಲ್ಲಿ ಇಟ್ಟು ಚರ್ಚಿಸಿ, ಪರಿಹಾರಕ್ಕೆ ಬೆಂಗಳೂರಿನ ಕಚೇರಿಗೆ ಕಳುಹಿಸಲಾಗುವುದು. ಈ ಮೂಲಕ ಈ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸಲಾಗುವುದು. ಈ ಭರವಸೆ ಹಿನ್ನೆಲೆ ಯಲ್ಲಿ ಹನೀಫ್ ಅವರು ತಮ್ಮ ಧರಣಿಯನ್ನು ಕೈಬಿಟ್ಟಿದ್ದಾರೆ’ ಎಂದು ತಿಳಿಸಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago