ಉಡುಪಿ: ಹಲವು ಬಾರಿ ಕಚೇರಿಗೆ ಅಲೆದಾಟ ಮಾಡಿದರೂ ಕಟ್ಟಡ ಪರವಾನಿಗೆ ನೀಡುತ್ತಿಲ್ಲ ಎಂದು ಆರೋಪಿಸಿ ಅರ್ಜಿದಾರ ಸಾಮಾಜಿಕ ಕಾರ್ಯಕರ್ತರೊಬ್ಬರು ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯೊಳಗೆ ಧರಣಿ ಕುಳಿತ ಘಟನೆ ಇಂದು ನಡೆದಿದೆ.
ಬೆಳಗ್ಗೆ ಕಚೇರಿಯೊಳಗೆ ನೆಲದಲ್ಲಿ ಕುಳಿತು ಧರಣಿ ನಡೆಸಿದ ಸಾಮಾಜಿಕ ಕಾರ್ಯಕರ್ತ ಮುಹಮ್ಮದ್ ಹನೀಫ್, ಬಳಿಕ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಅವರ ಭರವಸೆ ಹಿನ್ನೆಲೆಯಲ್ಲಿ ಮಧ್ಯಾಹ್ನ ವೇಳೆ ಧರಣಿಯನ್ನು ಕೈಬಿಟ್ಟು ಮುಂದೂಡಿದ್ದಾರೆ. ‘ಪ್ರಾಧಿಕಾರ 2019ರಲ್ಲಿ ಸಗ್ರಿಯಲ್ಲಿ ನೀಡಿದ ಲೇಔಟ್‌ನಲ್ಲಿ ನಿರ್ಮಿಸಿದ ಕಟ್ಟಡಕ್ಕೆ ಪರವಾನಿಗೆ ನೀಡುವಂತೆ ಎರಡು ತಿಂಗಳಿನಿಂದ ಅರ್ಜಿ ಸಲ್ಲಿಸಿ ಅಲೆದಾಡುತ್ತಿದ್ದೇನೆ. ಪ್ರಾಧಿಕಾರವೇ ನೀಡಿದ ಲೇಔಟ್‌ನ್ನು ಅಧಿಕಾರಿಗಳು ಅಕ್ರಮ ಹೇಳಿ ಪರವಾನಿಗೆ ನೀಡಲು ಹಿಂದೇಟು ಹಾಕುತ್ತಿದ್ದಾರೆ. ಈ ಜಾಗಕ್ಕೆ ಭೂಬೆಲೆಯ ಶೇ.15ರಷ್ಟು ದಂಡ ಪಾವತಿಸಲಾಗಿದೆ. ಹಾಗಾಗಿ ಈ ಲೇಔಟ್ ಅಕ್ರಮ ಆಗಲು ಹೇಗೆ ಸಾಧ್ಯ’ ಎಂದು ಮುಹಮ್ಮದ್ ಹನೀಫ್ ಪ್ರಶ್ನಿಸಿದರು.
ಬಡವರಿಗೆ ನೀಡಿದ ಮೂವರೆ ಸೆಂಟ್ಸ್ ಜಾಗಕ್ಕೆ ಇವರು ತೊಂದರೆ ಕೊಡುತ್ತಿದ್ದಾರೆ. ಬಡವರು ಯಾರು ಕೂಡ ಜೀವನ ಮಾಡಲು ಇಲ್ಲವೇ? ಇವರು ಮಾಡಿದ ತಪ್ಪಿಗೆ ನಾವು ಶಿಕ್ಷೆ ಅನುಭವಿಸುವಂತಾಗಿದೆ. ಇಂತಹ ಪ್ರಾಧಿಕಾರ ನಮಗೆ ಬೇಡ. ಪರವಾನಿಗೆ ಸಿಗುವವರೆಗೆ ಇಲ್ಲಿಂದ ಕದಲುವುದಿಲ್ಲ ಎಂದು ಅವರು ಪಟ್ಟು ಹಿಡಿದರು.
ಈ ಬಗ್ಗೆ ಪ್ರತಿಕ್ರಿಯಿಸಿದ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಈ ವಿಚಾರವನ್ನು ನ.22ರಂದು ನಡೆಯಲಿರುವ ಪ್ರಾಧಿಕಾರದ ಸಭೆಯಲ್ಲಿ ಇಟ್ಟು ಚರ್ಚಿಸಿ, ಪರಿಹಾರಕ್ಕೆ ಬೆಂಗಳೂರಿನ ಕಚೇರಿಗೆ ಕಳುಹಿಸಲಾಗುವುದು. ಈ ಮೂಲಕ ಈ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸಲಾಗುವುದು. ಈ ಭರವಸೆ ಹಿನ್ನೆಲೆ ಯಲ್ಲಿ ಹನೀಫ್ ಅವರು ತಮ್ಮ ಧರಣಿಯನ್ನು ಕೈಬಿಟ್ಟಿದ್ದಾರೆ’ ಎಂದು ತಿಳಿಸಿದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…