Featured

ಉಡುಪಿ: ಕಡಿಯಾಳಿ ಶ್ರೀ ಮಹಿಷಮರ್ಧಿನಿ ದೇವಾಲಯಕ್ಕೆ ಭೇಟಿ ನೀಡಿದ ಸಚಿವೆ ಶೋಭಾ ಕರಂದ್ಲಾಜೆ – Vishwanews24

ಉಡುಪಿ: ಕಡಿಯಾಳಿ ಶ್ರೀ ಮಹಿಷಮರ್ಧಿನಿ ದೇವಾಲಯಕ್ಕೆ ಭೇಟಿ ನೀಡಿದ ಸಚಿವೆ ಶೋಭಾ ಕರಂದ್ಲಾಜೆ

ಉಡುಪಿ: ಬ್ರಹ್ಮಕಲಶೋತ್ಸವ ವೈಭವದಿಂದ ಸಂಪನ್ನಗೊಂಡ ಕಡಿಯಾಳಿ ಶ್ರೀ ಮಹಿಷಮರ್ಧಿನಿ ದೇವಾಲಯಕ್ಕೆ ಇಂದು ಕೇಂದ್ರ ರೈತರ ಕಲ್ಯಾಣ ಮತ್ತು ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ದೇವರ ದರ್ಶನ ಮಾಡಿ ಪ್ರಸಾದ ಸ್ವೀಕರಿಸಿದರು.

ದೇಗುಲದ ಕಾಮಗಾರಿ ವೀಕ್ಷಿಸಿ ಹರ್ಷ ವ್ಯಕ್ತಪಡಿಸಿದ ಸಚಿವೆ ಕಡಿಯಾಳಿ ಮಹಿಷಮರ್ದಿನಿ ದೇಗುಲದ ಶಿಲ್ಪಕಲೆ, ತಿರುಗುವ ಮುಚ್ಚಿಗೆ, ಕಾವ್ಯಶಿಲ್ಪ ಮತ್ತು ಕರಸೇವಕರ ಮೂಲಕ ದೇಗುಲದ ತಳಪಾಯ ಮತ್ತು ನಿರಂತರ ಶಿಸ್ತುಬದ್ಧ ಸ್ವಯಂಸೇವಕರ ಪಡೆ ಕೇವಲ ರಾಜ್ಯ ಮಾತ್ರವಲ್ಲದೆ ರಾಷ್ಟ್ರಕ್ಕೆ ಮಾದರಿಯಾಗಿದೆ. ಈ ರೀತಿಯ ಭವ್ಯ ದೇಗುಲ ಗ್ರಾಮಸ್ಥರು ಮತ್ತು ದೇವರ ಪರಮ ಭಕ್ತರು ಸೇರಿ ಕಟ್ಟಿ ಭಗವಂತನಿಗೆ ಸಮರ್ಪಣೆ ಮಾಡಿರುವುದು ಸರ್ವರಿಗೂ ಜಗನ್ಮಾತೆ ಮಹಿಷಮರ್ದಿನಿ ಸನ್ಮಂಗಲ ಉಂಟು ಮಾಡಲಿ ಎಂದು ಹೇಳಿದರು.

ತಾನು ಕೂಡ ಈ ಕರಸೇವೆಯಲ್ಲಿ ಸ್ವಯಂಸೇವಕಿಯಾಗಿ ಭಾಗವಹಿಸಿರುವುದು ತನ್ನ ಭಾಗ್ಯ ಎಂದು ನೆನಪಿಸಿಕೊಂಡರು. ಈ ಸಂದರ್ಭದಲ್ಲಿ ದೇವ ಸೇವೆ ಸಮಾಜ ಸೇವೆ ಎಂಬ ವಿಶಿಷ್ಟ ಪರಿಕಲ್ಪನೆಯಲ್ಲಿ ಪ್ರಚಾರಕ್ಕೆ ಬಳಸಿದ ಕೊಡೆಯನ್ನು ಉಡುಪಿ ನಿವಾಸಿ ಶರ್ವಾಣಿಯವರಿಗೆ ಹಸ್ತಾಂತರಿಸಲಾಯಿತು.

ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ,ರಾಘವೇಂದ್ರ ಕಿಣಿ ದೇವಳದ ಕಾಮಗಾರಿಯ ವಿವರಣೆ ನೀಡಿದರು.

ದೇವಳದ ಪ್ರಧಾನ ಅರ್ಚಕ ಕೆ ರಾಧಾಕೃಷ್ಣ ಉಪಾಧ್ಯಾಯ, ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನ ಮಂಡಳಿಯ ಸದಸ್ಯರಾದ ಸಂಧ್ಯಾ ಪುಭು, ಶಶಿಕಲಾ ಭರತ್, ಮಂಜುನಾಥ್ ಹೆಬ್ಬಾರ್, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಮಂಡಳಿಯ ಸದಸ್ಯರಾದ ಸಂಧ್ಯಾ ರಮೇಶ್ ನಗರಸಭಾ ಸದಸ್ಯರಾದ ಗೀತಾ ಶೇಟ್,ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷರಾದ ಭಾರತಿ ಚಂದ್ರಶೇಖರ್, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯದರ್ಶಿ ಸುಜಾತ ಸತೀಶ್, ಚೇತನಾ ಚಂದ್ರಶೇಖರ್ ಪ್ರಭು, ಸಾಮಾಜಿಕ ಧುರೀಣ ಪುದೀಪ್ ರಾವ್,ದೇವಸ್ಥಾನದ ಅಧಿಕಾರಿ ಗಂಗಾಧರ ಹೆಗ್ಡೆ ಉಪಸ್ಥಿತರಿದ್ದರು.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

9 minutes ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

27 minutes ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

36 minutes ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

52 minutes ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

1 hour ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

2 hours ago