ಉಡುಪಿ

ಉಡುಪಿ :ಕನ್ನಡ ಬಳಕೆ ಕಡ್ಡಾಯ : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

ಉಡುಪಿ : ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳು, ಖಾಸಗಿ ಸಂಸ್ಥೆಗಳು, ಉದ್ದಿಮೆಗಳು, ಕಾರ್ಖಾನೆಗಳಲ್ಲಿ ಕನ್ನಡ ಬಳಕೆ ಕಡ್ಡಾಯ : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

ಉಡುಪಿ : ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳು, ಖಾಸಗಿ ಸಂಸ್ಥೆಗಳು, ಉದ್ದಿಮೆಗಳು, ಕಾರ್ಖಾನೆಗಳಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಸಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಅವರು ಶನಿವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ , ಜಿಲ್ಲಾ ಮಟ್ಟದ ಕನ್ನಡ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಸ್ತುತ ಕನ್ನಡ ಕಾಯಕ ವರ್ಷವನ್ನು ಆಚರಿಸಲಾಗುತ್ತಿದ್ದು, ಈ ಕುರಿತು ಸರ್ಕಾರದಿಂದ ನೀಡಿರುವ ಅಧಿಕೃತ ಚಿಹ್ನೆಯನ್ನು ಎಲ್ಲಾ ಸರ್ಕಾರಿ ಇಲಾಖೆಗಳು ತಮ್ಮ ದೈನಂದಿನ ಪತ್ರ ವ್ಯವಹಾರಗಳಲ್ಲಿ ಕಡ್ಡಾಯವಾಗಿ ಬಳಸುವಂತೆ ಸೂಚನೆ ನೀಡಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಇಲಾಖೆಗಳು ತಮ್ಮ ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್, ಟ್ವಿಟರ್, ನಲ್ಲಿ ಕನ್ನಡವನ್ನು ಪ್ರಧಾನವಾಗಿ ಬಳಸಬೇಕು, ಗಣಕಯಂತ್ರದಲ್ಲಿ ಸಂಪೂರ್ಣವಾಗಿ ಕನ್ನಡ ತಂತ್ರಾ0ಶವನ್ನು ಅಳವಡಿಸಬೇಕು, ವಾಹನಗಳಲ್ಲಿ ಸಂಖ್ಯಾಫಲಕ, ಸರ್ಕಾರಿ ವಾಹನಗಳ ನಾಮಫಲಕಗಳಲ್ಲಿ , ಮೈಲುಗಳಲ್ಲಿ, ಹೆದ್ದಾರಿ ಫಲಕಗಳಲ್ಲಿ ಕನ್ನಡವನ್ನು ಪ್ರಧಾನವಾಗಿ ಬಳಸಬೇಕು , ಜಿಲ್ಲಾ ಪಂಚಾಯತ್ ನ ಕೆ.ಡಿ.ಪಿ ಸಭೆಗಳಲ್ಲಿ ಕನ್ನಡವನ್ನು ಒಂದು ಅಂಶವಾಗಿ ಚರ್ಚೆ ಮಾಡಬೇಕು ಎಂದರು.

ಇದನ್ನೂ ಓದಿ :ಉಡುಪಿ: ಅನರ್ಹರ ಪಡಿತರ ಚೀಟಿ ಹಿಂದಿರುಗಿಸಲು ಏ. 15 ಕೊನೆಯ ದಿನ : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24

ಜಿಲ್ಲೆಯ ಎಲ್ಲಾ ಅಂಗಡಿಗಳು ಕಂಪೆನಿ-ಕಚೇರಿ, ಹೋಟೆಲ್‌ಗಳು, ವಾಣಿಜ್ಯ ಸಂಕೀರ್ಣಗಳು, ಚಿತ್ರಮಂದಿರಗಳ ನಾಮಫಲಕಗಳಲ್ಲಿ ಶೇಕಡ 60 ರಷ್ಟು ಭಾಗ ಕಡ್ಡಾಯವಾಗಿ ಕನ್ನಡವನ್ನು ಹೊಂದಿರಬೇಕು. ಸರ್ಕಾರಿ ಇಲಾಖೆಗಳು ಆಂಗ್ಲಭಾಷೆಯಲ್ಲಿ ವಾರ್ಷಿಕದರಪಟ್ಟಿ, ಅಂದಾಜು ಪಟ್ಟಿ, ಟೆಂಡರ್‌ಗಳನ್ನು ಪತ್ರಿಕೆಗಳಿಗೆ ನೀಡುತ್ತಿರುವ ಬಗ್ಗೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದರು.

ಸರ್ಕಾರಿ ಶಾಲೆಗಳಲ್ಲಿ ಶಾಲೆಗಳ ದುರಸ್ತಿ, ಗ್ರಂಥಾಲಯ, ಗುಣಮಟ್ಟದ ಶಿಕ್ಷಣ, ಮೂಲಸೌಲಭ್ಯ ಅಭಿವೃದ್ಧಿಗೊಳಿಸಬೇಕು ಎಂದ ಅವರು , ಜಿಲ್ಲೆಯ ಎಲ್ಲಾ ಅನುದಾನಿತ ಮತ್ತು ಅನುದಾನ ರಹಿತ ಖಾಸಗಿ ಶಾಲೆಗಳು ಒಳಗೊಂಡ0ತೆ ಮತ್ತು ಕೇಂದ್ರೀಯ ವಿದ್ಯಾಲಯಗಳಲ್ಲಿ ಕನ್ನಡವನ್ನು ಒಂದು ಭಾಷೆಯಾಗಿ ಕಲಿಸುತ್ತಿರುವ ಬಗ್ಗೆ ಪರಿಶೀಲಿಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ನಗರಸಭೆ ವ್ಯಾಪ್ತಿಯ ಗೋಡೆಗಳಲ್ಲಿ ಕನ್ನಡ ಕವಿಗಳ ಚಿತ್ರಗಳನ್ನು ಹಾಗೂ ಕನ್ನಡ ಅಕ್ಷರ ಮಾಲೆಗಳನ್ನು ರಚಿಸುವ ಮೂಲಕ ಕನ್ನಡ ಜಾಗೃತಿ ಮೂಡಿಸುವಂತೆ ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದ ಡಿಸಿ, ಎಲ್ಲಾ ಬ್ಯಾಂಕುಗಳಲ್ಲಿ ಅರ್ಜಿ ನಮೂನೆಗಳನ್ನು ಕನ್ನಡದಲ್ಲಿ ಮುದ್ರಿಸುವ ಕುರಿತಂತೆ ಲೀಡ್ ಬ್ಯಾಂಕ್ ಮೆನೇಜರ್ ಗೆ ಸೂಚನೆ ನೀಡಿದರು..

ಇದನ್ನೂ ಓದಿ :ಉಳ್ಳಾಲ : ನೇತ್ರಾವತಿ ಸೇತುವೆಯಲ್ಲಿ ಕಾರು- ರಿಕ್ಷಾ ನಡುವೆ ಭೀಕರ ರಸ್ತೆ ಅಪಘಾತ, ರಿಕ್ಷಾ ಚಾಲಕ ದಾರುಣ ಸಾವು -Vishwanews24

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿದೇರ್ಶಕಕುಮಾರ ಬೇಕ್ಕೆರಿ ಮಾತನಾಡಿ ಕನ್ನಡವನ್ನು ಉಳಿಸಿ ಬೆಳೆಸುವ ದೃಷ್ಟಿಯಿಂದ ಆಡಳಿತದ ಎಲ್ಲಾ ವಲಯಗಳಲ್ಲಿ ಕನ್ನಡಪರ ಆದೇಶಗಳನ್ನು ಸಮರ್ಪಕವಾಗಿ ಕಾರ್ಯಗತಗೊಳಿಸುವುದು ಕನ್ನಡ ಪರ ಆದೇಶ ಮತ್ತು ಸುತ್ತೋಲೆಗಳ ಸಂಕಲನವು ಕನ್ನಡ ಅಭಿವೃದ್ಧಿ ಪ್ರಾಧಿಕಾರದಜಾಲತಾಣದಲ್ಲಿ ಲಭ್ಯವಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ., ಕನ್ನಡ ಜಾಗೃತಿ ಸಮಿತಿಯ ಸದಸ್ಯರಾದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ , ರಂಗಭೂಮಿ (ರಿ) ನ ಪ್ರದೀಪ್‌ಚಂದ್ರ ಕುತ್ಪಾಡಿ, ಡಾ.ಕಾತ್ಯಾಯಿನಿ ಕುಂಜಿಬೆಟ್ಟು, ದೀಪಿಕಾ ಭಟ್, ಶಿಲ್ಪಾ ಜೋಶಿ ಆತ್ರಾಡಿ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ :ಜಿಲ್ಲೆಯಲ್ಲಿ ಏ.16 ರಿಂದ 30 ರವರೆಗೆ ಜಂತುಹುಳು ನಿವಾರಣಾ ಮಾತ್ರೆ ವಿತರಣೆ : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24

Vishwa News 24

Recent Posts

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ ; ಅರ್ಜಿ ಆಹ್ವಾನ – vishwanews24

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…

2 minutes ago

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  – vishwanews24

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…

8 minutes ago

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

15 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

24 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

24 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

24 hours ago