Featured

ಉಡುಪಿ: ಕರಾವಳಿ ಜಂಕ್ಷನ್ ನಿಂದ ಮಲ್ಪೆ ವರೆಗಿನ ರಸ್ತೆಯ ಹೊಂಡ ಮುಚ್ಚಲು ಕ್ರಮ ; ತಕ್ಷಣದಲ್ಲಿ ಕಾಮಗಾರಿ ಆರಂಭ : ಶಾಸಕ ರಘುಪತಿ ಭಟ್ – Vishwanews24

ಉಡುಪಿ: ಕರಾವಳಿ ಜಂಕ್ಷನ್ ನಿಂದ ಮಲ್ಪೆ ವರೆಗಿನ ರಸ್ತೆಯ ಹೊಂಡ ಮುಚ್ಚಲು ಕ್ರಮ ; ತಕ್ಷಣದಲ್ಲಿ ಕಾಮಗಾರಿ ಆರಂಭ : ಶಾಸಕ ರಘುಪತಿ ಭಟ್

ಉಡುಪಿ: ಸುಗಮ ಸಂಚಾರದ ದೃಷ್ಟಿಯಿಂದ ಉಡುಪಿಯ ಕರಾವಳಿ ಜಂಕ್ಷನ್ ನಿಂದ ಮಲ್ಪೆ ವರೆಗಿನ ರಸ್ತೆಯ ಹೊಂಡಗಳನ್ನು ಮುಚ್ಚಲು ಸೂಚಿಸಲಾಗಿದ್ದು, ತಕ್ಷಣದಲ್ಲಿ ಈ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಶಾಸಕ ಕೆ ರಘುಪತಿ ಭಟ್ ಅವರು ಹೇಳಿದ್ದಾರೆ

ತೀರ್ಥಹಳ್ಳಿ – ಮಲ್ಪೆ ರಾಷ್ಟ್ರೀಯ ಹೆದ್ದಾರಿ – 169 ಎ ಇದರ ಹೆಬ್ರಿಯಿಂದ ಮಲ್ಪೆ ವರಿಗಿನ ರಸ್ತೆ ಅಭಿವೃದ್ಧಿಗೆ ಈಗಾಗಲೇ ರೂ. 320.00 ಕೋಟಿ ಅನುದಾನ ಮಂಜೂರಾಗಿ ಟೆಂಡರ್ ಪ್ರಕ್ರಿಯೆ ಮುಗಿದು ನ್ಯಾಷನಲ್ ತೀರ್ಥಹಳ್ಳಿ ಜೆವಿ ಇವರಿಗೆ ಕಾಮಗಾರಿ ಕೈಗೊಳ್ಳಲು ಕಾರ್ಯಾದೇಶ ನೀಡಲಾಗಿದೆ. ಇದರಲ್ಲಿ ಕರಾವಳಿ ಜಂಕ್ಷನ್ ನಿಂದ ಮಲ್ಪೆ ವರೆಗಿನ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಭೂಸ್ವಾಧೀನ ಸೇರಿದಂತೆ ರಸ್ತೆ ಅಭಿವೃದ್ಧಿಗೆ ರೂ 80.00 ಕೋಟಿ ಮಂಜೂರಾಗಿದ್ದು, ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡ ಕೂಡಲೇ ಕಾಮಗಾರಿ ಆರಂಭಗೊಳ್ಳಲಿದೆ. ಅಲ್ಲಿಯವರೆಗೆ ಸುಗಮ ಸಂಚಾರಕ್ಕಾಗಿ ರಸ್ತೆಯ ಹೊಂಡಗಳನ್ನು ಮುಚ್ಚಿ ತಾತ್ಕಾಲಿಕ ಪರಿಹಾರ ಕಾಮಗಾರಿಯನ್ನು ಸದರಿ ಸಂಸ್ಥೆಯೇ ನಡೆಸುತ್ತದೆ. ಯಾರೂ ಗೊಂದಲಕ್ಕೆ ಒಳಗಾಗಬಾರದು ಎಂದು ಮಾಧ್ಯಮ ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.

ಮಂಗಳೂರು: ಹಲವು ಪಿಎಫ್ಐ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು – Vishwnews24

Vishwa News 24

Recent Posts

ಅ.1 ರಿಂದ ಜನನ ಮತ್ತು ಮರಣ ನೋಂದಣಿ ವಿಳಂಬಕ್ಕೆ ಹೊಸ ನಿಯಮ ಜಾರಿಗೆ – vishwanews24

ಅ.1 ರಿಂದ ಜನನ ಮತ್ತು ಮರಣ ನೋಂದಣಿ ವಿಳಂಬಕ್ಕೆ ಹೊಸ ನಿಯಮ ಜಾರಿಗೆ ನವದೆಹಲಿ: ಜನನ ಮತ್ತು ಮರಣ ನೋಂದಣಿಯನ್ನು ವಿಳಂಬವಾಗಿ…

8 hours ago

ರೇಷನ್ ಕಾರ್ಡ್​ ಇ-ಕೆವೈಸಿ ದಿನಾಂಕ ವಿಸ್ತರಣೆ: ಸರ್ಕಾರದಿಂದ ಮಹತ್ವದ ಆದೇಶ – vishwanews24

ರಾಜ್ಯ ಸರ್ಕಾರ ಪಡಿತರ ಕಾರ್ಡ್​ದಾರರಿಗೆ ಬಿಗ್ ಗುಡ್​ ನ್ಯೂಸ್ ಇ-ಕೆವೈಸಿಗೆ ಅಕ್ಟೋಬರ್ 20ರವರೆಗೆ ಗಡುವು ವಿಸ್ತರಣೆ ನ್ಯಾಯಬೆಲೆ ಅಂಗಡಿಗಳ ವೇಳಾಪಟ್ಟಿ…

8 hours ago

ಗಣಪತಿ ಮೆರವಣಿಗೆ ವಿಚಾರಕ್ಕೆ ಧಮ್ಕಿ : ಇನ್ಸ್‌ಪೆಕ್ಟರ್‌ ಯಾವುದೇ ತಪ್ಪು ಮಾಡಿಲ್ಲ : ಯತೀಂದ್ರ ಸಿದ್ದರಾಮಯ್ಯ – vishwanews24

ಇನ್ಸ್‌ಪೆಕ್ಟರ್‌ ಧನಂಜಯ್ ಯಾವುದೇ ತಪ್ಪು ಮಾಡಿಲ್ಲ; ಅವರು ಬುದ್ಧಿವಾದ ಹೇಳಿದ್ದಾರೆ  ತಪ್ಪೇ ಮಾಡದ ಇನ್ಸ್‌ಪೆಕ್ಟರ್‌ ಮೇಲೆ ಕ್ರಮ ಯಾಕೆ ತೆಗೆದುಕೊಳ್ಳಬೇಕು..…

9 hours ago

ಕುಂದಾಪುರ : ಬೇಳೂರು ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ ; ಕಡತಗಳ ಪರಿಶೀಲನೆ – vishwanews24

ಕುಂದಾಪುರ : ಬೇಳೂರು ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ ; ಕಡತಗಳ ಪರಿಶೀಲನೆ ಉಡುಪಿ: ಕಟ್ಟಡ ಪರವಾನಗಿ ನೀಡುವಲ್ಲಿ ವಿಳಂಬ ಸೇರಿದಂತೆ…

9 hours ago

‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿಯನ್ನು ಕರ್ನಾಟಕದ ಜನತೆಗೆ ಅರ್ಪಿಸಿದ ಹಿರಿಯ ನಟ ಅನಂತ್ ನಾಗ್ – vishwanews24

'ದಾದಾಸಾಹೇಬ್ ಫಾಲ್ಕೆ' ಪ್ರಶಸ್ತಿಯನ್ನು ಕರ್ನಾಟಕದ ಜನತೆಗೆ ಅರ್ಪಿಸಿದ ಹಿರಿಯ ನಟ ಅನಂತ್ ನಾಗ್ ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ನೀಡಿದ ಅಪಾರ…

10 hours ago

ಕೊಣಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ; ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ – vishwanews24

ಕೊಣಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ; ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ ಕೊಣಾಜೆ  : ಚಾಲಕನ ನಿಯಂತ್ರಣ…

11 hours ago