ಕಳ್ಳರ ಕೃತ್ಯಗಮನಿಸಿದ ದೇವಸ್ಥಾನದ ಕಾವಲುಗಾರ ಬೊಬ್ಬಿಟ್ಟಾಗ ಕಳ್ಳರು ಕಾವಲುಗಾರನಿಗೆ ಚಾಕು ತೋರಿಸಿ ಜೀವಬೆದರಿಕೆಯೊಡ್ಡಿ ಪಲಾಯನಗೈದಿದ್ದಾರೆ. ತಕ್ಷಣ ಕಾವಲುಗಾರ ಸ್ಥಳೀಯ ಭಕ್ತರಿಗೆ ತಿಳಿಸಿದ್ದು, ತಕ್ಷಣ ದೇವಸ್ಥಾನದ ವಠಾರದಲ್ಲಿ ಸ್ಥಳೀಯರು ಒಟ್ಟಾಗಿದ್ದಾರೆ. ಸಿಸಿ ಟಿವಿ ಪರಿಶೀಲಿಸಿದಾಗ ಇರ್ವರು ಕಳ್ಳರು ಬಂದಿರುವುದು, ಪಲಾಯನದ ಹಾದಿ ತಿಳಿದುಬಂದಿದೆ. ತಕ್ಷಣ ಸ್ಥಳೀಯರು ಹುಡುಕಾಟ ನಡೆಸಿ ಕಡಿಯಾಳಿ ಪೆಟ್ರೋಲ್ ಬಂಕ್ ಬಳಿ ಇರ್ವರನ್ನು ವಶಕ್ಕೆ ಪಡೆದಿದ್ದಾರೆ.
ಕಳ್ಳರು ಓಡುತ್ತ ಸಾಗುವಾಗ ಒರ್ವ ಕಳ್ಳನಿಗೆ ಮೂರ್ಛೆ ಬಂದು ಧರೆಗುಳಿದಿದ್ದಾನೆ. ಮೂರ್ಛೆಹೋಗಿರುವ ಕಳ್ಳನ ಉಪಚರಿಸುತ್ತಿದ್ದ ಮತ್ತೊಬ್ಬ ಕಳ್ಳನು, ಓಡಲು ಯತ್ನಿಸಿದರೂ ಸಿಗುವಂತಾಯಿತು. ಮೂರ್ಛೆ ವ್ಯಾಧಿ ಉಲ್ಭಣಿಸಿ ಗಂಭೀರ ಸ್ಥಿತಿಯಲ್ಲಿದ್ದ ಕಳ್ಳನಿಗೆ, ಸ್ಥಳೀಯರು ಕಳ್ಳತನಕ್ಕೆ ತಂದಿರುವ ಕಬ್ಬಿಣದ ಸಲಕರಣೆಗಳನ್ನು ಕೈಗೆ ನೀಡಿ ಕಳ್ಳನಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ. ಕರೆಯ ಮೆರೆಗೆ ಸ್ಥಳಕ್ಕೆ ಬಂದಿರುವ ಸಮಾಜಸೇವಕ ನಿತ್ಯಾನಂದ ಒಳಕಾಡುವರು ಸ್ಥಳೀಯರ ಸಹಕಾರದಿಂದ ಮೂರ್ಛೆಹೋಗಿರುವ ಕಳ್ಳನನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿದ್ದಾರೆ. ಮತ್ತೊಬ್ಬ ಕಳ್ಳನನ್ನು ಸ್ಥಳೀಯರು ಪೋಲಿಸರಿಗೆ ಒಪ್ಪಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…