ಉಡುಪಿ : ಕರಾವಳಿಯಲ್ಲಿ ಮುಂದಿನ 5 ದಿನ ಭಾರೀ ಮಳೆ ; ಎಲ್ಲೋ ಅಲರ್ಟ್ ಘೋಷಣೆ -Vishwanews24

Featured, ಉಡುಪಿ

ಉಡುಪಿ : ಕರಾವಳಿಯಲ್ಲಿ ಮುಂದಿನ 5 ದಿನ ಭಾರೀ ಮಳೆ ; ಎಲ್ಲೋ ಅಲರ್ಟ್ ಘೋಷಣೆ -Vishwanews24

ಉಡುಪಿ : ಕರಾವಳಿಯಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗಲಿದ್ದು “ಎಲ್ಲೋ ಅಲರ್ಟ್” ಘೋಷಣೆ ಮಾಡಲಾಗಿದೆ.

ಇಂದಿನಿಂದ ಅ. 16 ರವರೆಗೆ ಕರಾವಳಿಯಾದ್ಯಂತ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಅವಧಿಯಲ್ಲಿ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೂ 64.5 ರಿಂದ 115.5 ಮಿ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮಾಹಿತಿ ನೀಡಿದೆ.