ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಕರಾವಳಿಯ ಜನರು ನಾಳೆ ಮನೆಯಿಂದ ಹೊರಬಂದಾಗ ಗರಿಷ್ಠ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಈ ಜಿಲ್ಲೆಗಳಲ್ಲಿ ನಾಳೆ ಭಾರೀ ಪ್ರಮಾಣದ ಮಳೆ ಬೀಳುವ ಸಾಧ್ಯತೆ ಇದೆ. ನಾಳೆ ಮಾತ್ರವಲ್ಲದೆ ಶುಕ್ರವಾರಕ್ಕೂ ಮಳೆ ಮುಂದುವರೆಯಲಿದೆ. ಸುಮಾರು 30 ತಾಸಿನ ಭಾರೀ ಮಳೆಗೆ ತಯಾರಾಗಲು ಈ ಜಿಲ್ಲೆಗಳ ಜನರಿಗೆ ಸೂಚಿಸಲಾಗಿದೆ.
ನಡುವೆ ದಕ್ಷಿಣ ಒಳನಾಡಿನಲ್ಲೂ ಮುಂಗಾರು ಮಳೆಯ ಪ್ರಮಾಣ ಹೆಚ್ಚಿದ್ದು, ಕೊಡುಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ ಭಾರೀ ಅವಾಂತರ ಸೃಷ್ಟಿಸಿದೆ. ಕುದುರೆಮುಖ ಸಮೀಪ ರಾಜ್ಯ ಹೆದ್ದಾರಿಗೆ ಬಿದ್ದ ಮರ ಕಾರಣ ಕೆಲಕಾಲ ಸಂಚಾರ ವ್ಯವಸ್ಥೆ ಅಸ್ತವ್ಯಸ್ಥಗೊಂಡಿತ್ತು. ಕಳಸ – ಮಂಗಳೂರು ರಸ್ತೆಯಲ್ಲೂ ಭಾರೀ ಮಳೆಯಿಂದಾಗಿ ಸಂಚಾರ ವ್ಯವಸ್ಥೆ ಸ್ಥಗಿತಗೊಂಡಿತ್ತು.
ಕೊಡಗಿನಲ್ಲಿ ಭಾರಿ ಮಳೆಯಿಂದಾಗಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ. ಮಡಿಕೇರಿ ತಾಲ್ಲೂಕಿನ ಮೂರ್ನಾಡು ಸಮೀಪದ ಬಲಮುರಿ ಪುರಾತನ ಸೇತುವೆ ಜಲಾವೃತಗೊಂಡಿದೆ.
ನಾಳೆ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹೊರಡಿಸಲಾಗಿದ್ದು ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಮೈಸೂರು, ಬೆಳಗಾವಿ, ಧಾರವಾಡ, ಹಾವೇರಿ ಮತ್ತು ಹಾಸನ ಜಿಲ್ಲೆಗಳಿಗೆ ಎಲ್ಲೋ ಅಲೆರ್ಟ್ ಹೊರಡಿಸಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…