Featured

ಉಡುಪಿ: ಕಡಲ್ಕೊರೆತ ತಡೆಗೆ 300 ಕೋಟಿ ರೂ. ಯೋಜನೆ: ಕಂದಾಯ ಸಚಿವ ಕೃಷ್ಣ ಭೈರೇಗೌಡ – vishwanews24

ಉಡುಪಿ: ಕರಾವಳಿ ಜಿಲ್ಲೆಗಳ ಕಡಲ್ಕೊರೆತ ತಡೆಗೆ 300 ಕೋಟಿ ರೂ. ಯೋಜನೆ: ಕಂದಾಯ ಸಚಿವ ಕೃಷ್ಣ ಭೈರೇಗೌಡ

ಉಡುಪಿ: ಕರಾವಳಿಯ ಜಿಲ್ಲೆಗಳಲ್ಲಿ ಕಡಲ್ಕೊರೆತ ನಿರಂತರ ಸಮಸ್ಯೆಯಾಗಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ದೇಶದಂತೆ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಕಡಲ್ಕೊರೆತ ತಡೆಗೆ ₹ 300 ಕೋಟಿ ವೆಚ್ಚದ ಯೋಜನೆ ತಯಾರಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಕಾಪು ತಾಲ್ಲೂಕಿನ ಮೂಳೂರಿನ ಕಡಲ್ಗೊರೆತ ಪ್ರದೇಶಕ್ಕೆ ಬುಧವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಉಡುಪಿ ಜಿಲ್ಲೆಯಲ್ಲಿ ಹೊಸದಾಗಿ ಕಡಲ್ಕೊರೆತ ಸಂಭವಿಸಿರುವ ಪ್ರದೇಶಗಳಲ್ಲಿ ಹಾಗೂ ಈ ಹಿಂದೆ ಕಡಲ್ಕೊರೆತ ಸಂಭವಿಸಿರುವ ಪ್ರದೇಶಗಳಲ್ಲಿ ಕಡಲ್ಗೊರೆತ ತಡೆಗಾಗಿ ₹100 ಕೋಟಿ ಅಂದಾಜು ವೆಚ್ಚದ ಯೋಜನೆ ತಯಾರಿಸಿ ಸಲ್ಲಿಸಲು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದೇನೆ ಎಂದರು.

ಈ ಯೋಜನೆಯನ್ನು ಆದಷ್ಟು ಶೀಘ್ರ ಅಂತಿಮಗೊಳಿಸುತ್ತೇವೆ. ವೈಜ್ಞಾನಿಕ ಪರಿಣತರನ್ನು ಕರೆಸಿ ಕಡಲ್ಕೊರೆತಕ್ಕೆ ಯಾವ ಮಾದರಿಯ ತಡೆ ಕಾಮಗಾರಿ ನಡೆಸಿದರೆ ಹೆಚ್ಚು ಸೂಕ್ತ ಎಂದು ಅಧ್ಯಯನ ನಡೆಸಲು ಸೂಚಿಸುತ್ತೇವೆ. ಅನಂತರ ಕ್ರಿಯಾ ಯೋಜನೆಗೆ ಅನುಮೋದನೆ ನೀಡುತ್ತೇವೆ. ಇದು ದೀರ್ಘಾವಧಿಯ ಯೋಜನೆಯಾಗಿದ್ದು, ಅನುಷ್ಠಾನಕ್ಕೆ ಕನಿಷ್ಠ ಎರಡು ವರ್ಷಗಳಾದರೂ ಬೇಕಾಗಬಹುದು ಎಂದು ಹೇಳಿದರು.

ಕಡಲ್ಕೊರೆತ ತಡೆಗೆ ಮದ್ರಾಸ್ ಐಐಟಿಯವರು ಕೆಲವು ಶಿಫಾರಸುಗಳನ್ನು ಮಾಡಿದ್ದಾರೆ. ಅದರಂತೆ 100 ಮೀಟರ್‌ಗೆ ₹15 ಕೋಟಿ ವೆಚ್ಚವಾಗಬಹುದು. ಇಷ್ಟು ವೆಚ್ಚದ ಕಾಮಗಾರಿ ನಡೆಸುವುದಾದರೆ ಅದರ ಸಾಧಕ ಬಾಧಕಗಳ ಬಗ್ಗೆ ಚರ್ಚೆ ಮಾಡಬೇಕಾಗುತ್ತದೆ ಎಂದರು.

ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಎಸಿ ರಶ್ಮಿ, ಕಾಪು ತಹಶೀಲ್ದಾರ್ ಪ್ರತಿಭಾ, ವಿನಯಕುಮಾರ್ ಸೊರಕೆ, ಅಶೋಕ್ ಕುಮಾರ್ ಕೊಡವೂರು, ಎಂ.ಎ.ಗಫೂರ್ ಸೇರಿದಂತೆ ಜಿಲ್ಲೆಯ ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago