Featured

ಉಡುಪಿ:  ಕಡಿಯಾಳಿ ಮಹಿಷಮರ್ಧಿನಿ ದೇವಾಸ್ಥನದಲ್ಲಿ ಕಳ್ಳತನಕ್ಕೆ ಯತ್ನ; ಇಬ್ಬರು ಪೊಲೀಸರ ವಶಕ್ಕೆ – vishwanews24

ಉಡುಪಿ:  ಕಡಿಯಾಳಿ ಮಹಿಷಮರ್ಧಿನಿ ದೇವಸ್ಥಾನದಲ್ಲಿ‌ ಕಳ್ಳತನಕ್ಕೆ ಯತ್ನ..

ಮೂರ್ಛೆ ಹೋಗಿ ಸಿಕ್ಕಿಬಿದ್ದ ಕಳ್ಳರು

ಉಡುಪಿ: ಕಡಿಯಾಳಿ ಮಹಿಷಮರ್ಧಿನಿ ದೇವಾಸ್ಥನದ‌ ಹೆಬ್ಬಾಗಿಲಿನ‌ ಬೀಗ ಮುರಿದು ಕಳ್ಳತನಗೈಯುಲು ನಡೆಸಿದ ಯತ್ನವು ಶುಕ್ರವಾರ ತಡರಾತ್ರಿ 3 ಗಂಟೆಗೆ ನಡೆದಿದೆ.

ಕಳ್ಳರ ಕೃತ್ಯಗಮನಿಸಿದ‌ ದೇವಸ್ಥಾನದ ಕಾವಲುಗಾರ ಬೊಬ್ಬಿಟ್ಟಾಗ ಕಳ್ಳರು ಕಾವಲುಗಾರನಿಗೆ ಚಾಕು ತೋರಿಸಿ ಜೀವಬೆದರಿಕೆಯೊಡ್ಡಿ ಪಲಾಯನಗೈದಿದ್ದಾರೆ. ತಕ್ಷಣ ಕಾವಲುಗಾರ ಸ್ಥಳೀಯ ಭಕ್ತರಿಗೆ ತಿಳಿಸಿದ್ದು, ತಕ್ಷಣ ದೇವಸ್ಥಾನದ ವಠಾರದಲ್ಲಿ ಸ್ಥಳೀಯರು ಒಟ್ಟಾಗಿದ್ದಾರೆ. ಸಿಸಿ ಟಿವಿ ಪರಿಶೀಲಿಸಿದಾಗ ಇರ್ವರು ಕಳ್ಳರು ಬಂದಿರುವುದು, ಪಲಾಯನದ ಹಾದಿ ತಿಳಿದುಬಂದಿದೆ. ತಕ್ಷಣ ಸ್ಥಳೀಯರು ಹುಡುಕಾಟ ನಡೆಸಿ ಕಡಿಯಾಳಿ ಪೆಟ್ರೋಲ್ ಬಂಕ್ ಬಳಿ‌ ಇರ್ವರನ್ನು ವಶಕ್ಕೆ ಪಡೆದಿದ್ದಾರೆ.

ಕಳ್ಳರು ಓಡುತ್ತ ಸಾಗುವಾಗ ಒರ್ವ ಕಳ್ಳನಿಗೆ ಮೂರ್ಛೆ ಬಂದು ಧರೆಗುಳಿದಿದ್ದಾನೆ. ಮೂರ್ಛೆಹೋಗಿರುವ ಕಳ್ಳನ ಉಪಚರಿಸುತ್ತಿದ್ದ ಮತ್ತೊಬ್ಬ ಕಳ್ಳನು‌, ಓಡಲು ಯತ್ನಿಸಿದರೂ ಸಿಗುವಂತಾಯಿತು. ಮೂರ್ಛೆ ವ್ಯಾಧಿ ಉಲ್ಭಣಿಸಿ ಗಂಭೀರ ಸ್ಥಿತಿಯಲ್ಲಿದ್ದ ಕಳ್ಳನಿಗೆ, ಸ್ಥಳೀಯರು ಕಳ್ಳತನಕ್ಕೆ‌ ತಂದಿರುವ ಕಬ್ಬಿಣದ ಸಲಕರಣೆಗಳನ್ನು ಕೈಗೆ ನೀಡಿ ಕಳ್ಳನಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ. ಕರೆಯ ಮೆರೆಗೆ ಸ್ಥಳಕ್ಕೆ ಬಂದಿರುವ ಸಮಾಜಸೇವಕ ನಿತ್ಯಾನಂದ ಒಳಕಾಡುವರು ಸ್ಥಳೀಯರ ಸಹಕಾರದಿಂದ ಮೂರ್ಛೆಹೋಗಿರುವ ಕಳ್ಳನನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿದ್ದಾರೆ. ಮತ್ತೊಬ್ಬ ಕಳ್ಳನನ್ನು ಸ್ಥಳೀಯರು ಪೋಲಿಸರಿಗೆ ಒಪ್ಪಿಸಿದ್ದಾರೆ.

 

Vishwa News 24

Recent Posts

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ – vishwanews24

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1.37…

2 hours ago

ಬಾರ್, ಪಬ್ ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  – vishwanews24

ಬಾರ್, ಪಬ್‍ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  ಬೆಂಗಳೂರು : ಬಾರ್,…

2 hours ago

ಕಾಂಗ್ರೆಸ್ ಬಡವರ ಪಕ್ಷ ; ಶಾಲು, ಹೂವು ಹಾಕುವ ಬದಲು ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್ ಸಲಹೆ – vishwanews24

ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…

2 hours ago

ಹಾವೇರಿ : ಸ್ವಯಂ ಉದ್ಯೋಗದ ಹೆಸರಲ್ಲಿ ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ – vishwanews24

ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…

2 hours ago

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ – vishwanews24

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…

2 hours ago

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು – vishwanews24

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…

2 hours ago