ಉಡುಪಿ: ಕನ್ನಡ ಸಾಹಿತ್ಯ ಲೋಕದ ಹಿರಿಯ ಚಿಂತಕ, ಪ್ರಖ್ಯಾತ ವಿಮರ್ಶಕ ಹಾಗೂ ಜನಪರ ಹೋರಾಟಗಾರರಾದ ಜಿ .ರಾಜಶೇಖರ್(75) ಅವರು ಅನಾರೋಗ್ಯದಿಂದ ಬುಧವಾರ ಉಡುಪಿಯ ಖಾಸಗಿ ಆಶ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕಳೆದ ಎರಡು ವರ್ಷಗಳಿಂದ ಅನಾರೋಗ್ಯ ಪೀಡಿತರಾಗಿದ್ದ ರಾಜಶೇಖರ್ ಅವರು ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದರು. ಇತ್ತೀಚೆಗೆ ಆರೋಗ್ಯ ಗಂಭೀರವಾದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿ, ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ರಾತ್ರಿ 11:15ಕ್ಕೆ ಕೊನೆಯುಸಿರೆಳೆದಿದ್ದಾರೆ. ರಾಜಶೇಖರ್ ಅವರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.
ರಾಜಶೇಖರ್ ಅವರು 1946ರಲ್ಲಿ ಜನಿಸಿದರು. ನಂತರ ಉಡುಪಿಯಲ್ಲಿ ಪದವಿವರೆಗಿನ ವಿದ್ಯಾಭ್ಯಾಸ ಮುಗಿಸಿ ಕೆಲಕಾಲ ಶಿಕ್ಷಕರಾಗಿ ಕೆಲಸ ಮಾಡಿ ನಂತರ ಎಲ್‍ಐಸಿಯಲ್ಲಿ ಕಾರ್ಯನಿರ್ವಹಿಸಿದ್ದರು. ಸಾಹಿತ್ಯ -ಸಮಾಜ ಹಾಗೂ ಸಾಂಸ್ಕೃತಿಕ ರಾಜಕಾರಣ ಸೇರಿದಂತೆ ಅವರು ನಿರಂತರವಾಗಿ ಬರೆಯುತ್ತಿದ್ದರು. ಅಷ್ಟೇ ಅಲ್ಲದೆ ಸಮಕಾಲೀನ ತುರ್ತಿನ ವಿದ್ಯಮಾನಗಳ ಬಗ್ಗೆಯೂ ಕೂಡ ಬರೆಯುತ್ತಿದ್ದರು.
ರಾಜಶೇಖರ ಅವರ ಬಹುವಚನ ಭಾರತ ಕೃತಿಗೆ 2015ರಲ್ಲಿ ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿತ್ತು. ಆದರೆ ಅದನ್ನು ಅವರು ಸ್ವೀಕರಿಸಲು ನಿರಾಕರಿಸಿದ್ದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…